• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

CM Siddaramaiah: ನಮ್ಮ ಸರ್ಕಾರ ಬಿದ್ದೋಗತ್ತೆ ಅಂತ ಸೋತ ಗಿರಾಕಿಗಳು ಹೇಳುತ್ತಿದ್ದಾರೆ. ನಮ್ಮ ಸರ್ಕಾರ ಐದು ವರ್ಷ ಬಂಡೆ ರೀತಿ ಇರತ್ತೆ: ಸಿಎಂ

ಪ್ರತಿಧ್ವನಿ by ಪ್ರತಿಧ್ವನಿ
June 30, 2025
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ
0
Share on WhatsAppShare on FacebookShare on Telegram

2028 ರಲ್ಲೂ ನಾವೇ ಗೆದ್ದು ಅಧಿಕಾರಕ್ಕೆ ಬರ್ತೀವಿ: ಸಿ.ಎಂ ಸ್ಪಷ್ಟ ಘೋಷಣೆ
ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕೊಂಡೇ ಅಧಿಕಾರಕ್ಕೆ ಬರಬೇಕು. ಸ್ವಂತ ಶಕ್ತಿಯಿಂದ ಸಾಧ್ಯವೇ ಇಲ್ಲ: ಸಿ.ಎಂ ವ್ಯಂಗ್ಯ
ಬಿಜೆಪಿ, ಜೆಡಿಎಸ್ ನವರು ಜನರನ್ನು ದಡ್ಡರೆಂದು ಭಾವಿಸಬಾರದು. ಜನರಿಗೆ ಬುರುಡೆ ಬಿಡೋದು ನಿಲ್ಲಿಸಬೇಕು: ಸಿಎಂ
ನೀರಾವರಿಗೆ ಈ ಸರ್ಕಾರ 25 ಸಾವಿರ ಕೊಟ್ಟಿದ್ದೇವೆ. ಬೇರೆ ಯಾವ ಸರ್ಕಾರವಾದರೂ ಕೊಟ್ಟಿತ್ತಾ : ಸಿ.ಎಂ ಪ್ರಶ್ನೆ
ಎಲ್ಲಾ ಜಲಾಶಯಗಳೂ ತುಂಬಿವೆ. ಎಲ್ಲಾ ನಾಲೆಗಳಿಗೂ ತಕ್ಷಣದಿಂದ ನೀರು ಹರಿಸಿ: ವೇದಿಕೆಯಿಂದಲೇ ಆದೇಶ ನೀಡಿದ ಸಿಎಂ
2028 ರಲ್ಲೂ ನಾವೇ ಗೆದ್ದು ಅಧಿಕಾರಕ್ಕೆ ಬರ್ತೀವಿ: ಸಿ.ಎಂ ಸ್ಪಷ್ಟ ಘೋಷಣೆ

ADVERTISEMENT

ಕೆಆರ್ ಎಸ್ ಜೂ 30: ನಮ್ಮ ಸರ್ಕಾರ ಬಿದ್ದೋಗತ್ತೆ ಅಂತ ಸೋತ ಗಿರಾಕಿಗಳು ಹೇಳುತ್ತಿದ್ದಾರೆ. ನಮ್ಮ ಸರ್ಕಾರ ಐದು ವರ್ಷ ಬಂಡೆ ರೀತಿ ಇರತ್ತೆ. 2028 ರಲ್ಲೂ ನಾವೇ ಗೆದ್ದು ಅಧಿಕಾರಕ್ಕೆ ಬರ್ತೀವಿ ಎಂದು ಘೋಷಿಸಿದ ಮುಖ್ಯಮಂತ್ರಿಗಳು ನೀರಾವರಿಗೆ ನಮ್ಮ ಈ ಸರ್ಕಾರ 25 ಸಾವಿರ ಕೊಟ್ಟಿದೆ. ಬೇರೆ ಯಾವ ಸರ್ಕಾರವಾದರೂ ಈ ಮಟ್ಟದ ಅನುದಾನ ಕೊಟ್ಟಿತ್ತಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು.

ಕೃಷ್ಣರಾಜಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸೋತ ಗಿರಾಕಿಗಳು ಸರ್ಕಾರ ಬಿದ್ದೋಗತ್ತೆ ಎಂದು ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ. ನನಗೂ , DCM ಶಿವಕುಮಾರ್ ಅವರಿಗೂ ಸರಿ ಇಲ್ಲ ಎಂದು ಬುರುಡೆ ಬಿಡುತ್ತಿದ್ದಾರೆ. ನಾನು ಮತ್ತು ಶಿವಕುಮಾರ್ ಇಬ್ಬರೂ ಒಟ್ಟಾಗಿ, ಗಟ್ಟಿಯಾಗಿದ್ದೀವಿ. ನಮ್ಮ ಸರ್ಕಾರವೂ ಐದು ವರ್ಷ ಗ್ಯಾರಂಟಿಯಾಗಿ ಗಟ್ಟಿಯಾಗಿ ಇರುತ್ತದೆ. 2028 ರಲ್ಲೂ ಗೆದ್ದು ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದು ಘೋಷಿಸಿದರು.

ಅಭಿವೃದ್ಧಿಗೆ ಹಣ ಇಲ್ಲ, ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಬುರುಡೆ ಬಿಡುತ್ತಿರುವ ಬಿಜೆಪಿಯವರು ನಾಡಿನ ಜನರಿಗೆ ಉತ್ತರಿಸಬೇಕು. ದಿವಾಳಿ ಆಗಿದ್ದರೆ 25 ಸಾವಿರ ಕೋಟಿ ರೂಪಾಯಿ ಎಲ್ಲಿಂದ ಬಂತು ಎಂದು ಪ್ರಶ್ನಿಸಿದರು.

ಕೃಷಿ ಪ್ರಗತಿಗಾಗಿ ವರ್ಷಕ್ಕೆ 19000 ಸಾವಿರ ಕೋಟಿ ಪಂಪ್ ಸೆಟ್ ಸಬ್ಸಿಡಿಯನ್ನು ರೈತರಿಗೆ ಕೊಟ್ಟಿದ್ದೇವೆ. 92 ವರ್ಷಗಳ ಬಳಿಕ ಜೂನ್ ತಿಂಗಳಲ್ಲೇ ಭರ್ತಿ ಆಗಿರುವ ಕೆ ಅರ್ ಎಸ್ ನಲ್ಲಿ ಸ್ಮಾರಕ ನಿರ್ಮಿಸಿ ಎಂದು ಕಾವೇರಿ ನಿಗಮದ ಎಂಡಿ ಅವರಿಗೆ ಸಿಎಂ ಸೂಚನೆ ನೀಡಿದರು.

ಕೃಷ್ಣರಾಜಸಾಗರದ ಒಟ್ಟು 124 ಅಡಿ ಸಾಮರ್ಥ್ಯದಲ್ಲಿ 120.90 ಅಡಿ ಭರ್ತಿ ಆಗಿದೆ. ಅಣೆಕಟ್ಟೆಗೆ 49 TMC ನೀರಿನ ಸಾಮರ್ಥ್ಯವಿದೆ. 193 ವರ್ಷಗಳಲ್ಲಿ 76 ಬಾರಿ ಭರ್ತಿಯಾಗಿದೆ. 2023-24 ರಲ್ಲಿ ಬರಗಾಲವಿತ್ತು. ಈ ಕಾರಣಕ್ಕೇ “ಸಿದ್ದರಾಮಯ್ಯ ಅವರ ಕಾಲುಗುಣ ಚನ್ನಾಗಿಲ್ಲ, ಕಾಂಗ್ರೆಸ್ ಸರ್ಕಾರದ ಕಾಲುಗುಣ ಸರಿಯಿಲ್ಲ” ಎಂದು ವಿರೋಧ ಪಕ್ಷಗಳು ಟೀಕಿಸಿದ್ದವು. ಈಗ ಕಳೆದು ಎರಡು ವರ್ಷಗಳಿಂದ ರಾಜ್ಯದಲ್ಲಿ ಮಳೆ, ಬೆಳೆ ಉತ್ತಮವಾಗಿ ಆಗುತ್ತಿದೆ. ವಿರೋಧ ಪಕ್ಷಗಳು ಮೂಡಾತ್ಮರು ಈಗ ಏನು ಹೇಳ್ತಾರೆ ಎಂದು ಸಿಎಂ ಅಣಕಿಸಿದರು.

ನಾವು ಈ ಬಾರಿ ಕಾವೇರಿ ಅಭಿವೃದ್ಧಿ ನಿಗಮಕ್ಕೆ 3000 ಕೋಟಿ ಹಣ ಕೊಟ್ಟಿದ್ದೇವೆ. ಈಗ ಟೀಕಿಸುತ್ತಿರುವವರು ಅಧಿಕಾರದಲ್ಲಿದ್ದಾಗ ಕಾವೇರಿ ನಿಗಮಕ್ಕೆ ಹಣ ಕೊಡಲಿಲ್ಲ ಎಂದು ಟೀಕಿಸಿದರು.

ಸುಳ್ಳು ಹೇಳುವ ಚಾಳಿಯಲ್ಲಿರುವ ಬಿಜೆಪಿ ಗೆ ರಾಜ್ಯದ ಜನ ಪೂರ್ಣ ಅಧಿಕಾರವನ್ನೇ ಕೊಟ್ಟಿಲ್ಲ. ಆಪರೇಷನ್ ಕಮಲ ಮಾಡಿ ಎರಡು ಬಾರಿ ಅಧಿಕಾರಕ್ಕೆ ಬಂದರು. ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕಿಕೊಂಡೇ ಅಧಿಕಾರಕ್ಕೆ ಬರಬೇಕು. ಸ್ವಂತ ಶಕ್ತಿಯಿಂದ ಸಾಧ್ಯವೇ ಇಲ್ಲ ಎಂದರು.

ನಾನು ಸುಳ್ಳು ಹೇಳಿದ್ರೆ ಜನರಿಗೆ ಗೊತ್ತಾಗಲ್ವಾ ? ಅದಕ್ಕೇ ಬಿಜೆಪಿ, ಜೆಡಿಎಸ್ ನವರು ಜನರನ್ನು ದಡ್ಡರೆಂದು ಭಾವಿಸಬಾರದು. ಜನರಿಗೆ ಸುಳ್ಳು ಹೇಳಿ ಹೋಗಬಾರದು ಎಂದರು.

ತಾಯಿ ಕಾವೇರಿಗೆ ಪೂಜೆ ಮಾಡಿ ನಾಡಿನ ಮಳೆ, ಬೆಳೆ ಹೀಗೇ ಚನ್ನಾಗಿ ಆಗಲಿ ಎಂದು ಪ್ರಾರ್ಥಿಸಿದ್ದೇನೆ ಎಂದರು.

ನಾವು ಅಧಿಕಾರದಲ್ಲಿದ್ದಾಗ ಯಾವಾಗಲಾದರೂ ರೈತರಿಗೆ ಬೀಜ, ಗೊಬ್ಬರಕ್ಕೆ ತೊಂದರೆ ಮಾಡಿದ್ದೇವಾ? ಬೀಜ ಕೇಳಿದವರಿಗೆ ಗೋಲಿಬಾರ್ ಮಾಡಿದ್ದೇವಾ ಎಂದು ಪ್ರಶ್ನಿಸಿದರು.

ಕಾವೇರಿ ತಾಯಿ, ಚಾಮುಂಡೇಶ್ವರಿ ಕೃಪಾಕಟಾಕ್ಷದಿಂದ ರಾಜ್ಯ ಸುಭಿಕ್ಷವಾಗಿದೆ. ಎಲ್ಲಾ ಜಲಾಶಯಗಳೂ ತುಂಬಿವೆ. ಎಲ್ಲಾ ನಾಲೆಗಳಿಗೂ ತಕ್ಷಣದಿಂದ ನೀರು ಹರಿಸಲು ವೇದಿಕೆಯಿಂದಲೇ ಆದೇಶ ನೀಡಿದರು.

Tags: BJPCM Siddaramaiahcm siddaramaiah & dk shivakumarcm siddaramaiah and dk shivakumarDCM DK Shivakumardk shivakumar & siddaramaiahdk shivakumar and siddaramaiahdk shivakumar on siddaramaiahdk shivakumar siddaramaiahdk shivakumar takes on siddaramaiahdk shivakumar vs siddaramaiahhd kumarswamyJDSKaveriKRSNikhil Kumarswamysiddaramaiahsiddaramaiah about dk shivakumarSiddaramaiah and DK Shivakumarsiddaramaiah dk shivakumarsiddaramaiah dk shivakumar fightsiddaramaiah dk shivakumar krssiddaramaiah on dk shivakumarsiddaramaiah vs dk shivakumar
Previous Post

Golder Star Ganesh: ವಿಶೇಷ ಭಾವಚಿತ್ರಗಳನ್ನು ಹಂಚಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಹುಟ್ಟುಹಬ್ಬದ ಉಡುಗೊರೆ ನೀಡಿದ ಗೋಲ್ಡನ್ ಸ್ಟಾರ್ .

Next Post

DK Shivakumar: ಕಾವೇರಿ ಜಲಾನಯನ ಪ್ರದೇಶಕ್ಕೆ 2 ಸಾವಿರ ಕೊಟಿ ಅನುದಾನ: ಡಿಸಿಎಂ ಡಿ.ಕೆ.ಶಿವಕುಮಾರ್

Related Posts

₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ
Top Story

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

by ಪ್ರತಿಧ್ವನಿ
April 10, 2026
0

ಬಾಹ್ಯಾಕಾಶ ಪ್ರಿಯರಿಗೆ ಸಂತಸದ ಸುದ್ದಿ ಕೇಳಿಬಂದಿದ್ದು, ಒಮ್ಮೆ ಸೌರಮಂಡಲದ ಒಂಬತ್ತನೇ ಗ್ರಹವೆಂದು ಪರಿಗಣಿಸಲ್ಪಟ್ಟಿದ್ದ Pluto ಮತ್ತೆ ಗ್ರಹ ಸ್ಥಾನಮಾನ ಪಡೆಯುವ ಸಾಧ್ಯತೆ ಕುರಿತು ಹೊಸ ಚರ್ಚೆಗಳು ಆರಂಭವಾಗಿವೆ.ಈ...

Read moreDetails
₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ

₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ

April 10, 2026
ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

April 10, 2026
ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

April 10, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
Next Post

DK Shivakumar: ಕಾವೇರಿ ಜಲಾನಯನ ಪ್ರದೇಶಕ್ಕೆ 2 ಸಾವಿರ ಕೊಟಿ ಅನುದಾನ: ಡಿಸಿಎಂ ಡಿ.ಕೆ.ಶಿವಕುಮಾರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada