ನೆನ್ನೆಯಿಂದ ಮೈಸೂರಿನಲ್ಲಿ ಕರೋನ ರೂಪಾಂತರ ಡೆಲ್ಟಾ ಪ್ಲಸ್ ವೈರಸ್ ಇರುವ ಕುರಿತು ಅನೇಕ ಚರ್ಚೆಗಳ ನಂತರ ಇಂದು ರಾಜ್ಯ ಆರೋಗ್ಯ ಸಚಿವ ಡಾ. ಸುಧಾಕರ್ ಈ ಕುರಿತು ಸ್ಪಷ್ಟನೆ ನೀಡಿದ್ದಾರೆ.
ದೇಶದಲ್ಲಿ ಕೊರೊನಾ ಮೂರನೇ ಅಲೆಗೆ ಕಾರಣವಾಗಬಹುದು ಎನ್ನಲಾದ ಡೆಲ್ಟಾ ಪ್ಲಸ್ ವೈರಸ್ ರಾಜ್ಯಕ್ಕೂ ಕಾಲಿಟ್ಟಿದ್ದು, ರಾಜ್ಯದಲ್ಲಿ ಇಬ್ಬರಲ್ಲಿ ಈ ಮಾದರಿಯ ವೈರಸ್ ಪತ್ತೆಯಾಗಿದ್ದಾಗಿ ಇದೀಗ ಆರೋಗ್ಯ ಸಚಿವ ಡಾ. ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.
ರಾಜಧಾನಿ ಬೆಂಗಳೂರು ಹಾಗೂ ಮೈಸೂರಿನಲ್ಲಿ ತಲಾ ಒಂದು ಕೇಸ್ ಪತ್ತೆಯಾಗಿದ್ದು, ಸದ್ಯದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಎರಡು ಡೆಲ್ಟಾ ಪ್ಲಸ್ ಪ್ರಕರಣ ಪತ್ತೆಯಾಗಿದೆ ಎಂದು ಸಚಿವರು ಖಚಿತಪಡಿಸಿದ್ದಾರೆ.
ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ದೇಶಾದ್ಯಂತ ಒಟ್ಟು 40 ಡೆಲ್ಟಾ ಪ್ಲಸ್ ರೂಪಾಂತರಿ ಸೋಂಕು ಪ್ರಕರಣಗಳು ವರದಿಯಾಗಿದೆ. ಈ ಪೈಕಿ ಮಹಾರಾಷ್ಟ್ರದಲ್ಲಿ 21 ಪ್ರಕರಣಗಳು, ಮಧ್ಯ ಪ್ರದೇಶದಲ್ಲಿ 6, ಕೇರಳ ಮತ್ತು ತಮಿಳುನಾಡಿನಲ್ಲಿ ತಲಾ 3 ಪ್ರಕರಣಗಳು ವರದಿಯಾಗಿವೆ.
ಉಳಿದಂತೆ ಮೈಸೂರು ಮತ್ತು ಬೆಂಗಳೂರಿನಲ್ಲಿ ತಲಾ ಒಂದೊಂದು ಪ್ರಕರಣಗಳು ಸೇರಿದಂತೆ ಕರ್ನಾಟಕದವಲ್ಲಿ ಎರಡು ಪ್ರಕರಣಗಳು ವರದಿಯಾಗಿದ್ದು, ಪಂಜಾಬ್, ಆಂಧ್ರಪ್ರದೇಶ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ತಲಾ 1 ಪ್ರಕರಣ ವರದಿಯಾಗಿವೆ.
ಡೆಲ್ಟಾ ಪ್ಲಸ್ ವೈರಸ್ ಸಾಮಾನ್ಯ ರೂಪಾಂತರಿಗಿಂತ ಹೆಚ್ಚು ಅಪಾಯಕಾರಿಯಾಗಿದೆ ಎನ್ನಲಾಗಿದೆ. ಒಟ್ಟಾರೆ ರಾಜ್ಯಕ್ಕೂ ಡೇಂಜರಸ್ ವೈರಸ್ ಕಾಲಿಟ್ಟಿರುವುದು ಖಚಿತವಾಗಿದ್ದು, ಮುಂದಿನ ದಿನಗಳಲ್ಲಿ ಕರ್ನಾಟಕವನ್ನು ಈ ವೈರಸ್ ಇನ್ನಷ್ಟು ಮಾಡಬಹುದು ಎಂಬ ಆತಂಕ ಎದುರಾಗಿದೆ.







