
ಮಡಿಕೇರಿ:ಕೊಡಗಿನ ವೀರ ಸೇನಾನಿಗಳನ್ನು ಅಪಮಾನ ಮಾಡಿದ ಆರೋಪಿಯನ್ನು ಆರು ತಿಂಗಳ ಕಾಲ ಕೊಡಗಿನಿಂದ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿ ಕೊಡಗು ಸರ್ವಜನಾಂಗಗಳ ಒಕ್ಕೂಟವು ಡಿ. 12ರಂದು ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ರವರೆಗೆ ಕರೆ ನೀಡಿದೆ.ಆರೋಪಿ ವಿದ್ಯಾಧರ್ ವಿರುದ್ದ ಪ್ರಕರಣ ದಾಖಲಾಗಿದೆ.

ಆದರೆ ಮತ್ತೆ ಇಂತಹ ಘಟನೆ ನಡೆಯಬಾರದು. ಹಾಗಾಗಿ ಆರೋಪಿಯನ್ನು ಕನಿಷ್ಠ ಆರು ತಿಂಗಳ ಕಾಲ ಕೊಡಗಿನಿಂದ ಗಡಿಪಾರು ಮಾಡಬೇಕು ಎಂದು ಒಕ್ಕೂಟದ ಸಂಚಾಲಕ ರಾಜೀವ್ ಬೋಪಯ್ಯ ಇಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಈ ಬಂದ್‌ಗೆ ಆಟೊ ಚಾಲಕರು, ವ್ಯಾಪಾರಸ್ಥರು, ಉದ್ಯಮಿಗಳು ಈಗಾಗಲೇ ಬೆಂಬಲ ಸೂಚಿಸಿದ್ದಾರೆ. ಒಟ್ಟು 29 ಸಮುದಾಯಗಳ ಸಂಘಟನೆಗಳು ಸಹ ಬಂದ್‌ಗೆ ಸಹಮತ ವ್ಯಕ್ತಪಡಿಸಿದ್ದಾರೆ ಎಂದರು.
ಕೊಡಗು ಬಂದ್ ಸಂದರ್ಭ ಕೊಡಗು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸುವಂತೆ ಸರಕಾರಕ್ಕೆ ಈ ಮೂಲಕ ಮನವಿ ಮಾಡಲಾಗಿದೆ,ಕೊಡಗು ಜಿಲ್ಲಾ ಬಸ್ ಮಾಲೀಕರ ಸಂಘ, ಆಟೋ ಚಾಲಕರು ಮತ್ತು ಮಾಲೀಕರ ಸಂಘ, ಲಾರಿ ಮಾಲೀಕರು ಮತ್ತು ಚಾಲಕರ ಸಂಘ, ಕಾರು ಮಾಲೀಕರು ಮತ್ತು ಚಾಲಕರ ಸಂಘ, ಹೀಗೆ ಎಲ್ಲಾ ವಾಹನಗಳ ಸಂಘಟನೆಗಳನ್ನು, ಜಿಲ್ಲೆಯ ಎಲ್ಲಾ ಅಂಗಡಿ ವಹಿವಾಟು ಮಾಲೀಕರನ್ನು, ಪ್ರವಾಸೋದ್ಯಮ ಕ್ಷೇತ್ರದಲ್ಲಿ