ಕೋವಿಡ್ನಿಂದ ಮೃತಪಟ್ಟ ಕುಟುಂಬಕ್ಕೆ 50 ಸಾವಿರ ಪರಿಹಾರ –ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಣೆ

ಕೋವಿಡ್‌ ಬಿಕ್ಕಟ್ಟಿನಿಂದ ಜನಸಾಮಾನ್ಯರು ಸಾಕಷ್ಟು ಸಮಸ್ಯೆ ಅನುಭವಿಸುತ್ತಿದ್ದು, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಂದು ಮಹತ್ವದ  ಪ್ರಕಟಣೆ ಹೊರಡಿಸಿದ್ದಾರೆ. ಕೋವಿಡ್ ನಿಂದ ಸಾವನ್ನಪ್ಪಿದ ಕುಟುಂಬಗಳಿಗೆ ಆರ್ಥಿಕ ಪರಿಹಾರ, ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಉಚಿತ ಶಿಕ್ಷಣ, ಪಿಂಚಣಿ ಮತ್ತು ಬಡ ಕುಟುಂಬಗಳಿಗೆ ಉಚಿತ ಪಡಿತರ ನೀಡುವ ಭರವಸೆ ಕೊಟ್ಟಿದ್ದಾರೆ.

ಕೋವಿಡ್-19 ಸಾಂಕ್ರಾಮಿಕದಿಂದ ಮೃತಪಟ್ಟ ಪ್ರತಿ ಕುಟುಂಬಕ್ಕೆ ದೆಹಲಿ ಸರ್ಕಾರದಿಂದ 50 ಸಾವಿರ ಪರಿಹಾರ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಲಾಕ್ ಡೌನ್ ಸಮಯದಲ್ಲಿ ಸಂಕಷ್ಟಕ್ಕೆ ಸಿಲುಕಿದ ಬಡ ಕುಟುಂಬಗಳಿಗೆ ದೆಹಲಿ ಮುಖ್ಯಮಂತ್ರಿ ಉಚಿತ ಪಡಿತರವನ್ನು ಘೋಷಿಸಿದ್ದು,  ಈ ತಿಂಗಳು 10 ಕೆ.ಜಿ  ಉಚಿತ ಪಡಿತರ ನೀಡಲಾಗುವುದು ಎಂದಿದ್ದಾರೆ.

ಸಂಪಾದನೆ ಮಾಡುತ್ತಿದ್ದ ವ್ಯಕ್ತಿ ಮೃತಪಟ್ಟಿದ್ದರೆ ಅಂತಹ  ಕುಟುಂಬಗಳಿಗೆ ಪರಿಹಾರದ ಹಾಗು ಪ್ರತಿ ತಿಂಗಳು 2500 ಪಿಂಚಣಿಯನ್ನು ಘೋಷಿಸಲಾಗಿದೆ.

ಗಂಡ ಸತ್ತಿದ್ದರೆ ಪಿಂಚಣಿ ಹೆಂಡತಿಗೆ ನೀಡಲಾಗುವುದು, ಹೆಂಡತಿ ಸತ್ತಿದ್ದರೆ ಅದನ್ನು ಗಂಡನಿಗೆ ನೀಡಲಾಗುವುದು. ಅವಿವಾಹಿತ ವ್ಯಕ್ತಿ ಸತ್ತರೆ ಪಿಂಚಣಿ ಅವನ / ಅವಳ ಪೋಷಕರಿಗೆ ನೀಡಲಾಗುವುದು  ಎಂದು  ತಿಳಿಸಿದ್ದಾರೆ.

ಕೋವಿಡ್ ನಿಂದ ಪೋಷಕರನ್ನು ಕಳೆದುಕೊಂಡ  ಮಕ್ಕಳಿಗೆ 25 ವರ್ಷ ತುಂಬುವವರೆಗೆ ಪ್ರತಿ ತಿಂಗಳು 2,500  ಪಿಂಚಣಿ  ಹಾಗು ದೆಹಲಿ ಸರ್ಕಾರದಿಂದ ಉಚಿತ ಶಿಕ್ಷಣ ನೀಡುವ ಭರವಸೆ ನೀಡಿದ್ದಾರೆ.

  .

Related posts

Latest posts

ಬಡವರಿಗೆ ನೆರವಾಗುವುದನ್ನು ತಡೆಯುವ ಪೊಲೀಸ್ ಅಧಿಕಾರಿಗಳಿಗೆ ಬಿಜೆಪಿ ಬ್ಯಾಡ್ಜ್, ಬಾವುಟ ಕೊಡಿ; ಸರಕಾರದ ವಿರುದ್ಧ ಡಿಕೆಶಿ ಗರಂ

'ಬಿಜೆಪಿ ನಾಯಕರು ಜನರ ತೆರಿಗೆ ಹಣದಲ್ಲಿ ನೀಡುವ ಸರ್ಕಾರಿ ಆಹಾರ ಕಿಟ್, ಔಷಧಿ ಮೇಲೆ ತಮ್ಮ ಹಾಗೂ ಪ್ರಧಾನಿ ಫೋಟೋ ಹಾಕಿಕೊಂಡು ಪ್ರಚಾರ ಪಡೆಯುತ್ತಿದ್ದರೆ, ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ತಮ್ಮ ಶ್ರಮಪಟ್ಟು ದುಡಿದ...

ಸುರಕ್ಷಿತವಾಗಿ ಲಾಕ್‌ಡೌನ್ ತೆರವುಗೊಳಿಸಲು ಸರ್ಕಾರಕ್ಕೆ 10 ಶಿಫಾರಸು ನೀಡಿದ ತಜ್ಞರ ತಂಡ SAGE

ಕರ್ನಾಟಕದಲ್ಲಿ ಕರೋನಾ ನಿಯಂತ್ರಿಸಲು ಹೇರಿರುವ ಲಾಕ್‌ಡೌನ್ ಅನ್ನು ಹೇಗೆ ಸುರಕ್ಷಿತವಾಗಿ ಹಾಗೂ ಸೂಕ್ತವಾಗಿ ತೆರವುಗೊಳಿಸಬಹುದೆಂದು ತಜ್ಞರ ತಂಡವು ಸರ್ಕಾರಕ್ಕೆ ಹತ್ತು ಶಿಫಾರಸುಗಳನ್ನು ನೀಡಿದೆ. ಕೋವಿಡ್ ವಿಪತ್ತಿನ ವಿರುದ್ಧದ ಹೋರಾಟಕ್ಕೆ ರೂಪುಗೊಂಡ SAGE (ಸಮಾಜಮುಖಿ ಕಾರ್ಯಪ್ರವೃತ್ತ...

ಬೆಲೆ ಏರಿಕೆ ಮಾಡಿ ಸರ್ಕಾರ ಜನರನ್ನು ಪಿಕ್ ಪಾಕೆಟ್ ಮಾಡುತ್ತಿದೆ- ಡಿ.ಕೆ ಶಿವಕುಮಾರ್

 ಇಂಧನ ಬೆಲೆ ಏರಿಕೆ ಹಿನ್ನೆಲೆ,  ರಾಜ್ಯಾದ್ಯಂತ ಜೂನ್‌ 11 ರಿಂದ 15 ರವರೆಗೆ '100 ನಾಟ್ ಔಟ್' ಹೆಸರಲ್ಲಿ ಕಾಂಗ್ರೆಸ್‌ ಪಕ್ಷದಿಂದ ಆಂದೋಲನ ನಡೆಸಲಾಗುತ್ತಿದೆ. ರಾಜ್ಯಾದ್ಯಂತ ಇಂದು 900ಕ್ಕೂ ಹೆಚ್ಚು ಜಿ.ಪಂ, ಹೋಬಳಿ...