• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಷ್ಟ್ರವ್ಯಾಪಿ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಒತ್ತಾಯ ಮಾಡಿದ ಡಾ. ಶರಣಪ್ರಕಾಶ್‌

ನರವಿಜ್ಞಾನ ಆರೈಕೆಯನ್ನು ಹೆಚ್ಚಿಸಲು ಹೊಸ ಪಾಲಿಟ್ರಾಮಾ ಕ್ಯಾಂಪಸ್ ಮತ್ತು ಒಪಿಡಿ

ಪ್ರತಿಧ್ವನಿ by ಪ್ರತಿಧ್ವನಿ
December 6, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ADVERTISEMENT

ಹೆಚ್ಚುತ್ತಿರುವ ಮನೋವೈದ್ಯಕೀಯ ಮತ್ತು ಮಾನಸಿಕ ಅಸ್ವಸ್ಥತೆಗಳ ಸವಾಲು ಎದುರಿಸಲು ವಿಶೇಷ ನವೀಕೃತ ಮತ್ತು ನಾವೀನ್ಯತಾ ಪ್ರಯತ್ನಗಳನ್ನು ಕೈಗೊಳ್ಳಬೇಕಾದ ಅಗತ್ಯವಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ್ ಆರ್. ಪಾಟೀಲ್ ತಿಳಿಸಿದ್ದಾರೆ.

ನರ ರೋಗಗಳು, ಸೋಂಕುಗಳು, ಮಾನಸಿಕ ಆರೋಗ್ಯ ಸಮಸ್ಯೆಗಳು, ತಾಯಿ ಮತ್ತು ಮಕ್ಕಳ ಮಾನಸಿಕ ಸಮಸ್ಯೆಗಳು, ಹದಿಹರೆಯದವರ ಆತ್ಮಹತ್ಯೆಗಳು, ಮಾದಕ ದ್ರವ್ಯ ಬಳಕೆಯ ಅಸ್ವಸ್ಥತೆಗಳು ಮತ್ತು ವೃದ್ಧಾಪ್ಯದ ಮಾನಸಿಕ ಆರೋಗ್ಯ ಸೇವೆಗಳನ್ನು ಒದಗಿಸಲು ವಿಶೇಷ ಸೌಲಭ್ಯ ಒದಗಿಸಬೇಕಾಗಿದೆ ಎಂದು ಸಚಿವರು ತಿಳಿಸಿದರು.

ಶನಿವಾರ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯ (ನಿಮ್ಹಾನ್ಸ್) 28 ನೇ ಘಟಿಕೋತ್ಸವದಲ್ಲಿ ಭಾಷಣ ಮಾಡಿದ ಡಾ. ಪಾಟೀಲ್, ಮೈಸೂರು ಮತ್ತು ಕಲಬುರಗಿಯಲ್ಲಿ ನಿಮ್ಹಾನ್ಸ್ ಮಾದರಿಯ ಸಂಸ್ಥೆಗಳನ್ನು ಸ್ಥಾಪಿಸಲು ರಾಜ್ಯ ಸರ್ಕಾರ ಪ್ರಸ್ತಾಪಿಸಿದೆ. “ಕರ್ನಾಟಕದಲ್ಲಿ ಮಾತ್ರವಲ್ಲ, ದೇಶಾದ್ಯಂತ ನಿಮ್ಹಾನ್ಸ್ ಮಾದರಿಯ ಸಂಸ್ಥೆಯನ್ನು ಸ್ಥಾಪಿಸಬೇಕು” ಎಂದು ಕರೆ ನೀಡಿದರು. ನವದೆಹಲಿಯಿಂದ ಆನ್‌ಲೈನ್‌ನಲ್ಲಿ ಹಾಜರಿದ್ದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಈ ಕುರಿತು ಸಚಿವರು ಮನವಿ ಸಲ್ಲಿಸಿದರು.

ಕರ್ನಾಟಕವು ಒದಗಿಸಿದ ಭೂಮಿ ಮತ್ತು ಕೇಂದ್ರ ಹಣಕಾಸು ಸಚಿವಾಲಯದ ಅನುಮೋದನೆಯಿಂದ ಬೆಂಗಳೂರಿನ ಕ್ಯಾಲ್ಸನಹಳ್ಳಿಯಲ್ಲಿ ಪಾಲಿಟ್ರಾಮಾ ಕೇಂದ್ರವಾಗಿ ಹೊಸ ಉತ್ತರ ಕ್ಯಾಂಪಸ್ ಅನ್ನು ನಿರ್ಮಿಸಲಾಗುತ್ತದೆ. ನಿಮ್ಹಾನ್ಸ್‌ನಲ್ಲಿ ಹೊಸ ಹೊರರೋಗಿ ವಿಭಾಗ (OPD) ಸಂಕೀರ್ಣವನ್ನು ಮಂಜೂರು ಮಾಡಿದ್ದಕ್ಕಾಗಿ ಕೇಂದ್ರ ಹಣಕಾಸು ಸಚಿವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಸಚಿವರು ತಿಳಿಸಿದರು.

ರಾಜ್ಯದಲ್ಲಿ ಎರಡು ಟೆಲಿ-ಮನಸ್ ಘಟಕಗಳು (ನಿಮ್ಹಾನ್ಸ್ ಮತ್ತು ಧಾರವಾಡದಲ್ಲಿ) ನಿರ್ವಹಿಸುತ್ತಿದೆ ಮತ್ತು ನಿಮ್ಹಾನ್ಸ್ ಅನ್ನು ಉನ್ನತ ಕೇಂದ್ರವಾಗಿಟ್ಟುಕೊಂಡು ನರವೈಜ್ಞಾನಿಕ ಆರೈಕೆಗೆ ಕರ್ನಾಟಕ ಬ್ರೈನ್ ಹೆಲ್ತ್ ಇನಿಶಿಯೇಟಿವ್ (Ka-BHI) ಅನ್ನು ಆರಂಭಿಸಲಾಗಿದೆ ಎಂದು ತಿಳಿಸಿದರು,

ರಾಜ್ಯ ಮತ್ತು ದೇಶದಲ್ಲಿ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಕ್ಷೇತ್ರ ಉನ್ನತೀಕರಣಕ್ಕೆ ರಾಜ್ಯ ಸರ್ಕಾರವು ನಿಮ್ಹಾನ್ಸ್ ಮತ್ತು ಅದರ ವೃತ್ತಿಪರರೊಂದಿಗೆ ಸದಾ ಬೆನ್ನಿಗಿರುತ್ತದೆ. ಇದು ನಮ್ಮ ಬದ್ಧತೆ ಎಂದು ಡಾ. ಶರಣಪ್ರಕಾಶ್‌ ಪಾಟೀಲ್‌ ತಿಳಿಸಿದರು.

Tags: dr sharan prakash patildr sharanprakash patilDr. Sharan Prakash Patildr. sharanaprakash rudrappa patilmla sharan prakash patilsharan prakash patilsharan prakash patil agesharan prakash patil bytesharan prakash patil livesharan prakash patil newssharan prakash patil on rsssharan prakash patil pasharan prakash patil speechsharan prakash patil udagisharan prakash patil wife nameSharana Prakash Patilsharana prakash patil speechSharanaprakash patilsharnu prakash patil
Previous Post

ಅಂಬೇಡ್ಕರ್ ದೇಶ ಕಂಡ ಅಪರೂಪದ ನಾಯಕ : ಸಿಎಂ ಸಿದ್ದರಾಮಯ್ಯ

Next Post

ನ್ಯಾಷನಲ್ ಹೆರಾಲ್ಡ್ ಪ್ರಕರಣ:ನಮಗೆ ಸಮನ್ಸ್ ನೀಡಿರುವುದು ಸರಿಯಲ್ಲ: ಡಿ.ಕೆ. ಶಿವಕುಮಾರ್

Related Posts

AI ಯುಗದಲ್ಲಿ ಉದ್ಯೋಗಗಳ ಅಂತ್ಯವೇ? ಎಲೋನ್ ಮಸ್ಕ್ ಹೇಳಿಕೆಗೆ ಚರ್ಚೆ
Top Story

AI ಯುಗದಲ್ಲಿ ಉದ್ಯೋಗಗಳ ಅಂತ್ಯವೇ? ಎಲೋನ್ ಮಸ್ಕ್ ಹೇಳಿಕೆಗೆ ಚರ್ಚೆ

by ಪ್ರತಿಧ್ವನಿ
April 18, 2026
0

ಕೃತಕ ಬುದ್ಧಿಮತ್ತೆ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಹಿನ್ನೆಲೆಯಲ್ಲಿ, ಮನುಷ್ಯರ ಉದ್ಯೋಗ ಭವಿಷ್ಯ ಕುರಿತು ಜಾಗತಿಕ ಮಟ್ಟದಲ್ಲಿ ಆತಂಕ ಹೆಚ್ಚುತ್ತಿದೆ. ಈ ನಡುವೆ ಎಲೋನ್ ಮಸ್ಕ್ ಭವಿಷ್ಯದ ಬಗ್ಗೆ...

Read moreDetails
ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲು!

ದೇವಾಲಯಗಳ ಚಿನ್ನ ಬಳಕೆ ಬಗ್ಗೆ ಫಾದರ್ ಪೌಲ್ ಹೇಳಿಕೆ ವಿವಾದಕ್ಕೆ ದಾರಿ

April 18, 2026
ವಿನಯ್ ಕುಲಕರ್ಣಿಗೆ ಜೀವಾವಧಿ  ಶಿಕ್ಷೆ :ಜೀವನಪೂರ್ತಿ ಜೈಲಲ್ಲೇ ಇರಬೇಕಾ? ನಿಯಮ‌ ಏನಿದೆ ?

ವಿನಯ್ ಕುಲಕರ್ಣಿಗೆ ಜೀವಾವಧಿ  ಶಿಕ್ಷೆ :ಜೀವನಪೂರ್ತಿ ಜೈಲಲ್ಲೇ ಇರಬೇಕಾ? ನಿಯಮ‌ ಏನಿದೆ ?

April 18, 2026
ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್

April 17, 2026
ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

April 17, 2026
Next Post

ನ್ಯಾಷನಲ್ ಹೆರಾಲ್ಡ್ ಪ್ರಕರಣ:ನಮಗೆ ಸಮನ್ಸ್ ನೀಡಿರುವುದು ಸರಿಯಲ್ಲ: ಡಿ.ಕೆ. ಶಿವಕುಮಾರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada