ಬೆಂಗಳೂರು:ಪತಿಯ ಸಾವಿನಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸೌಂದರ್ಯ ಆತ್ಮಹತ್ಯೆ ಮಾಡಿಕೊಂಡಿರುವವರು. ಕಾಡುಗೋಡಿಯ ಓಫಾರಂ ಬಳಿಯಿರುವ ಮನೆಯಲ್ಲಿ ಯಾರೂ ಇಲ್ಲದಿರುವಾಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತಳಿಗೆ ಒಂದೂವರೆ ವರ್ಷದ ಗಂಡು ಮಗುವಿದೆ.ಈಕೆಯ ಪತಿ ಧನಂಜಯ್ ಒಂದೂವರೆ ತಿಂಗಳ ಹಿಂದೆ ಕೆಲಸ ಮಾಡುತ್ತಿದ್ದ ಮಾಗಡಿ ರೋಡ್ ನಲ್ಲಿರುವ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.ಅಂದಿನಿಂದ ಸೌಂದರ್ಯ ತವರು ಮನೆಯಲ್ಲಿದ್ದರು. ಪತಿಯ ಸಾವಿನ ನೋವಿನಿಂದ ಹೊರಬರಲಾಗದೆ ಸೌಂದರ್ಯ ಖಿನ್ನತೆಯಿಂದ ಬಳಲುತ್ತಿದ್ದರು.ನಿನ್ನೆ ಮಧ್ಯಾಹ್ನ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.