ದೆಹಲಿಯಲ್ಲಿ ವಾರಾಂತ್ಯ ಕರ್ಪ್ಯೂ ಹಾಗೂ ಹಾಲಿ ಜಾರಿಯಲ್ಲಿರುವ ಕಠಿಣ ನಿಯಮಗಳನ್ನು ಹಿಂಪಡೆಯಲು ದೆಹಲಿ ಸರ್ಕಾರ ನಿರ್ಧರಿಸಿರುವುದಾಗಿ ತಿಳಿದು ಬಂದಿದೆ. ಖಾಸಗಿ ಕಚೇರಿಗಳಲ್ಲಿ ಶೇ.50ರಷ್ಟು ಸಿಬ್ಬಂದಿಯೊಂದಿಗೆ ಕಾರ್ಯ ನಿರ್ವಹಿಸಲು ಅನುಮತಿ ನೀಡಿದೆ ಎಂದು ಅಧಿಕೃತ ಸರ್ಕಾರಿ ಸುದ್ದಿ ಮೂಲಗಳು ತಿಳಿಸಿವೆ.
ಈ ಕುರಿತು ದೆಹಲಿ ಸರ್ಕಾರ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್‌ರವರಿಗೆ ಪ್ರಸ್ತಾವನೆಯನ್ನು ಸಲ್ಲಿಸಿದೆ ಎಂದು ತಿಳಿದು ಬಂದಿದೆ. ಸದ್ಯ ದೆಹಲಿಯಲ್ಲಿ ಸೋಂಕಿನ ಪ್ರಮಾಣ ಇಳಿಕೆಯಾಗುತ್ತಿದ್ದು ಈ ಹಿನ್ನಲೆಯಲ್ಲಿ ಜಾರಿಗೊಳಿಸಿದ ಕಠಿಣ ನಿಯಮಗಳನ್ನು ತೆಗೆದುಹಾಕಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿದು ಬಂದಿದೆ.
ಸದ್ಯ ದೆಹಲಿ ಸರ್ಕಾರವು ಎಲ್‌ಜಿ ಅನುಮತಿಗೆ ಕಾಯುತ್ತಿದೆ. ಒಂದು ವೇಳೆ ಎಲ್‌ಜಿ ಅನುಮತಿ ನೀಡಿದರೆ ತಕ್ಷಣದಿಂದ ಜಾರಿಯಲ್ಲಿರುವ ಕಠಿಣ ನಿಯಮಗಳನ್ನು ತೆಗೆದುಹಾಕಲಾಗುತ್ತದೆ.