ಬಾಗಲಕೋಟೆಯಲ್ಲಿ (Bagalakote) ಎಸ್ .ಸಿ (SC) ಸಮುದಾಯದ ಒಳ ಮೀಸಲಾತಿ (Internal reservation) ಜಾರಿಗೆ ಆಗ್ರಹಿಸಿ ಪ್ರತಿಭಟನೆ ಮಾಡಲಾಗಿದೆ. ಈಗಾಗಲೇ ರಾಜ್ಯದಲ್ಲಿ ಸರ್ವೇ ನಡೆದು ವರದಿ ಸರ್ಕಾರದ ಕೈಸೇರಿದೆ.ಆದಷ್ಟು ಬೇಗ ವರದಿಯನ್ನು ಜಾರಿಗೆ ತರಬೇಕು ಎಂದು ಸರ್ಕಾರವನ್ನು ಆಗ್ರಹಿಸಲಾಗಿದೆ.

ನಾಗಮೋಹನದಾಸ್ ಅವರ ಆಯೋಗ ಈಗಾಗಲೇ ಮುಖ್ತಮಂತ್ರಿಗಳಿಗೆ ವರದಿ ಸಲ್ಲಿಕೆ ಮಾಡಿದೆ. ಆದ್ರೆ ಈ ವರದಿ ಸಂಪುಟ ಸಭೆಯಲ್ಲಿ ಇನ್ನಷ್ಟೇ ಮಂಡನೆಯಾಗಿ ಅಂತಿಮಗೊಳ್ಳಬೇಕಿದೆ. ಹೀಗಾಗಿ ರಾಜ್ಯ ಸರ್ಕಾರ ವಿಳಂಬ ಮಾಡದೇ ವರದಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ಮಾಡಲಾಗಿದೆ.

ಬಾಗಲಕೋಟೆ ನವನಗರದ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಲಾಗಿದ್ದು, ಕರ್ನಾಟಕ ಮಾದಿಗ ಜಾತಿ ಉಪಜಾತಿಗಳ ಸಂಘಟನೆಗಳ ರಾಜ್ಯ ಒಕ್ಕೂಟದಿಂದ ಪ್ರತಿಭಟನೆ ಕೈಗೊಳ್ಳಲಾಗಿದೆ. ಈ ವೇಳೆ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆ ಮೂಲಕ ಆಯೋಗದ ವರದಿ ಶೀಘ್ರ ವರದಿ ಜಾರಿಗೊಳಿಸುವಂತೆ ಆಗ್ರಹ.