ತುಮಕೂರು: ಸೋಮವಾರ ದೆಹಲಿಯ ಕೆಂಪು ಕೋಟೆ ಬಳಿ ಸಂಭವಿಸಿದ ಸ್ಫೋಟ ಪ್ರಕರಣದಲ್ಲಿ ಕರ್ನಾಟಕದ ಓರ್ವ ವ್ಯಕ್ತಿಯನ್ನು ವಿಚಾರಣೆ ನಡೆಸಲಾಗಿದೆ ಎನ್ನುವ ವಿಚಾರ ಬೆಳಕಿಗೆ ಬಂದಿದೆ.

ಉಗ್ರ ಸಂಘಟನೆಯಲ್ಲಿ ಗುರುತಿಸಿಕೊಂಡಿರುವ ಶಂಕೆ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲೆಯ ಪಿಹೆಚ್ ಕಾಲೋನಿಯ ನಿವಾಸಿಯನ್ನು ತಿಲಕ್ ಪಾರ್ಕ್ ಠಾಣೆ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಶಂಕಿತ ವ್ಯಕ್ತಿಯನ್ನು ಎರಡು ಗಂಟೆಗಳ ಕಾಲ ವಿಚಾರಣೆ ನಡೆಸಿದ ಪೊಲೀಸರು ಬಳಿಕ ಬಿಟ್ಟು ಕಳುಹಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಇನ್ನು ಶಂಕಿತ ವ್ಯಕ್ತಿಯನ್ನು ಈ ಹಿಂದೆ ಉಗ್ರ ಸಂಘಟನೆಯ ಮುಖಂಡರಿಗೆ ತುಮಕೂರಿನಲ್ಲಿ ಸಭೆ ನಡೆಸಲು ಅವಕಾಶ ನೀಡಿದ್ದ ಆರೋಪದ ಮೇಲೆ ಎನ್ಐಎ ಅಧಿಕಾರಗಳು ಬಂಧಿಸಿದ್ದರು. ಈ ಪ್ರಕರಣದಲ್ಲಿ ದೆಹಲಿಯ ತಿಹಾರ್ ಜೈಲಿನಿದ್ದ ವ್ಯಕ್ತಿ ಕೆಲ ಸಮಯದ ಹಿಂದೆ ಬಿಡುಗಡೆಯಾಗಿ ಹುಟ್ಟೂರಿಗೆ ಮರಳಿದ್ದನು ಎನ್ನಲಾಗಿದೆ.













