ನವದೆಹಲಿ(New Delhi): ಪೋಷಕರು ಹಾಗೂ ಪತ್ನಿಯೊಂದಿಗೆ ಪೊಲೀಸರಿಗಾಗಿ(Police) ಕಾಯುತ್ತಿದ್ದೇನೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal) ಹೇಳಿದ್ದಾರೆ.

ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ (Swati Maliwal) ಅವರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಕ್ಸ್ನಲ್ಲಿ ಕೇಜ್ರಿವಾಲ್ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. ಪೋಷಕರು, ಪತ್ನಿಯೊಂದಿಗೆ ಕುಳಿತಿರುವ ವಿಡಿಯೋ ಹಂಚಿಕೊಂಡಿದ್ದಾರೆ.

ನಾನು, ನನ್ನ ಪೋಷಕರು ಮತ್ತು ಹೆಂಡತಿಯೊಂದಿಗೆ ಪೊಲೀಸರಿಗಾಗಿ ಕಾಯುತ್ತಿದ್ದೇನೆ. ನಿನ್ನೆ ಪೊಲೀಸರು ಕರೆ ಮಾಡಿ ನನ್ನ ಪೋಷಕರ ವಿಚಾರಣೆಗೆ ಸಮಯ ಕೇಳಿದ್ದಾರೆ. ಅವರು ಬರುತ್ತಾರೋ ಇಲ್ಲವೋ ಎಂಬ ಬಗ್ಗೆ ಇನ್ನೂ ಮಾಹಿತಿ ನೀಡಿಲ್ಲ ಎಂದು ಹೇಳಿದ್ದಾರೆ.

ಸ್ವಾತಿ ಮಲಿವಾಲ್ ಅವರ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ ಆಪ್ತ ಬಿಭವ್ ಕುಮಾರ್ (Bibhav Kumar) ಅವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಬಗ್ಗೆ ಕೇಜ್ರಿವಾಲ್ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.