ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೇರ್ ಅವರಿಗೆ ಹೊಸ ತೊಂದರೆ ಎದುರಾಗಿದೆ. ಹೌದು, 2018ರ ಹಳೆಯ ಟ್ವೀಟ್ ಒಂದಕ್ಕೆ ಸಂಬಂಧಿಸಿದಂತೆ ಪತ್ರಕರ್ತ ಮೊಹಮ್ಮದ್ ಜುಬೇರ್ರವರನ್ನು ಬಂಧಿಸಿದ್ದ ದೆಹಲಿ ಪೊಲೀಸರು ಇಂದು ಅವರ ಮೇಲೆ ಕ್ರಿಮಿನಲ್ ಪಿತೂರಿ, ಸಾಕ್ಷ್ಯ ನಾಶದಂತಹ ಹೊಸ ಕೇಸ್ ಅನ್ನು ದೆಹಲಿ ಪೊಲೀಸರು ದಾಖಲಿಸಿದ್ದಾರೆ.
ವಿದೇಶಿ ದೇಣಿಗೆ ಪಡೆದ ಆರೋಪದ ಮೇಲೆ ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 201 (ಸಾಕ್ಷ್ಯ ನಾಶ), 120B (ಕ್ರಿಮಿನಲ್ ಪಿತೂರಿ), ಮತ್ತು ವಿದೇಶಿ ಕೊಡುಗೆ ನಿಯಂತ್ರಣ ಕಾಯಿದೆ (FCRA) ಸೆಕ್ಷನ್ 35 ಅಡಿ ಜುಬೇರ್ ವಿರುದ್ದ ಹೊಸ ಕೇಸ್ ದಾಖಲಾಗಿದೆ.
ತನಿಖೆಯ ಭಾಗವಾಗಿ ತನಿಖಾಧಿಕಾರಿಗಳು ಜುಬೈರ್ ಅವರ ಮೊಬೈಲ್ ಫೋನ್ ಮತ್ತು ಹಾರ್ಡ್ ಡಿಸ್ಕ್ ಅನ್ನು ವಶಪಡಿಸಿಕೊಂಡಿದ್ದಾರೆ. ಅವರು ತಮ್ಮ ಮೊಬೈಲ್ ಫೋನ್ ಫಾರ್ಮ್ಯಾಟ್ ಮಾಡಿ, ಕೆಲವು ಟ್ವೀಟ್ಗಳನ್ನು ಅಳಿಸಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದಾರೆ.
ಮೊಹಮ್ಮದ್ ಜುಬೇರ್ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದಾರೆ.