ನವದೆಹಲಿ: WFI ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಬಂಧನಕ್ಕೆ ಆಗ್ರಹಿಸಿ ಕುಸ್ತಿಪಟುಗಳು ನಡೆಸುತ್ತಿರುವ ಹೋರಾಟದ ಬೆನ್ನಲ್ಲೇ ಬೆಳವಣಿಗೆ ಎಂಬಂತೆ, ದೆಹಲಿ ಪೊಲೀಸರು ಬ್ರಿಜ್ ಭೂಷಣ್ ಸಿಂಗ್ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ, 12 ಮಂದಿಯ ಬಳಿ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ. ಅವರ ಹೆಸರು, ವಿಳಾಸ, ಗುರುತಿನ ಪತ್ರಗಳನ್ನು ಪಡೆದಿದ್ದಾರೆ.


ಸಾಕ್ಷಿಗಳಿಗಾಗಿ ಡೇಟಾ ಸಂಗ್ರಹಿಸಲಾಗಿದ್ದು, ಡಬ್ಲ್ಯುಎಫ್ಐ ಮುಖ್ಯಸ್ಥರ ಅನೇಕ ಬೆಂಬಲಿಗರನ್ನೂ ಸಹ ಪೊಲೀಸರು ವಿಚಾರಣೆ ಮಾಡಿದ್ದಾರೆ. ಆದರೆ, ಸಿಂಗ್ ಅವರ ನಿವಾಸದಲ್ಲಿ ಪೊಲೀಸರು ವಿಚಾರಣೆ ನಡೆಸಿದ್ದಾರೆಯೇ ಎಂಬುದು ತಿಳಿದಿಲ್ಲ. ವಿಶೇಷ ತನಿಖಾ ತಂಡವು ಈವರೆಗೆ ಪ್ರಕರಣಕ್ಕೆ ಸಂಬಂಧಿಸಿದ 137 ಮಂದಿಯಿಂದ ಹೇಳಿಕೆಗಳನ್ನು ದಾಖಲಿಸಿದೆ.