• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಇನ್ವೆಸ್ಟ್ ಕರ್ನಾಟಕ ಉದ್ಘಾಟನೆ ಮಾಡಿದ ರಕ್ಷಣಾ ಮಂತ್ರಿ ರಾಜನಾಥ್ ಸಿಂಗ್

ಪ್ರತಿಧ್ವನಿ by ಪ್ರತಿಧ್ವನಿ
February 11, 2025
in Top Story, ಕರ್ನಾಟಕ, ದೇಶ, ರಾಜಕೀಯ, ವಿಶೇಷ
0
ಇನ್ವೆಸ್ಟ್ ಕರ್ನಾಟಕ ಉದ್ಘಾಟನೆ ಮಾಡಿದ ರಕ್ಷಣಾ ಮಂತ್ರಿ ರಾಜನಾಥ್ ಸಿಂಗ್
Share on WhatsAppShare on FacebookShare on Telegram
This image has an empty alt attribute; its file name is WhatsApp-Image-2025-02-10-at-10.22.14-AM-2-2.jpeg

ಇನ್ವೆಸ್ಟ್ ಕರ್ನಾಟಕ ಕ್ಕೇ ಉದ್ಘಾಟನೆ ಮಾಡಿದ ರಕ್ಷಣಾ ಮಂತ್ರಿ ರಾಜನಾಥ್ ಸಿಂಗ್(Rajnath Singh)

ADVERTISEMENT
  • ಬೆಂಗಳೂರು ಅರಮನೆ ಮೈದಾನದಲ್ಲಿ ಫೆಬ್ರುವರಿ 11 ರಿಂದ 14ರವರೆಗೆ ಸಮಾವೇಶ
  • ಮೊದಲ ಬಾರಿಗೆ ಇನ್ವೆಸ್ಟ್‌ ಕರ್ನಾಟಕ ಪ್ರಶಸ್ತಿ ಪ್ರದಾನ ಸೇರಿ ಹಲವು ಪ್ರಥಮಗಳ ಹೆಗ್ಗಳಿಕೆ
  • ರಾಜ್ಯದ ಆರ್ಥಿಕತೆಯ ಭವಿಷ್ಯ ರೂಪಿಸಲು ಶ್ರೀಕಾರ
  • ಹೂಡಿಕೆದಾರರಿಗೆ ರಾಜ್ಯ ಸರ್ಕಾರದ ಕೆಂಪು ರತ್ನಗಂಬಳಿಯ ಸ್ವಾಗತ
  • ರಾಜ್ಯದ ಅರ್ಥವ್ಯವಸ್ಥೆಯ ʼಪ್ರಗತಿಯ ಮರುಕಲ್ಪನೆʼಗೆ ನೀರೆರೆಯಲಿರುವ ಸಮಾವೇಶ
  • ಆರ್ಥಿಕ ಪ್ರಗತಿಯ ಪಯಣಕ್ಕೆ ವೇಗೋತ್ಕರ್ಷ ನಿರೀಕ್ಷೆ

ಬೆಂಗಳೂರು: ಮಾಹಿತಿ ಹಾಗೂ ಜೈವಿಕ ತಂತ್ರಜ್ಞಾನ, ಎಲೆಕ್ಟ್ರಾನಿಕ್ಸ್‌, ನವೋದ್ಯಮ, ಏರೊಸ್ಪೇಸ್‌ ಆ್ಯಂಡ್‌ ಡಿಫೆನ್ಸ್‌ ಮತ್ತಿತರ ಕ್ಷೇತ್ರಗಳಲ್ಲಿ ವಿಶ್ವದಾದ್ಯಂತ ಪ್ರಖ್ಯಾತಿಯ ಛಾಪು ಮೂಡಿಸಿರುವ ಕರ್ನಾಟಕವು, ʼಪ್ರಗತಿಯ ಮರುಕಲ್ಪನೆʼ (Reimagining Growth) ಧ್ಯೇಯದ ಇನ್ವೆಸ್ಟ್‌ ಕರ್ನಾಟಕ 2025ರ ಮೂಲಕ ವಿಶ್ವದಾದ್ಯಂತದ ಹೂಡಿಕೆದಾರರನ್ನು ರಾಜ್ಯದತ್ತ ಚುಂಬಕದಂತೆ ಸೆಳೆಯಲು ಸಜ್ಜಾಗಿದೆ.

ಮಂಗಳವಾರದಿಂದ ಶುಕ್ರವಾರದವರೆಗೆ (ಫೆ. 11ರಿಂದ 14) ನಡೆಯಲಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಭಾಗವಹಿಸಲಿರುವ ಉದ್ದಿಮೆ ದಿಗ್ಗಜರು, ಹೂಡಿಕೆದಾರರು, ನವೋದ್ಯಮಗಳ ಕನಸುಗಾರರು, ನೀತಿ ನಿರೂಪಣೆಯ ಚಿಂತಕರಿಗೆ ಬೆಂಗಳೂರು ಅರಮನೆ ಮೈದಾನದಲ್ಲಿ ಕೆಂಪುರತ್ನಗಂಬಳಿಯ ಸ್ವಾಗತ ಕೋರುವ ಸಿದ್ಧತೆಗಳೆಲ್ಲ ಪೂರ್ಣಗೊಂಡಿವೆ.

HD Revanna: ಸಂಸದ ಶ್ರೇಯಸ್ ಪಟೇಲ್‌ಗೆ ವಿರುದ್ಧHD ರೇವಣ್ಣ ವಾಗ್ದಾಳಿ..! #shreyaspatil #prajwalrevanna

ʼಮಂಗಳವಾರ ಮಧ್ಯಾಹ್ನ 4 ಗಂಟೆಗೆ ಬೆಂಗಳೂರು ಅರಮನೆ ಮೈದಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಭವ್ಯ ಸಮಾರಂಭದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್‌ ಅವರು ಸಮಾವೇಶ ಉದ್ಘಾಟಿಸಲಿದ್ದಾರೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಎಚ್.ಡಿ.ಕುಮಾರಸ್ವಾಮಿ(HD Kumaraswamy), ಶೋಭಾ ಕರಂದ್ಲಾಜೆ, ವಿ.ಸೋಮಣ್ಣ ಸೇರಿದಂತೆ ಇತರ ಗಣ್ಯರು ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ ಎಂದು ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ಅವರು ತಿಳಿಸಿದ್ದಾರೆ.

ಕೆಲವು ಕೇಂದ್ರ ಸಚಿವರು ನಾಲ್ಕು ದಿನಗಳಲ್ಲಿ ಯಾವುದಾದರೊಂದು ದಿನ ಭಾಗವಹಿಸುವ ಭರವಸೆ ನೀಡಿದ್ದಾರೆ.

ಉದ್ದಿಮೆ, ನೀತಿ ನಿರೂಪಣೆ ಹಾಗೂ ನಾವೀನ್ಯತೆ ಕ್ಷೇತ್ರದ ದಿಗ್ಗಜರ ಸಮಾಗಮಕ್ಕೆ, ಚಿಂತನ ಮಂಥನಕ್ಕೆ ಇದು ವೇದಿಕೆ ಒದಗಿಸಲಿದೆ. ಬುಧವಾರದಿಂದ ಶುಕ್ರವಾರದವರೆಗೆ ನಡೆಯಲಿರುವ ವಿವಿಧ ವಿಚಾರಗೋಷ್ಠಿಗಳಲ್ಲಿ ವಿವಿಧ ಕ್ಷೇತ್ರಗಳ ದಿಗ್ಗಜರು ಉದ್ದಿಮೆ ಲೋಕದ ಭವಿಷ್ಯದ ಬಗೆಗಿನ ತಮ್ಮ ಒಳನೋಟಗಳನ್ನು ಹಂಚಿಕೊಳ್ಳಲಿದ್ದಾರೆ. ಪ್ರಮುಖ ಹೂಡಿಕೆ ಒಪ್ಪಂದಗಳಿಗೆ ಸಹಿ ಹಾಕಲಾಗುವುದು ʼ ಎಂದು ಅವರು‌ ವಿವರಿಸಿದ್ದಾರೆ.

ʼಸಮಾವೇಶದಲ್ಲಿ ಇದೇ ಮೊದಲ ಬಾರಿಗೆ ಇನ್ವೆಸ್ಟ್‌ ಕರ್ನಾಟಕ ಪ್ರಶಸ್ತಿ, ಎಸ್‌ಎಂಇ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ʼಎಸ್‌ಎಂಇ ಕನೆಕ್ಟ್‌(SME Connect)- 25ʼ, ವೆಂಚುರೈಸ್‌ನ ಎರಡನೆ ಆವೃತ್ತಿ ಇತರ ವಿಶೇಷತೆಗಳಾಗಿವೆ. 60ಕ್ಕೂ ಹೆಚ್ಚು ಕಂಪನಿಗಳು ಮತ್ತು ನವೋದ್ಯಮಗಳು ತಯಾರಿಕೆ, ಸಂಚಾರ ಮತ್ತು ಶುದ್ಧ ಇಂಧನ ಕ್ಷೇತ್ರಗಳಲ್ಲಿ ಗಮನಾರ್ಹ ಬದಲಾವಣೆಗೆ ಕಾರಣವಾಗುವ ತಂತ್ರಜ್ಞಾನಗಳನ್ನು ಪ್ರದರ್ಶಿಸಲಿವೆ. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಕ್ವಿನ್‌ ಸಿಟಿ-ನಲ್ಲಿ ಸಹಭಾಗಿತ್ವ ವಿಸ್ತರಿಸಲು ಆದ್ಯತೆ ನೀಡಲಾಗುವುದು.
ʼಕರ್ನಾಟಕವನ್ನು ಜಾಗತಿಕ ಬಂಡವಾಳ ಹೂಡಿಕೆಯ ಪ್ರಮುಖ ತಾಣವನ್ನಾಗಿ ಇಡೀ ವಿಶ್ವಕ್ಕೆ ಪ್ರದರ್ಶಿಸಲು, ಪಾಲುದಾರಿಕೆ ಉತ್ತೇಜಿಸಲು ಮತ್ತು ವಿವಿಧ ಕೈಗಾರಿಕಾ ವಲಯಗಳಲ್ಲಿ ನಾವೀನ್ಯತೆಗೆ ಚಾಲನೆ ನೀಡುವುದು ಸಮಾವೇಶದ ಮುಖ್ಯ ಉದ್ದೇಶವಾಗಿದೆ. ಇದು ಬಂಡವಾಳ ಹೂಡಿಕೆಗೆ ವೇದಿಕೆಯಾಗಿರುವುದರ ಜೊತೆಗೆ, ಸರ್ಕಾರ ಮತ್ತು ಉದ್ಯಮ ವಲಯದ ನಡುವಣ ಅರ್ಥಪೂರ್ಣ ಸಹಯೋಗ ಬೆಸೆಯುವುದಕ್ಕೂ ನೆರವಾಗಲಿದೆ. ವಿವಿಧ ಕೈಗಾರಿಕಾ ವಲಯಗಳಲ್ಲಿ ಜಾಗತಿಕ ಪಾಲುದಾರಿಕೆ ಬೆಳೆಸುವುದರ ಜೊತೆಗೆ, ನಾವೀನ್ಯತೆ ಮತ್ತು ಹೂಡಿಕೆ ಕೇಂದ್ರವಾಗಿರುವ ಕರ್ನಾಟಕದ ಮಹತ್ವವನ್ನು ಇಡೀ ವಿಶ್ವಕ್ಕೆ ಮತ್ತೊಮ್ಮೆ ಮನದಟ್ಟು ಮಾಡಿಕೊಡಲಿದೆ.
ʼ75ಕ್ಕೂ ಹೆಚ್ಚು ಗಣ್ಯ ಭಾಷಣಕಾರರು ಭಾಗವಹಿಸಲಿದ್ದಾರೆ. 25ಕ್ಕೂ ಹೆಚ್ಚು ತಾಂತ್ರಿಕ ಅಧಿವೇಶನಗಳು, 10ಕ್ಕೂ ಹೆಚ್ಚು ದೇಶಗಳ ಜೊತೆಗಿನ ಸಭೆ, ಮತ್ತು ಎಸ್‌ಎಂಇ ಕನೆಕ್ಟ್‌ಗೆ ಸಂಬಂಧಿಸಿದ ಸಮಾಲೋಚನೆಗಳಿಗೆ ಈ ಹೂಡಿಕೆ ಶೃಂಗಸಭೆಯು ಸಾಕ್ಷಿಯಾಗಲಿದೆ.

ʼರಾಜ್ಯಕ್ಕೆ ಭಾರಿ ಪ್ರಮಾಣದಲ್ಲಿ ಬಂಡವಾಳ ಹರಿದು ಬರಲು ಅಗತ್ಯವಾದ ಭೂಮಿಕೆಯನ್ನು ರಾಜ್ಯ ಸರ್ಕಾರವು ಹದಗೊಳಿಸಿದೆ. ಇತ್ತೀಚಿನ ವರ್ಷಗಳಲ್ಲಿ ಹತ್ತಾರು ಪ್ರಥಮಗಳನ್ನು ತನ್ನ ಮುಡಿಗೆ ಏರಿಸಿಕೊಂಡಿರುವ ಕರ್ನಾಟಕವು, ಈ ಸಮಾವೇಶದ ನೆರವಿನಿಂದ ತನ್ನ ಕೈಗಾರಿಕಾ ಪ್ರಗತಿಯ ವೇಗ ಹೆಚ್ಚಿಸಲು ದೃಢ ನಿರ್ಧಾರ ಮಾಡಿದೆʼ ಎಂದು ಸಚಿವ ಪಾಟೀಲ ಅವರು ವಿವರಿಸಿದ್ದಾರೆ.

ಫೆಬ್ರುವರಿ 12 ರಿಂದ 14ರವರೆಗೆ ಸಮಾವೇಶ ಸ್ಥಳದಲ್ಲಿ ವಿವಿಧ ವಿಚಾರಗೋಷ್ಠಿಗಳು , ಸಂವಾದ, ಸಮೂಹ ಚರ್ಚೆಗಳೂ ನಡೆಯಲಿವೆ.

  1. ಕೃತಕ ಬುದ್ಧಿಮತ್ತೆ, ಸೈಬರ್ ಸುರಕ್ಷತೆ ಮತ್ತು ಸರ್ಕಾರ: ಅನಿಶ್ಚಿತ ಜಗತ್ತಿನಲ್ಲಿ ಡಿಜಿಟಲ್ ಕ್ಷಮತೆ ನಿರ್ಮಾಣ
  2. ಕ್ಷಮತೆಯ ಮಾರ್ಗೋಪಾಯಗಳು: ಜಾಗತಿಕ ಸವಾಲುಗಳ ಮಧ್ಯೆ ಭಾರತದ ಆರ್ಥಿಕ ಬೆಳವಣಿಗೆ
  3. ಭವಿಷ್ಯಕ್ಕೆ ನಾವೀನ್ಯತೆ

  1. ಮುಂದಾಳತ್ವ: ಭಾರತದ ಭವಿಷ್ಯ ರೂಪಿಸುತ್ತಿರುವ ಯುವ ನಾವೀನ್ಯಕಾರರು- ಸಂವಾದಗಳಲ್ಲಿ ಪರಿಣತರು ತಮ್ಮ ಚಿಂತನೆಗಳನ್ನು ಮಂಡಿಸಲಿದ್ದಾರೆ.
  2. ಕೃತಕ ಬುದ್ಧಿಮತ್ತೆ ಸೀಮಾರೇಖೆ: ದೈತ್ಯ ಜಿಗಿತದಿಂದ ನೈಜ-ಪ್ರಪಂಚದ ಪ್ರಭಾವಗಳವರೆಗೆ- ಸಂವಾದ2. ವೈವಿಧ್ಯಮಯ ಪಥಗಳಿಂದ ಸಾಮಾನ್ಯ ಗುರಿಯವರೆಗೆ- ಸಮೂಹ ಚರ್ಚೆ
  3. ಪ್ರಕ್ಷುಬ್ಧತೆಯಲ್ಲಿ ಅಭಿವೃದ್ಧಿ ಸಾಧಿಸುವುದು: ಶಾಶ್ವತ ಕ್ಷಮತೆ ನಿರ್ಮಿಸುವುದರ ಸವಾಲುಗಳು ಕುರಿತು ಆಡಳಿತ ಪರಿಣತರು ತಮ್ಮ ಆಲೋಚನೆಗಳನ್ನು ಹಂಚಿಕೊಳ್ಳಲಿದ್ದಾರೆ.

Tags: adult learning theoryadult learning trendsbusinessclimate agreementclinton global initiativecontinuous learningeconomic growth centergaza progressgrowth and solidarityleadesip during pandemiclifelong learningreimagining gazareimagining industry growth: strategic partnership strategies in an era of uncertaintysuccession planningthings to do in ho chi minh citytraining podcastTrendingun environment programme
Previous Post

ಎರಡನೇ ದಿನದ ಏರ್ ಶೋಗೆ ಭರ್ಜರಿ ರೆಸ್ಪಾನ್ಸ್ – ಟ್ರಾಫಿಕ್ ಜಾಮ್ ನಿಂದ ಹೈರಾಣದ ಬೆಂಗಳೂರಿಗರು ! 

Next Post

ಮೈಸೂರು ಗಲಭೆ ಕೇಸ್..ಉದಯಗಿರಿಗೆ ಪ್ರತಾಪ್ ಸಿಂಹ ಎಂಟ್ರಿ – ಸ್ಥಳದಿಂದ ಹೊರಡುವಂತೆ ಪೊಲೀಸ್ ಮನವಿ ! 

Related Posts

ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ
ಕರ್ನಾಟಕ

ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

by ಪ್ರತಿಧ್ವನಿ
May 28, 2026
0

ಕರ್ನಾಟಕ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆಗಳು ತೀವ್ರಗೊಂಡಿರುವ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಳಿಗ್ಗೆ ಸಚಿವರಿಗಾಗಿ ವಿಶೇಷ ಉಪಹಾರ ಕೂಟ ಏರ್ಪಡಿಸಿದ್ದು, ರಾಜಕೀಯ ವಲಯದಲ್ಲಿ ಹೊಸ...

Read moreDetails
ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?

ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?

May 28, 2026
ಸಿಎಂ ರಾಜೀನಾಮೆಗೂ ಮುನ್ನ ರಾಜ್ಯಪಾಲರ ದಿಢೀರ್ ಮುಂಬೈ ಪ್ರವಾಸ! ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ

ಸಿಎಂ ರಾಜೀನಾಮೆಗೂ ಮುನ್ನ ರಾಜ್ಯಪಾಲರ ದಿಢೀರ್ ಮುಂಬೈ ಪ್ರವಾಸ! ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ

May 28, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

May 27, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಸುರ್ಜೇವಾಲಾ ಸ್ಪಷ್ಟನೆ!

May 27, 2026
Next Post
ಮೈಸೂರು ಗಲಭೆ ಕೇಸ್..ಉದಯಗಿರಿಗೆ ಪ್ರತಾಪ್ ಸಿಂಹ ಎಂಟ್ರಿ –  ಸ್ಥಳದಿಂದ ಹೊರಡುವಂತೆ ಪೊಲೀಸ್ ಮನವಿ ! 

ಮೈಸೂರು ಗಲಭೆ ಕೇಸ್..ಉದಯಗಿರಿಗೆ ಪ್ರತಾಪ್ ಸಿಂಹ ಎಂಟ್ರಿ - ಸ್ಥಳದಿಂದ ಹೊರಡುವಂತೆ ಪೊಲೀಸ್ ಮನವಿ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada