ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಎಫ್ ಐ ಆರ್ ದಾಖಲಿಸಲು ಕೇಂದ್ರ ವಕೀಲರ ಸಂಘದ ಮಾಜಿ ಪ್ರಧಾನ ಕಾರ್ಯದರ್ಶಿ ನರೇಂದ್ರ ಪಾಂಡೆ ಒತ್ತಾಯಿಸಿದ್ದಾರೆ
ವೀರ ಸಾವರ್ಕರ್ ಅವರನ್ನು ಬ್ರಿಟಿಷರ ಸೇವಕ ಎಂದು ಜರಿದಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ವಕೀಲರ ಸಂಘದ ಮಾಜಿ ಪ್ರಧಾನ ಕಾರ್ಯದರ್ಶಿ ದೂರು ದಾಖಲಿಸಲಿದ್ದಾರೆ.
ಸಾವರ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಎಫ್ ಐ ಆರ್ ದಾಖಲಿಸಲು ಕೇಂದ್ರ ವಕೀಲರ ಸಂಘದ ಮಾಜಿ ಪ್ರಧಾನ ಕಾರ್ಯದರ್ಶಿ ನರೇಂದ್ರ ಪಾಂಡೆ ಒತ್ತಾಯಿಸಿದ್ದಾರೆ
ಹಿನ್ನೆಲೆ :
ನ೧೭ ರಂದು ಮುಂಜಾನೆ ರಾಹುಲ್ ಗಾಂಧಿ ಜಂಜಾಟಿಯ ಗೌರವ್ ದಿವಸ್ ಸಂದರ್ಭದಲ್ಲಿ ಹಿಂಗೋಲಿಯಲ್ಲಿ ಭಾರತ್ ಜೋಡೋ ಯಾತ್ರೆಯಲ್ಲಿ ಬುಡಕಟ್ಟು ಸಮಾವೇಶದಲ್ಲಿ ಭಾಗವಹಿಸಿದ್ದರು. ಈ ವೇಳೆ ಮಾತನಾಡುವಾಗ ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಬ್ರಿಟಿಷರಿಂದ ಪಿಂಚಣಿ ಪಡೆದು ಕಾಂಗ್ರೆಸ್ ವಿರುದ್ಧ ಕೆಲಸ ಮಾಡುತ್ತಿದ್ದರು ಎಂದು ಟೀಕಿಸಿದ್ದರು. ಬುಡಕಟ್ಟು ನಾಯಕ ಬಿರ್ಸಾ ಮುಂಡಾ ಅವರು ಬ್ರಿಟಿಷರ ವಿರುದ್ಧ ಹೋರಾಡಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಅವರ ಸಿದ್ಧಾಂತದ ಮೇಲೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಮತ್ತು ಭಾರತೀಯ ಜನತಾ ಪಕ್ಷ ದಾಳಿ ನಡೆಸುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದರು.