ʻನನ್ನ ತೆರಿಗೆ, ನನ್ನ ಹಕ್ಕುʼ ಘೋಷಣೆಯೊಂದಿಗೆ ಇಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೇಂದ್ರ ಸರ್ಕಾರ ವಿರುದ್ಧ ಪ್ರತಿಭಟನೆ ನಡೆಸಲು ಕಾಂಗ್ರೆಸ್ ನಾಯಕರು ಸಜ್ಜಾಗಿದ್ದಾರೆ.

ದೆಹಲಿಯ ಜಂತರ್ ಮಂತರ್ನಲ್ಲಿ ನಡೆಯಲಿರುವ ಕರ್ನಾಟಕದ ಕಾಂಗ್ರೆಸ್ ನಾಯಕರ ಪ್ರತಿಭಟನೆಗೆ ದೆಹಲಿ ಪೊಲೀಸರು ಗ್ರೀನ್ ಸಿಗ್ನಲ್ ನೀಡಿದೆ. ದೆಹಲಿ ಪೊಲೀಸರು ಬೆಳಗ್ಗೆ 10ರಿಂದ ಮಧಾಹ್ನ 1 ಗಂಟೆವರೆಗೂ ಪ್ರತಿಭಟನೆ ನಡೆಸಲು ಅವಕಾಶ ನೀಡಿದೆ. ಅಲ್ಲದೇ ಈ ಪ್ರತಿಭಟನೆಯಲ್ಲಿ ಕೇವಲ 300 ಮಂದಿ ಮಾತ್ರವೇ ಭಾಗವಹಿಸಲು ಅನುಮತಿ ನೀಡಲಾಗಿದೆ. ದೆಹಲಿ ಚಲೋ ಪಕ್ಷದ ಪ್ರತಿಭಟನೆಯಲ್ಲ, ಬದಲಿಗೆ ಸರ್ಕಾರದ ಪ್ರತಿಭಟನೆ, ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ಸರಿಪಡಿಸಲು ಬಿಜೆಪಿ ಮತ್ತು ಜೆಡಿಎಸ್ ಸಂಸದರು ಪ್ರತಿಭಟನೆಯಲ್ಲಿ ಭಾಗವಹಿಸುವಂತೆಯೂ ಸಿಎಂ ಸಿದ್ದರಾಮಯ್ಯ ರಾಜ್ಯದ ಎಲ್ಲಾ ಜನಪ್ರತಿನಿಧಿಗಳಿಗೆ ಆಹ್ವಾನ ನೀಡಿದ್ದಾರೆ.
#Congress #Protest #JantharManthar #MyTaxMyRight






