• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

ಪ್ರತಿಧ್ವನಿ by ಪ್ರತಿಧ್ವನಿ
May 27, 2026
in ಕರ್ನಾಟಕ
0
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?
Share on WhatsAppShare on FacebookShare on Telegram

ಐದು ರಾಜ್ಯಗಳ ಚುನಾವಣೆ ಬಳಿಕ ಇದೀಗ ದೇಶದ ರಾಜಕೀಯ ಗಮನ ಸಂಪೂರ್ಣವಾಗಿ ಕರ್ನಾಟಕದತ್ತ ತಿರುಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿಗಳು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದು, ಅವರ ಸ್ಥಾನಕ್ಕೆ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕರಿಸಲಿದ್ದಾರೆ ಎನ್ನುವ ಮಾತುಗಳು ಜೋರಾಗಿವೆ.2023ರ ವಿಧಾನಸಭಾ ಚುನಾವಣೆಯ ಬಳಿಕ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೇ ಸಿಎಂ ಹುದ್ದೆ ಅಧಿಕಾರ ಹಂಚಿಕೆ ಸೂತ್ರದ ಬಗ್ಗೆ ಚರ್ಚೆಗಳು ನಡೆಯುತ್ತಲೇ ಇವೆ. ಇದೀಗ ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಜೊತೆ ನಡೆದ ಮ್ಯಾರಥಾನ್ ಸಭೆಯ ಬಳಿಕ ನಾಯಕತ್ವ ಬದಲಾವಣೆಯ ಚರ್ಚೆ ಮತ್ತಷ್ಟು ಗಟ್ಟಿಯಾಗಿದೆ.

ADVERTISEMENT
ಇದು ISI ಅಲ್ಲ, ಭಾರತದ ಕರ್ನಾಟಕ, ಸರ್ವಜನಾಂಗದ ಶಾಂತಿಯ ತೋಟ.. #pratidhvani

ಮೂಲಗಳ ಪ್ರಕಾರ, ಸಿದ್ದರಾಮಯ್ಯ ಅವರು ಗುರುವಾರ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡುವ ಸಾಧ್ಯತೆ ಇದೆ. ಈ ನಿರ್ಧಾರಕ್ಕೂ ಮುನ್ನ ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಡಿಕೆ ಶಿವಕುಮಾರ್, ಕೆ.ಸಿ. ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸುರ್ಜೇವಾಲಾ ಉಪಸ್ಥಿತಿಯಲ್ಲಿ ಸುಮಾರು ಏಳು ಗಂಟೆಗಳ ಕಾಲ ಮಹತ್ವದ ಸಭೆ ನಡೆದಿದೆ ಎನ್ನಲಾಗಿದೆ.2029ರ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ಅವರಿಗೆ ರಾಷ್ಟ್ರ ರಾಜಕಾರಣದಲ್ಲಿ ದೊಡ್ಡ ಜವಾಬ್ದಾರಿ ನೀಡಲು ಮುಂದಾಗಿದೆ ಎಂದು ಮೂಲಗಳು ಹೇಳುತ್ತಿವೆ. ಸಾಮಾಜಿಕ ನ್ಯಾಯ, ಜಾತಿ ಜನಗಣತಿ ಹಾಗೂ ಹಿಂದುಳಿದ ವರ್ಗಗಳ ರಾಜಕೀಯದಲ್ಲಿ ಸಿದ್ದರಾಮಯ್ಯ ಅವರ ಅನುಭವ ರಾಷ್ಟ್ರಮಟ್ಟದಲ್ಲಿ ಅಗತ್ಯವಿದೆ ಎಂದು ಹೈಕಮಾಂಡ್ ಮನವೊಲಿಸಿದೆ ಎನ್ನಲಾಗಿದೆ.

Karnataka Power Tussle : ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ #pratidhvani

ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರನ್ನು ರಾಜ್ಯಸಭೆಗೆ ಕಳುಹಿಸಿ ಎಐಸಿಸಿಯಲ್ಲಿ ಪ್ರಮುಖ ಹುದ್ದೆ ನೀಡುವ ಫಾರ್ಮುಲಾ ಚರ್ಚೆಯಲ್ಲಿದೆ. ಜೂನ್ ಎರಡನೇ ವಾರದಲ್ಲಿ ನಡೆಯಲಿರುವ ರಾಜ್ಯಸಭಾ ಚುನಾವಣೆಯಲ್ಲಿ ಅವರನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.ಇದೇ ವೇಳೆ ಮುಖ್ಯಮಂತ್ರಿ ನಿವಾಸದಲ್ಲಿ ಸಚಿವ ಸಂಪುಟದ ಉಪಹಾರ ಸಭೆ ಕರೆದಿರುವುದು ರಾಜಕೀಯ ಕುತೂಹಲ ಮತ್ತಷ್ಟು ಹೆಚ್ಚಿಸಿದೆ. ಈ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ವೇಗವಾದ ಬೆಳವಣಿಗೆಗಳು ಸಂಭವಿಸಬಹುದು ಎಂಬ ಮಾತುಗಳು ಕೇಳಿಬರುತ್ತಿವೆ.

 

ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಪ್ರಶ್ನೆಗೆ ಡಿಕೆ ಶಿವಕುಮಾರ್ ಹೆಸರು ಮುಂಚೂಣಿಯಲ್ಲಿದೆ. ಕಾಂಗ್ರೆಸ್ ಸರ್ಕಾರ ರಚನೆಯಾದಾಗಿನಿಂದಲೇ “ಎರಡೂವರೆ ವರ್ಷ ಸಿದ್ದು, ನಂತರ ಡಿಕೆಶಿ” ಎಂಬ ಅಧಿಕಾರ ಹಂಚಿಕೆ ಸೂತ್ರದ ಚರ್ಚೆ ರಾಜಕೀಯ ಪಡಸಾಲೆಯಲ್ಲಿ ಕೇಳಿಬರುತ್ತಿತ್ತು. ಇದೀಗ ಹೈಕಮಾಂಡ್ ಆ ಸೂತ್ರಕ್ಕೆ ಅಂತಿಮ ರೂಪ ನೀಡುವತ್ತ ಹೆಜ್ಜೆ ಇಟ್ಟಿದೆ ಎನ್ನಲಾಗುತ್ತಿದೆ.ಆದರೆ ಈ ಬದಲಾವಣೆಯನ್ನು ಯಾವುದೇ ಬಣದ ಗೆಲುವು ಅಥವಾ ಸೋಲಾಗಿ ಬಿಂಬಿಸದಂತೆ ಕಾಂಗ್ರೆಸ್ ಹೈಕಮಾಂಡ್ ಅತ್ಯಂತ ಎಚ್ಚರಿಕೆಯಿಂದ ರಾಜಕೀಯ ಸಮತೋಲನ ಸಾಧಿಸಲು ಪ್ರಯತ್ನಿಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

Tags: #cmchange#congress#CongressLeadership#dkshivakumar#KarnatakaPolitics#MallikarjunKharge#PoliticalBuzz#PowerSharing#PowerShift#rahulgandhi#siddaramaiahcongresshighcommandkarnatakacmStatePolitics
Previous Post

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್ ಮೀಟಿಂಗ್ ಮೇಲೆ ರಾಜ್ಯದ ಕಣ್ಣು;  ಉಪಹಾರ ಕೂಟದಲ್ಲೇ ಅಧಿಕಾರ ಹಸ್ತಾಂತರ ಫೈನಲ್?

Related Posts

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?
Top Story

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

by ಪ್ರತಿಧ್ವನಿ
May 27, 2026
0

ಬೆಂಗಳೂರು : ಕಾಂಗ್ರೆಸ್ ನಾಯಕತ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ನಡುವಿನ ದೀರ್ಘಕಾಲದ ಶೀತಲ ಸಮರ ಪರಿಹರಿಸುವಲ್ಲಿ ಯಶಸ್ವಿಯಾದಂತೆ ಕಂಡು ಬರುತ್ತಿದೆ. ಈ ಮೂಲಕ ಸಿದ್ದರಾಮಯ್ಯ ವಿದಾಯಕ್ಕೆ...

Read moreDetails
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

May 26, 2026
ಬೆಂಗಳೂರಿನಲ್ಲಿ ‘ಪೆದ್ದಿ’ ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ

ಬೆಂಗಳೂರಿನಲ್ಲಿ ‘ಪೆದ್ದಿ’ ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ

May 26, 2026
ದೆಹಲಿಯಲ್ಲಿ ಹೈ ವೋಲ್ಟೇಜ್‌ ಸಭೆಯಲ್ಲಿ ಡಿಕೆ, ಸಿದ್ದು ಚರ್ಚಿಸಿದ್ದೇನು..?

ದೆಹಲಿಯಲ್ಲಿ ಹೈ ವೋಲ್ಟೇಜ್‌ ಸಭೆಯಲ್ಲಿ ಡಿಕೆ, ಸಿದ್ದು ಚರ್ಚಿಸಿದ್ದೇನು..?

May 26, 2026
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada