• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಸಂಸತ್ತು ಮುಂಗಾರು ಅಧಿವೇಶನ | ಗದ್ದಲದ ನಡುವೆ ದೆಹಲಿ ಸೇವಾ ಮಸೂದೆ ಮಂಡನೆ

ಪ್ರತಿಧ್ವನಿ by ಪ್ರತಿಧ್ವನಿ
August 1, 2023
in ಇದೀಗ, ದೇಶ, ರಾಜಕೀಯ
0
ಸಂಸತ್ತು ಮುಂಗಾರು ಅಧಿವೇಶನ
Share on WhatsAppShare on FacebookShare on Telegram

ಸಂಸತ್ತು ಮುಂಗಾರು ಅಧಿವೇಶನ ಆರಂಭವಾಗಿ ಹತ್ತು ದಿನಗಳು ಕಳೆದರೂ ಸೂಕ್ತ ವಿಷಯದ ಚರ್ಚೆಗೆ ಉಭಯ ಸದನಗಳ ಕಲಾಪ ಸಾಕ್ಷಿಯಾಗಿಲ್ಲ. ಮಂಗಳವಾರ (ಆಗಸ್ಟ್‌ 1) ಆರಂಭವಾದ ಕಲಾಪದಲ್ಲಿ ಪ್ರತಿಪಕ್ಷಗಳ ಗದ್ದಲದ ನಡುವೆ ದೆಹಲಿ ಸೇವೆಗಳ ಮಸೂದೆಯನ್ನು ಮಂಡಿಸಲಾಗಿಯಿತು.

ADVERTISEMENT

ಬೆಳಿಗ್ಗೆ 11 ಗಂಟೆಗೆ ಲೋಕಸಭೆ ಕಲಾಪ ಆರಂಭವಾದ ನಂತರ ಮಣಿಪುರ ವಿಚಾರಕ್ಕೆ ಪ್ರತಿಪಕ್ಷಗಳು ಘೋಷಣೆ ಕೂಗಿದವು. ಗದ್ದಲದ ನಡುವೆ ಕೇಂದ್ರ ಸಚಿವ ನಿತ್ಯಾನಂದ ರೈ ಅವರು ದೆಹಲಿಯ ಆಡಳಿತ ಸೇವೆಯ ಮೇಲೆ ನಿಯಂತ್ರಣ ಹೇರುವ ದೆಹಲಿ ರಾಷ್ಟ್ರೀಯ ರಾಜಧಾನಿ ಪ್ರದೇಶ ಸರ್ಕಾರ (ತಿದ್ದುಪಡಿ) ಮಸೂದೆ, 2023 ಅನ್ನು ಮಂಡನೆ ಮಾಡಿದರು.

ಸಂಸತ್ತು ಮುಂಗಾರು ಅಧಿವೇಶನ ಲೋಕಸಭೆ ಕಲಾಪದಲ್ಲಿ ಗೃಹ ಸಚಿವ ಅಮಿತ್‌ ಶಾ ದೆಹಲಿ ಸೇವಾ ಮಸೂದೆ ಬಗ್ಗೆ ಮಾತನಾಡಿ, ದೆಹಲಿಗೆ ಸಂಬಂಧಿಸಿದ ಕಾನೂನುಗಳನ್ನು ರೂಪಿಸಲು ಸಂಸತ್ತಿಗೆ ಸಂವಿಧಾನ ಅವಕಾಶ ನೀಡುತ್ತದೆ ಎಂದು ಪ್ರತಿಪಾದಿಸಿದರು.

ಮಸೂದೆ ವಿರೋಧಿಸುವವರ ವಿರುದ್ಧ ಅಮಿತ್‌ ಶಾ ಹರಿಹಾಯ್ದರು. ದೆಹಲಿ ಸೇವಾ ಮಂಡನೆ ಪ್ರಜಾಪ್ರಭುತ್ವ ವಿರುದ್ಧ ನಡೆ ಎಂದು ಆಮ್‌ ಆದ್ಮಿ ಪಕ್ಷ (ಎಎಪಿ) ಕಿಡಿಕಾರಿತು.

ರಾಜ್ಯಸಭೆಯಲ್ಲೂ ಮಣಿಪುರ ಹಿಂಸಾಚಾರ ಬಗ್ಗೆ ಕೇಂದ್ರ ಸರ್ಕಾರದ ಅಲ್ಪಾವಧಿ ಚರ್ಚೆ ಬಗ್ಗೆ ಪ್ರತಿಪಕ್ಷಗಳು ಘೋಷಣೆ ಕೂಗಿದವು. ಸಂಸತ್ತು ಮುಂಗಾರು ಅಧಿವೇಶನ ಆರಂಭವಾದಾಗಿನಿಂದ ಮಣಿಪುರದ ವಿಚಾರದಲ್ಲಿ ಆಡಳಿತ ಹಾಗೂ ಪ್ರತಿಪಕ್ಷಗಳ ನಡುವೆ ಗದ್ದಲ ಉಂಟಾಗುತ್ತಿದೆ. ಮಣಿಪುರ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ತಿನಲ್ಲಿ ಹೇಳಿಕೆ ನೀಡಬೇಕು ಎಂದು ಪ್ರತಿಪಕ್ಷಗಳು ಒತ್ತಾಯಿಸುತ್ತಿವೆ.

ಪ್ರತಿಪಕ್ಷಗಳ ತೀವ್ರ ಗದ್ದಲದ ನಡುವೆ ಲೋಕಸಭೆಯಲ್ಲಿ ಜನನಗಳು ಮತ್ತು ಮರಣಗಳ ನೋಂದಣಿ (ತಿದ್ದುಪಡಿ) ಮಸೂದೆ ಮಂಡನೆಯಾಯಿತು. ಪ್ರತಿಪಕ್ಷಗಳ ಗಲಾಯಿಂದ ಕಲಾಪ ಬುಧವಾರ ಬೆಳಿಗ್ಗೆ 11 ಗಂಟೆಗೆ ಮುಂದೂಡಿಕೆಯಾಯಿತು.

ಲೋಕಸಭೆ ಕಲಾಪ ಆರಂಭವಾಗುತ್ತಿದ್ದಂತೆಯೇ, ವಿರೋಧ ಪಕ್ಷದ ಸದಸ್ಯರು ಘೋಷಣೆಗಳನ್ನು ಕೂಗಿ ಫಲಕಗಳನ್ನು ಹಿಡಿದು ಕೆಲವರು ಸದನದ ಬಾವಿಗೆ ಪ್ರವೇಶಿಸಿದರು. ಕೆಲವರು ಮಣಿಪುರ ವಿಷಯವನ್ನು ಪ್ರಸ್ತಾಪಿಸಲು ಸಭಾಧ್ಯಕ್ಷರ ಪೀಠದ ಬಳಿ ಭಿತ್ತಿಪತ್ರಗಳನ್ನು ಹಿಡಿದು ನಿಂತರು.

ಸಭಾಧ್ಯಕ್ಷ ಓಂ ಬಿರ್ಲಾ ಅವರು ಪ್ರತಿಭಟನಾನಿರತ ಸದಸ್ಯರಿಗೆ ಮಣಿಪುರ ವಿಷಯವನ್ನು ಪ್ರಸ್ತಾಪಿಸಲು ಸಮಯಾವಕಾಶ ನೀಡುವುದಾಗಿ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಆಂಧ್ರಪ್ರದೇಶ | ತಮ್ಮ ಚಪ್ಪಲಿಯಿಂದ ತಾವೇ ಹೊಡೆದುಕೊಂಡ ಕೌನ್ಸಿಲರ್‌ ; ಕಾರಣ ಇಲ್ಲಿದೆ

ಬಿಎಸ್‌ಪಿ ಸದಸ್ಯ ಕುನ್ವರ್ ಡ್ಯಾನಿಶ್ ಅಲಿ ತಮ್ಮ ಆಸನದಲ್ಲಿ ನಿಂತು ಹರಿಯಾಣದ ನುಹ್ನಲ್ಲಿ ನಡೆದ ಹಿಂಸಾಚಾರದ ಬಗ್ಗೆ ಘೋಷಣೆಗಳನ್ನು ಕೂಗಿದರು.

ಸುಮಾರು 15 ನಿಮಿಷ ನಡೆದ ಪ್ರಶ್ನೋತ್ತರ ಅವಧಿಯಲ್ಲಿ ಮೂರು ಪ್ರಶ್ನೆಗಳು ಮತ್ತು ಅದಕ್ಕೆ ಸಂಬಂಧಿಸಿದ ಅನುಸರಣಾ ಪ್ರಶ್ನೆಗಳ ಬಗ್ಗೆ ಚರ್ಚಿಸಲಾಯಿತು. ಆದರೆ, ಪ್ರತಿಭಟನೆ ಮುಂದುವರಿದಿದ್ದರಿಂದ ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು. ಸಂಸತ್ತು ಮುಂಗಾರು ಅಧಿವೇಶನ ಲೋಕಸಭೆ ಕಲಾಪ ಮಧ್ಯಾಹ್ನ ಆರಂಭವಾದ ಕಲಾಪದಲ್ಲೂ ಪ್ರತಿಭಟನೆ ಮುಂದುವರಿಯಿತು. ಇದರಿಂದ ಕಲಾಪ ಮುಂದೂಡಿಕೆಯಾಯಿತು.

Tags: Amit ShahGovernment of National Capital Territory of Delhi BillLokSabhaManipur ViolenceParliament Mansoon SessionRajyasabhaಮಣಿಪುರ ಹಿಂಸಾಚಾರರಾಜ್ಯಸಭೆಲೋಕಸಭೆಸಂಸತ್ತು ಮುಂಗಾರು ಅಧಿವೇಶನ
Previous Post

ಮಣಿಪುರ ಹಿಂಸಾಚಾರ | ದೆಹಲಿ ಮಹಿಳಾ ಆಯೋಗದಿಂದ ರಾಷ್ಟ್ರಪತಿಗೆ ಮಧ್ಯಂತರ ಶಿಫಾರಸು

Next Post

ಜನರ ಕೆಲಸ ಮಾಡುವ ವಿಚಾರದಲ್ಲಿ ರಾಜಕೀಯ ಮಾಡಬಾರದು ; ಸಿಎಂ ಸಿದ್ದರಾಮಯ್ಯ

Related Posts

ಕೇರಳದ ನೂತನ ಸಿಎಂ: ವೇಣುಗೋಪಾಲ್‌ಗೆ ನಿರಾಸೆ? ಫಸ್ಟ್ ರಿಯಾಕ್ಷನ್ ಏನು
ರಾಜಕೀಯ

ಕೇರಳದ ನೂತನ ಸಿಎಂ: ವೇಣುಗೋಪಾಲ್‌ಗೆ ನಿರಾಸೆ? ಫಸ್ಟ್ ರಿಯಾಕ್ಷನ್ ಏನು

by ಪ್ರತಿಧ್ವನಿ
May 15, 2026
0

ತಿರುವನಂತಪುರಂ: ಕಾಂಗ್ರೆಸ್ ನಾಯಕ ಹಾಗೂ ವಿರೋಧ ಪಕ್ಷದ ನಾಯಕ ವಿ.ಡಿ. ಸತೀಶನ್ ಅವರನ್ನು ಕೇರಳದ ನೂತನ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಹೈಕಮಾಂಡ್ ಘೋಷಿಸಿದೆ. ಕೇರಳ ಕಾಂಗ್ರೆಸ್ ಉಸ್ತುವಾರಿ ದೀಪದಾಸ್...

Read moreDetails
64ನೇ ವಸಂತಕ್ಕೆ ಡಿಕೆಶಿ; ಸಿಎಂ ಕುರ್ಚಿ ಕನಸು ಈಡೇರುತ್ತಾ ಎಂಬ ಕುತೂಹಲ

64ನೇ ವಸಂತಕ್ಕೆ ಡಿಕೆಶಿ; ಸಿಎಂ ಕುರ್ಚಿ ಕನಸು ಈಡೇರುತ್ತಾ ಎಂಬ ಕುತೂಹಲ

May 15, 2026
ಹೋಂಗಾರ್ಡ್ಸ್, ರಿಸರ್ವ್ ಪೊಲೀಸರು ವಾಹನ ತಪಾಸಣಾ ಮಾಡಿದ್ರೆ ಕಠಿಣ ಕ್ರಮ : ಮೋಹನ್‌ ಕುಮಾರ್‌ ದಾನಪ್ಪ ಮನವಿಗೆ ಡಿಜಿಪಿ ಸ್ಪಂದನೆ

ಹೋಂಗಾರ್ಡ್ಸ್, ರಿಸರ್ವ್ ಪೊಲೀಸರು ವಾಹನ ತಪಾಸಣಾ ಮಾಡಿದ್ರೆ ಕಠಿಣ ಕ್ರಮ : ಮೋಹನ್‌ ಕುಮಾರ್‌ ದಾನಪ್ಪ ಮನವಿಗೆ ಡಿಜಿಪಿ ಸ್ಪಂದನೆ

May 14, 2026
ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

May 14, 2026
ನವೀಕರಿಸಬಹುದಾದ ಇಂಧನ ವಲಯದಲ್ಲಿ ಹೆಚ್ಚು ಉದ್ಯೋಗಾವಕಾಶ: ಕ್ರೆಡಲ್ ಎಂ.ಡಿ. ಕೆ.ಪಿ. ರುದ್ರಪ್ಪಯ್ಯ

ನವೀಕರಿಸಬಹುದಾದ ಇಂಧನ ವಲಯದಲ್ಲಿ ಹೆಚ್ಚು ಉದ್ಯೋಗಾವಕಾಶ: ಕ್ರೆಡಲ್ ಎಂ.ಡಿ. ಕೆ.ಪಿ. ರುದ್ರಪ್ಪಯ್ಯ

May 14, 2026
Next Post
ಜನರ ಕೆಲಸ ಮಾಡುವ ವಿಚಾರದಲ್ಲಿ ರಾಜಕೀಯ ಮಾಡಬಾರದು ; ಸಿಎಂ ಸಿದ್ದರಾಮಯ್ಯ

ಜನರ ಕೆಲಸ ಮಾಡುವ ವಿಚಾರದಲ್ಲಿ ರಾಜಕೀಯ ಮಾಡಬಾರದು ; ಸಿಎಂ ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada