• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವಿಚ್ಚಿದ್ರಕಾರಕ ಶಕ್ತಿಗಳನ್ನು ನಾಶ ಮಾಡಲು ಪ್ರಜಾಪ್ರಭುತ್ವವಾದಿಗಳು ಎದ್ದುನಿಲ್ಲಿ:ಸಿ.ಎಂ.ಸಿದ್ದರಾಮಯ್ಯ ಕರೆ

ಪ್ರತಿಧ್ವನಿ by ಪ್ರತಿಧ್ವನಿ
September 15, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು: ಏಕತೆ ನೆಪದಲ್ಲಿ ಸಮಾಜವನ್ನು ಒಡೆಯುವ, ಮನುಷ್ಯರನ್ನು ವಿಭಜಿಸುವ ವಿಚ್ಚಿದ್ರಕಾರಕ Disruptive ದುಷ್ಟ ಶಕ್ತಿಗಳನ್ನು ನಾಶ ಮಾಡಲು ಪ್ರಜಾಪ್ರಭುತ್ವವಾದಿಗಳು ಎದ್ದುನಿಲ್ಲಿ ಎಂದು ಸಿ.ಎಂ.ಸಿದ್ದರಾಮಯ್ಯ CM Siddaramaiah)ಕರೆ ನೀಡಿದರು. ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ (Democracy Day)ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾರಿತ್ರಿಕ ಮಾನವ ಸರಪಳಿ ಚಳವಳಿಯನ್ನು ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ನಲ್ಲಿ ಉದ್ಘಾಟಿಸಿ ಮಾತನಾಡಿದರು.

ADVERTISEMENT

ನಮ್ಮ ಸಂವಿಧಾನ ಎತ್ತಿ ಹಿಡಿದಿರುವ ಬಹುತ್ವವನ್ನು ನಾವು ಬದುಕಿನಲ್ಲಿ ಆಚರಿಸೋಣ. ಆ ಮೂಲಕ ಸಮಾಜ ಒಡೆಯುವ ದುಷ್ಟರ ಷಡ್ಯಂತ್ರ ಸೋಲಿಸೋಣ. ಪ್ರಜಾಪ್ರಭುತ್ವ ಗಟ್ಟಿಗೊಳಿಸೋಣ ಎಂದರು. ನಮ್ಮ ಬುದ್ದ, ಬಸವಣ್ಣನ ಕಾಲದಲ್ಲೇ ನಮ್ಮಲ್ಲಿ ಪ್ರಜಾಪ್ರಭುತ್ವ, ಸಂಸದೀಯ ವ್ಯವಸ್ಥೆ ಇತ್ತು. ಅನುಭವ ಮಂಟಪ ಮೊದಲ ಪ್ರಜಾಪ್ರಭುತ್ವದ ಸಾಂಸ್ಥಿಕ ಸಂಕೇತ ಎಂದರು.

1949ರ ನವೆಂಬರ್ 25ನೇ ತಾರೀಕಿನಂದು ಬಾಬಾ ಸಾಹೇಬರು ಮಾಡಿದ ಭಾಷಣವನ್ನು ಪ್ರಸ್ತಾಪಿಸಿದ ಸಿಎಂ, ಆರ್ಥಿಕ-ಸಾಮಾಜಿಕ ಪ್ರಜಾಪ್ರಭುತ್ವ ಎಲ್ಲರಿಗೂ ಸಿಕ್ಕಾಗ ಮಾತ್ರ ರಾಜಕೀಯ ಸ್ವಾತಂತ್ರಕ್ಕೆ ಅರ್ಥ ಬರುತ್ತದೆ. ತಾರಾತಮ್ಯ ಭಾರತದಲ್ಲಿ ಆಚರಣೆಯಲ್ಲಿ ಇರುವವರೆಗೂ ರಾಜಕೀಯ ಸ್ವಾತಂತ್ರ್ಯಕ್ಕೆ ಅರ್ಥ ಇಲ್ಲ ಎಂದರು.

ಸಂವಿಧಾನದ ಪೀಠಿಕೆಯಲ್ಲಿ ಅತ್ಯಂತ ದೊಡ್ಡ ಮೌಲ್ಯಗಳಿವೆ. ಹೀಗಾಗಿಯೇ ಪ್ರತಿ ಶಾಲಾ ಕಾಲೇಜುಗಳಲ್ಲಿ ಇದನ್ನು ಓದಿಸುವ, ಅರ್ಥೈಸುವ , ಪಾಲಿಸುವ ಪ್ರಯತ್ನ‌ ಮುನ್ನಡೆಸಿದ್ದೇವೆ ಎಂದರು.ನಮ್ಮ ರಾಷ್ಟ್ರಗೀತೆ ಮತ್ತು ನಮ್ಮ‌ ನಾಡಗೀತೆಯಲ್ಲಿರುವ ಭಾರತ ಮತ್ತು ಕರ್ನಾಟಕ ನಮ್ಮದಾಗಬೇಕು. ಯಾವುದೇ ತಾರತಮ್ಯ ಇಲ್ಲದ ಶಾಂತಿಯ ತೋಟ ನಮ್ಮದಾಗಬೇಕು ಎಂದು ಕರೆ ನೀಡಿದರು.

ಸಮಾಜದಲ್ಲಿರುವ ಅಸಮಾನತೆ ತೊಡೆದು ಹಾಕುವವರೆಗೂ ದೇಶಕ್ಕೆ ಸಿಕ್ಕ ಸ್ವಾತಂತ್ರ್ಯಕ್ಕೆ ಅರ್ಥ ಇರುವುದಿಲ್ಲ. ನಮ್ಮ ಸರ್ಕಾರ ಸಮಾನತೆ ಸಾಧಿಸುವ ದಿಕ್ಕಿನಲ್ಲಿ, ಎಲ್ಲಾ ಜಾತಿ-ಎಲ್ಲಾ ಧರ್ಮದ ಬಡವರಿಗೆ, ಮಧ್ಯಮ ವರ್ಗದವರಿಗೆ ಶಕ್ತಿ ತುಂಬುವ ಕಾರ್ಯಕ್ರಮ ರೂಪಿಸಿ ಜಾರಿ ಮಾಡಿದ್ದೇವೆ.ಏಕತೆ ನೆಪದಲ್ಲಿ ಸಮಾಜವನ್ನು ಒಡೆಯುವ ವಿಚ್ಚಿದ್ರಕಾರಕ ಶಕ್ತಿಗಳನ್ನು ನಾಶ ಮಾಡಲು ಪ್ರಜಾಪ್ರಭುತ್ವವಾದಿಗಳು ಎದ್ದುನಿಲ್ಲಬೇಕು. ಬನ್ನಿ ಎದ್ದು ನಿಲ್ಲೋಣ ಎಂದು ಕರೆ ನೀಡಿದರು.

ಏಕತೆ ನೆಪದಲ್ಲಿ ಸಮಾಜವನ್ನು ಒಡೆಯುವ ವಿಚ್ಚಿದ್ರಕಾರಕ ಶಕ್ತಿಗಳನ್ನು ನಾಶ ಮಾಡಲು ಪ್ರಜಾಪ್ರಭುತ್ವವಾದಿಗಳು ಎದ್ದುನಿಲ್ಲಬೇಕು. ಬನ್ನಿ ಎದ್ದು ನಿಲ್ಲೋಣ ಎಂದು ಕರೆ ನೀಡಿದರು.ಏಕತೆ ಭಜನೆ ಮಾಡುವ ವಿಚ್ಚಿದ್ರಕಾರಕ ದುಷ್ಟ ಶಕ್ತಿಗಳು ಸಾಮಾಜಿಕ ನ್ಯಾಯ, ಸಮಾನತೆಯ ವಿರೋಧಿಗಳು. ಇವರು ಸಮಾಜದ ಶತ್ರುಗಳು ಇವರನ್ನು ಮೆಟ್ಟಿ ನಿಲ್ಲದ ಹೊರತು ಮಹಿಳೆಯರ, ದಲಿತರ, ಹಿಂದುಳಿದವರ ಹಕ್ಕುಗಳು, ಅವಕಾಶಗಳು ಸಿಗಲು ಸಾಧ್ಯವಾಗುವುದಿಲ್ಲ ಎಂದರು.

20 ಲಕ್ಷಕ್ಕೂ ಹೆಚ್ಚು ಮಂದಿಯ ಮಾನವ ಸರಪಳಿ ರಚಿಸಿರುವುದೇ ದುಷ್ಟಶಕ್ತಿಗಳಿಗೆ ಎಚ್ಚರಿಕೆ ನೀಡಿ ಮನುಷ್ಯ ಸಮಾಜವನ್ನು ಬೆಸೆಯುವುದಾಗಿದೆ ಎಂದರು.ಉದ್ಘಾಟನೆ ಸಂದರ್ಭದಲ್ಲಿ ಪ್ರಜಾಪ್ರಭುತ್ವ ದಿನದ ರಾಯಭಾರಿ ಹರೇಕಳ ಹಾಜಪ್ಪ, ಪೌರ ಕಾರ್ಮಿಕ ತಾಯಂದಿರಾದ ನಾಗಲಕ್ಷ್ಮಿ, ಮಂಜುಳ ಹಾಗೂ ತೃತೀಯ ಲಿಂಗಿ ಪ್ರಿಯಾಂಕ ಮತ್ತು ಇಬ್ಬರು ವಿಶೇಷ ಚೇತನ ವಿದ್ಯಾರ್ಥಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಎಡ-ಬಲದಲ್ಲಿ ನಿಂತು ಪ್ರಜಾಪ್ರಭುತ್ವ ದಿನವನ್ನು ಅರ್ಥಪೂರ್ಣಗೊಳಿಸಿದರು.

Tags: CM Siddaramaiah‌Congress PartyDemocracy DayEnergy Minister KJ George
Previous Post

ಗ್ಯಾರೆಂಟಿ ನಿಲ್ಲಿಸುತ್ತಾರೆ ಎನ್ನುವವರ ಮಾತು ಕೇಳಬೇಡಿ:ಸಿಎಂ ಸಿದ್ದರಾಮಯ್ಯ

Next Post

ಪೀಟರ್’ ಜೊತೆ ಬಂದ ಸುಕೇಶ್ ಶೆಟ್ಟಿ.ದೂರದರ್ಶನ ನಿರ್ದೇಶಕರ ಹೊಸ ಚಿತ್ರಕ್ಕೆ ಡಾಲಿ:ವಿಜಯ್ ಸೇತುಪತಿ ಸಾಥ್

Related Posts

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ
ಕರ್ನಾಟಕ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

by ಪ್ರತಿಧ್ವನಿ
April 14, 2026
0

ವಿಜಯಪುರ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾಗುತ್ತಿರುವ ನಡುವೆ, ಒಂದೇ ದಿನದಲ್ಲಿ ಎರಡು ಭೀಕರ ಘಟನೆಗಳು ಬೆಳಕಿಗೆ ಬಂದಿವೆ. ಜಿಲ್ಲೆಯ ಹೊರವಲಯದ ಅಲಿಯಾಬಾದ್ ಬಳಿ ಗುಂಡಿನ ಸದ್ದು ಕೇಳಿಸಿಕೊಂಡಿದ್ದು,...

Read moreDetails
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
Next Post

ಪೀಟರ್' ಜೊತೆ ಬಂದ ಸುಕೇಶ್ ಶೆಟ್ಟಿ.ದೂರದರ್ಶನ ನಿರ್ದೇಶಕರ ಹೊಸ ಚಿತ್ರಕ್ಕೆ ಡಾಲಿ:ವಿಜಯ್ ಸೇತುಪತಿ ಸಾಥ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada