• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸೋಲಿಗೆ ತಲೆ ಕೊಡ್ತಾರಾ ಡಿಸಿಎಂ ಡಿ.ಕೆ ಶಿವಕುಮಾರ್..?

ಕೃಷ್ಣ ಮಣಿ by ಕೃಷ್ಣ ಮಣಿ
June 26, 2024
in Top Story, ರಾಜಕೀಯ, ವಿಶೇಷ
0
ಸೋಲಿಗೆ ತಲೆ ಕೊಡ್ತಾರಾ ಡಿಸಿಎಂ ಡಿ.ಕೆ ಶಿವಕುಮಾರ್..?
Share on WhatsAppShare on FacebookShare on Telegram

ರಾಮನಗರ ಜಿಲ್ಲೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದೆ. ಈ ಕ್ಷೇತ್ರ ಪ್ರತಿನಿಧಿಸಿದ್ದ ಮಾಜಿ ಸಿಎಂ ಕುಮಾರಸ್ವಾಮಿ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಕೇಂದ್ರದಲ್ಲಿ ಮಂತ್ರಿ ಆದ ಬಳಿಕ ಚನ್ನಪಟ್ಟಣಕ್ಕೆ ರಾಜೀನಾಮೆ ನೀಡಿದ್ದಾರೆ. ಹೀಗಾಗಿ ಮುಂದಿನ 6 ತಿಂಗಳ ಒಳಗಾಗಿ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಬೇಕಿದೆ. ಈಗಾಗಲೇ ಡಿ.ಕೆ ಶಿವಕುಮಾರ್​ ಚನ್ನಪಟ್ಟಣದಲ್ಲಿ ಪ್ರವಾಸ ಶುರು ಮಾಡಿದ್ದು, ಟೆಂಪಲ್​ ರನ್​ ಮೂಲಕ ಮತದಾರರನ್ನು ಸೆಳೆಯುವ ಕಸರತ್ತು ಮಾಡಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಸಹೋದರ ಡಿ.ಕೆ ಸುರೇಶ್​ ಸೋಲಿಗೆ ಸೇಡು ತೀರಿಸಿಕೊಳ್ಳಲು ಡಿ.ಕೆ ಶಿವಕುಮಾರ್​ ತಂತ್ರಗಾರಿಕೆ ಮಾಡಿದ್ದಾರೆ ಎನ್ನಲಾಗ್ತಿದೆ.

ADVERTISEMENT

ಚನ್ನಪಟ್ಟಣದಲ್ಲಿ ಸ್ವತಃ ಡಿ.ಕೆ ಶಿವಕುಮಾರ್​​ ಅಖಾಡಕ್ಕೆ ಇಳಿದು ಗೆಲುವು ಸಾಧಿಸಿದ ಬಳಿಕ ಕನಕಪುರ ಕ್ಷೇತ್ರವನ್ನು ಸಹೋದರ ಡಿ.ಕೆ ಸುರೇಶ್​ಗೆ ಬಿಟ್ಟುಕೊಡಲಿದ್ದಾರೆ ಎನ್ನುವ ಚರ್ಚೆಗಳು ಶುರುವಾಗಿವೆ. ಅಷ್ಟಕ್ಕೂ ಚನ್ನಪಟ್ಟಣ ಪ್ರವಾಸದ ವೇಳೆ ನನ್ನ ಹೊಸ ರಾಜಕೀಯ ಚನ್ನಪಟ್ಟಣದಿಂದ ಆರಂಭ ಎಂದಿದ್ದ ಮಾತು ಡಿ.ಕೆ ಶಿವಕುಮಾರ್​ ಸ್ಪರ್ಧೆ ಮಾಡುವ ಇಂಗಿತ ಎಂದೇ ಬಣ್ಣಿಸಲಾಗ್ತಿದೆ. ಈಗಾಗಲೇ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ ಪಕ್ಷದ ಅಭ್ಯರ್ಥಿ ಆಗಿದ್ದ ಡಿ.ಕೆ ಸುರೇಶ್​ ಸೋಲನ್ನಪ್ಪಿದ್ದು, ಇದೀಗ ಚನ್ನಪಟ್ಟಣದಲ್ಲಿ ಸ್ಪರ್ಧೆ ಮಾಡಿದರೆ ಅಧಿಕಾರ ದಾಹ ಎನ್ನುವ ಕಾರಣಕ್ಕೆ ಸೋಲು ಅನುಭವಿಸುವ ಸಾಧ್ಯತೆಯಿದೆ. ಇದೇ ಕಾರಣದಿಂದ ಡಿಸಿಎಂ ಡಿ.ಕೆ ಶಿವಕುಮಾರ್​ ಸ್ಪರ್ಧೆ ಮಾಡಿ, ಗೆದ್ದ ಬಳಿಕ ಕನಕಪುರಕ್ಕೆ ಸುರೇಶ್​ ಪಟ್ಟಾಭಿಷೇಕ ಎಂದು ಸುರೇಶ್​ ಬೆಂಬಲಿಗರ ಮಾತುಕತೆ ನಡೆದಿದೆ.

ಈಗಾಗಲೇ ರಾಮನಗರ ಜಿಲ್ಲೆಯಲ್ಲಿ ಕನಕಪುರ, ರಾಮನಗರ, ಮಾಗಡಿಯಲ್ಲಿ ಗೆಲುವು ದಕ್ಕಿಸಿಕೊಂಡಿರುವ ಕಾಂಗ್ರೆಸ್​​, ಚನ್ನಪಟ್ಟಣದಲ್ಲಿ ಜೆಡಿಎಸ್​ ಎದುರು ಸೋಲುಂಡಿತ್ತು. ಇದೀಗ ಕುಮಾರಸ್ವಾಮಿ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಿ ಕೇಂದ್ರದಲ್ಲಿ ಸಚಿವರಾದ ಬಳಿಕ ತೆರವಾಗಿರುವ ಸ್ಥಾನವನ್ನು ಕಾಂಗ್ರೆಸ್​ ಗೆದ್ದುಕೊಂಡರೆ ಇಡೀ ಜಿಲ್ಲೆಯಲ್ಲಿ ಕಾಂಗ್ರೆಸ್​ ಅಧಿಪತ್ಯ ಸಾಧಿಸಿದಂತೆ ಆಗಲಿದೆ ಎನ್ನುವುದು ಡಿಕೆ ಶಿವಕುಮಾರ್​ ಲೆಕ್ಕಾಚಾರ. ಆದರೆ ಈ ಲೆಕ್ಕಾಚಾರದಲ್ಲಿ ಮತ್ತೆ ಡಿ.ಕೆ ಶಿವಕುಮಾರ್​ ಹಳಿ ತಪ್ಪುವ ಸಾಧ್ಯತೆಗಳು ಹೆಚ್ಚಿವೆ. ಇದಕ್ಕೆ ಕಾರಣ ಮುಖ್ಯಮಂತ್ರಿ ಸ್ಥಾನದ ಮೇಲೆ ಡಿ.ಕೆ ಶಿವಕುಮಾರ್​ ಇಟ್ಟಿರುವ ಕಣ್ಣು.

ಎರಡೂವರೆ ವರ್ಷಕ್ಕೆ ಮುಖ್ಯಮಂತ್ರಿ ಬದಲಾವಣೆ ಅನ್ನೋದು ಡಿ.ಕೆ ಶಿವಕುಮಾರ್​ ಬೆಂಬಲಿಗರ ಅಂಬೋಣ. ಡಿ.ಕೆ ಶಿವಕುಮಾರ್​ ಶಕ್ತಿ ಕುಗ್ಗಿಸಬೇಕು ಎಂದು ಈಗಾಗಲೇ ಕಾಂಗ್ರೆಸ್​ನಲ್ಲೇ ಒಂದು ಗುಂಪು ಕೆಲಸ ಮಾಡುತ್ತಿದೆ. ಲೋಕಸಭಾ ಚುನಾವಣೆಯಲ್ಲೂ ಆ ಗುಂಪು ಕೆಲಸ ಮಾಡಿದೆ. ಅದೇ ಕಾರಣಕ್ಕೆ ಡಿ.ಕೆ ಸುರೇಶ್​ಗೇ ಭಾರೀ ಅಂತರದ ಸೋಲಾಗಿದೆ ಎನ್ನುವುದು ಕಾಂಗ್ರೆಸ್​ನಲ್ಲೇ ಕೇಳಿ ಬರ್ತಿರೋ ಮಾತು. ಇದೀಗ ಚನ್ನಪಟ್ಟಣದಲ್ಲಿ ಡಿ.ಕೆ ಶಿವಕುಮಾರ್​ ಅಥವಾ ಡಿ.ಕೆ ಸುರೇಶ್​ ಸ್ಪರ್ಧೆ ಮಾಡಿದರೂ ಕಾಂಗ್ರೆಸ್​ ನಾಯಕರುಗಳೇ ಸೋಲಿನ ಹಣೆಪಟ್ಟಿ ಕಟ್ಟುವುದಕ್ಕೆ ಸಜ್ಜಾಗಿದ್ದಾರೆ ಎನ್ನಲಾಗ್ತಿದೆ. ಲೋಕಸಭಾ ಚುನಾವಣೆ ಬಳಿಕ ಚನ್ನಪಟ್ಟಣದಲ್ಲೂ ಕಾಂಗ್ರೆಸ್​ ಸೋಲುಂಡರೆ ಡಿ.ಕೆ ಶಿವಕುಮಾರ್​ ಬಲ ಸಂಪೂರ್ಣವಾಗಿ ಕುಗ್ಗಲಿದ್ದು, ಮುಖ್ಯಮಂತ್ರಿ ಸ್ಥಾನದತ್ತ ಕಣ್ಣನ್ನೂ ಹಾಯಿಸದಂತೆ ಮಾಡುತ್ತಾರೆ ಎನ್ನಲಾಗ್ತಿದೆ. ಆದರೂ ರಾಜಕೀಯ ತಂತ್ರಗಾರಿಕೆಯಲ್ಲಿ ಗೆಲ್ಲೋದ್ಯಾರು ಅನ್ನೋದನ್ನು ಕಾದು ನೋಡ್ಬೇಕು.

ಕೃಷ್ಣಮಣಿ..

Tags: #CMSiddaramaiah #DCMDKShivakumar #modi #PrajwalRevanna RASHOK ##PrajwalRevannaPenDriveCase #jdspratidh#CMSiddaramaiahBJPCongress PartyDKShivakumarDKSureshಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

13 ವರ್ಷದಿಂದ  ತಲೆಮರೆಸಿಕೊಂಡಿದ್ದ ರೌಡಿಶೀಟರ್ ಕೊನೆಗೂ ಅರೆಸ್ಟ್ ! 

Next Post

ಡಿಕೆ ಬ್ರದರ್ಸ್ ನಾಟಕಗಳೆಲ್ಲ ಚನ್ನಪಟ್ಟಣದ ಜನರಿಗೆ ಗೊತ್ತಿದೆ : ವಿಪಕ್ಷ ನಾಯಕ ಆರ್ ಅಶೋಕ್

Related Posts

ಮದ್ಯ ತೆರಿಗೆ, ಶಿಕ್ಷಣ ಮತ್ತು ಸರ್ಕಾರದ ನೀತಿಗಳ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ- ಸಿಎಂ ಬಿಯರ್ ಗುಟ್ಟು-ರಟ್ಟು!
ರಾಜಕೀಯ

ಮದ್ಯ ತೆರಿಗೆ, ಶಿಕ್ಷಣ ಮತ್ತು ಸರ್ಕಾರದ ನೀತಿಗಳ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ- ಸಿಎಂ ಬಿಯರ್ ಗುಟ್ಟು-ರಟ್ಟು!

by ಪ್ರತಿಧ್ವನಿ
April 16, 2026
0

ಬೆಂಗಳೂರು: ರಾಜ್ಯ ಸರ್ಕಾರದ ಮದ್ಯ ತೆರಿಗೆ ನೀತಿ, ಶಿಕ್ಷಣ ವ್ಯವಸ್ಥೆ ಹಾಗೂ ಆರ್ಥಿಕ ಸ್ಥಿತಿಗತಿಗಳ ಕುರಿತು ಬಿಜೆಪಿ ಎಂಎಲ್‌ಸಿ ಎಚ್ ವಿಶ್ವನಾಥ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...

Read moreDetails
ಇಂದು ಸಂಸತ್ತಿನಲ್ಲಿ ಐತಿಹಾಸಿಕ ತಿದ್ದುಪಡಿ ವಿಧೇಯಕ ಮಂಡನೆ

ಇಂದು ಸಂಸತ್ತಿನಲ್ಲಿ ಐತಿಹಾಸಿಕ ತಿದ್ದುಪಡಿ ವಿಧೇಯಕ ಮಂಡನೆ

April 16, 2026
ಸುಡುವುದಿಲ್ಲ, ಹೂಳುವುದಿಲ್ಲ… ಈ ಗ್ರಾಮದ ವಿಚಿತ್ರ ಅಂತ್ಯಕ್ರಿಯೆ ಪದ್ಧತಿ!

ಸುಡುವುದಿಲ್ಲ, ಹೂಳುವುದಿಲ್ಲ… ಈ ಗ್ರಾಮದ ವಿಚಿತ್ರ ಅಂತ್ಯಕ್ರಿಯೆ ಪದ್ಧತಿ!

April 15, 2026
ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಶಾಸಕ ವಿನಯ್ ಕುಲಕರ್ಣಿ ದೋಷಿ-ನಿರ್ದೋಷಿ ?

ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಶಾಸಕ ವಿನಯ್ ಕುಲಕರ್ಣಿ ದೋಷಿ-ನಿರ್ದೋಷಿ ?

April 15, 2026
ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

April 14, 2026
Next Post
ಡಿಕೆ ಬ್ರದರ್ಸ್ ನಾಟಕಗಳೆಲ್ಲ ಚನ್ನಪಟ್ಟಣದ ಜನರಿಗೆ ಗೊತ್ತಿದೆ : ವಿಪಕ್ಷ ನಾಯಕ ಆರ್ ಅಶೋಕ್

ಡಿಕೆ ಬ್ರದರ್ಸ್ ನಾಟಕಗಳೆಲ್ಲ ಚನ್ನಪಟ್ಟಣದ ಜನರಿಗೆ ಗೊತ್ತಿದೆ : ವಿಪಕ್ಷ ನಾಯಕ ಆರ್ ಅಶೋಕ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada