
ಚಿಕ್ಕಮಗಳೂರು: ವಿವಾದಿತ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ಹೋಳಿ ಹುಣ್ಣಿಮೆ ಪೂಜೆ ಹಿನ್ನೆಲೆಯಲ್ಲಿ ಹುಣ್ಣಿಮೆ ಪೂಜೆ, ಹೋಳಿ ಆಚರಣೆಗಾಗಿ ನೂರಾರು ಹಿಂದೂ ಸಂಘಟನೆಗಳ ಕಾರ್ಯಕರ್ತರು ಆಗಮಿಸಿದ್ದು ಖಾಕಿ ಸರ್ಪಗಾವಲು ಹಾಕಲಾಗಿದೆ.
ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ಹೋಳಿ ಆಚರಣೆಗೆ ಸಿದ್ದತೆ ಮಾಡಿಕೊಂಡಿದ್ದು, ವಿವಾದಿತ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ಪೋಲಿಸ್ ಬಿಗಿ ಭದ್ರತೆ ಮಾಡಿಕೊಳ್ಳಲಾಗಿದೆ. ಪೊಲೀಸರ ಜೊತೆ ಹಿಂದೂ ಸಂಘಟನೆಗಳ ಮುಖಂಡರು ವಾಗ್ವಾದ ಮಾಡಿದ್ದಾರೆ.
ದತ್ತಾತ್ರೇಯ ಬಾಬಾ ಬುಡನ್ಗಿರಿ ಮುಂಭಾಗದ ಗೇಟ್ ಮೂಲಕ ಪ್ರವೇಶಕ್ಕಾಗಿ ವಾಗ್ವಾದ ಮಾಡಿದ್ದಾರೆ. ವಿವಾದಿತ ಗುಹೆಯ ಮುಂಭಾಗದಲ್ಲಿರುವ ಗೇಟ್. ರಘು ಸಕಲೇಶಪುರ ಸೇರಿದಂತೆ ನೂರಾರು ಹಿಂದೂ ಕಾರ್ಯಕರ್ತರಿಂದ ವಾಗ್ವಾದ ನಡೆದಿದೆ. ಮುಂಭಾಗದ ಗೇಟ್ ಮೂಲಕವೇ ಕಾರ್ಯಕರ್ತರನ್ನ ಒಳ ಬಿಡುವಂತೆ ಪಟ್ಟು ಹಿಡಿದಿದ್ದಾರೆ.
ಹೋಳಿ ಆಚರಣೆ ನಡೆಸದಂತೆ ಪೊಲೀಸರು ಸೂಚನೆ ನೀಡಿದ್ದಾರೆ. ದತ್ತ ಪಾದುಕೆ ದರ್ಶನ, ಹುಣ್ಣಿಮೆ ಪೂಜೆ ಬಳಿಕ ಹೋಳಿ ಸಂಭ್ರಮಾಚರಣೆಗೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ಸಿದ್ದತೆ ನಡೆಸಿದ್ದಾರೆ. ನಾಳೆಯಿಂದ 3 ದಿನಗಳ ಕಾಲ ಉರುಸ್ ಕೂಡ ನಡೆಯಲಿದ್ದು, ಸಂಘರ್ಷ ಏರ್ಪಡುವ ಭೀತಿಯಲ್ಲಿ ಪೊಲೀಸರಿದ್ದಾರೆ.

ರಾಜ್ಯದ ನಾನಾ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ಮುಸ್ಲಿಂ ಸಮುದಾಯದ ಜನರು ಉರುಸ್ಗೆ ಆಗಮಿಸುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ವಾಹನ ತಪಾಸಣೆ ಮಾಡಲಾಗ್ತಿದೆ. ಸಂಪೂರ್ಣ ವಾಹನಗಳ ತಪಾಸಣೆ ನಡೆಸುತ್ತಿದ್ದಾರೆ ಪೊಲೀಸರು. ಕೈ ಮರ ಚೆಕ್ ಪೋಸ್ಟ್ ನಲ್ಲಿ ಪ್ರತಿ ವಾಹನಗಳ ತಪಾಸಣೆ ಮಾಡಲಾಗ್ತಿದೆ.
ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪರ್ವತಗಳ ಸಾಲಿನಲ್ಲಿರುವ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ಹಿಂದೂ ಮುಸ್ಲಿಮರು ಪೂಜೆ ನಡೆಸಿಕೊಂಡು ಬರುತ್ತಿದ್ದಾರೆ. ಚಿಕ್ಕಮಗಳೂರು ನಗರ ಸೇರಿದಂತೆ ವಿವಾದಿತ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.
