ಕರ್ನಾಟಕದಲ್ಲಿ ಡೆಂಗಿ ಮಹಾಮಾರಿ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಡೇಂಜರ್ ಡೆಂಗ್ಯೂ ಫೀವರ್ ಗೆ ಪ್ರತಿನಿತ್ಯ ನೂರಾರು ಜನ ತುತ್ತಾಗುತ್ತಿದ್ದಾರೆ . ಡೆಂಗಿ ಬಗ್ಗೆ ಅನೇಕ ಜನರಿಗೆ ಸ್ಪಷ್ಟ ಮಾಹಿತಿ ಕೊರತೆ ಇದೆ. ಡೆಂಗಿಹರಡೋದು ಹೇಗೆ ..? ಪಾಲಿಸಬೇಕಾದ ಮುನ್ನೆಚ್ಚರಿಕೆ ಏನು..? ಚಿಕಿತ್ಸೆ ವಿಧಾನ ಅನ್ನೋದ್ರ ಬಗ್ಗೆ ಮಾಹಿತಿ ಇಲ್ಲಿದೆ.
ಡೆಂಗ್ಯೂ ಹರಡೋದು ಹೇಗೆ..?
ಡೆಂಗಿ ಜ್ವರ ವೈರಸ್‌ನಿಂದ ಉಂಟಾಗುತ್ತದೆ. ಇದು ಸೋಂಕು ಹೊಂದಿದ ಈಡಿಸ್ ಎಂಬ ಸೊಳ್ಳೆಯ ಕಚ್ಚುವಿಕೆಯಿಂದ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಈ ಸೊಳ್ಳೆಗಳು ಸಾಮಾನ್ಯವಾಗಿ ಸ್ವಚ್ಛ ನೀರಿನಲ್ಲಿ ಸಂತಾನೋತ್ಪತ್ತಿ ಮಾಡುತ್ತವೆ. ಹಗಲು ಹೊತ್ತಿನಲ್ಲಿ ಕಚ್ಚುತ್ತವೆ. ಇದರಿಂದಡೆಂಗಿ ಹರಡುತ್ತದೆ.ಡೆಂಗಿ ಜ್ವರ ವೈರಸ್‌ನಿಂದ ಉಂಟಾಗುತ್ತದೆ. ಇದು ಸೋಂಕು ಹೊಂದಿದ ಈಡಿಸ್ ಎಂಬ ಸೊಳ್ಳೆಯ ಕಚ್ಚುವಿಕೆಯಿಂದ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಈ ಸೊಳ್ಳೆಗಳು ಸಾಮಾನ್ಯವಾಗಿ ಸ್ವಚ್ಛ ನೀರಿನಲ್ಲಿ ಸಂತಾನೋತ್ಪತ್ತಿ ಮಾಡುತ್ತವೆ. ಹಗಲು ಹೊತ್ತಿನಲ್ಲಿ ಕಚ್ಚುತ್ತವೆ. ಇದರಿಂದ ಡೆಂಗಿ ಹರಡುತ್ತದೆ.
ಡೇಂಜರ್ ಡೆಂಗಿ ಲಕ್ಷಣಗಳು ಏನು..?
ಡೆಂಗಿ ಜ್ವರ ಬಂದಾಗ ದೇಹದಲ್ಲಿ ಕೆಲವು ಬದಲಾವಣೆ ಕಂಡು ಬರುತ್ತದೆ. ತೀವ್ರ ಜ್ವರ, ವಿಪರೀತ ತಲೆನೋವು, ಕಣ್ಣುಗಳು ಕೆಂಪಾಗುವುದು, ಮೈ-ಕೈಗಳ ಮೇಲೆ ದದ್ದು ಕಾಣಿಸುವುದು, ಮಾಂಸಖಂಡ ಮತ್ತು ಕೀಲುಗಳಲ್ಲಿ ವಿಪರೀತ ನೋವು ಕಾಣಿಸಿಕೊಳ್ಳುತ್ತದೆ. ಈ ರೋಗದ ಪ್ರಮುಖ ಲಕ್ಷಣಗಳೆಂದರೆ ತೀವ್ರ ಸ್ಥಿತಿಯಲ್ಲಿ ಬಾಯಿ, ಮೂಗು ಮತ್ತು ವಸಡುಗಳಿಂದ ರಕ್ತಸ್ರಾವ ಹಾಗೂ ಚರ್ಮದ ಮೇಲೆ ಅಲ್ಲಲ್ಲಿ ರಕ್ತಸ್ರಾವದ ಗುರುತುಗಳು ಕಾಣಿಸಿಕೊಳ್ಳುತ್ತವೆ.
ನಿರ್ದಿಷ್ಟ ಚಿಕಿತ್ಸೆ ಇಲ್ಲ ಜೋಪಾನ..!
ಡೆಂಗಿ ಜ್ವರಕ್ಕೆ ಯಾವುದೇ ನಿರ್ದಿಷ್ಟ ಔಷಧಿ ಅಥವಾ ಲಸಿಕೆ ಇರುವುದಿಲ್ಲ. ರೋಗದ ಲಕ್ಷಣಗಳಿಗನುಸಾರವಾಗಿ ವೈದ್ಯರಿಂದ ಸೂಕ್ತ ಚಿಕಿತ್ಸೆ ಪಡೆಯಬಹುದು. ಇಂತಹ ಲಕ್ಷಣಗಳು ಕಂಡು ಬಂದರೆ ತಕ್ಷಣ ಹತ್ತಿರದ ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರಲ್ಲಿ ಪರೀಕ್ಷಿಸಿ ಕೊಂಡು ಸೂಕ್ತ ಚಿಕಿತ್ಸೆಯನ್ನು ಪಡೆಯಬಹುದು.