ಬೆಂಗಳೂರು: ನೈರುತ್ಯ ಬಂಗಾಳಕೊಲ್ಲಿಯಲ್ಲಿ ಮತ್ತೆ ಪ್ರಬಲ ವಾಯುಭಾರ ಕುಸಿತ ಕಂಡು ಬಂದ ಪರಿಣಾಮ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮತ್ತು ಕರ್ನಾಟಕದ ಕೆಲವೆಡೆ ಗುಡುಗು ಸಹಿತ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.’ಮಾಂಡೌಸ್’ ಚಂಡಾಮಾರುತದ ಅಬ್ಬರ ತಣ್ಣಗಾಯಿತು ಎಂದುಕೊಳ್ಳುತ್ತಿರುವಾಗಲೇ ವಾತಾವರಣದಲ್ಲಿ ಮತ್ತೆ ವೈಪರಿತ್ಯಗಳು ಘಟಿಸಿವೆ. ನೈರುತ್ಯ ಬಂಗಾಳಕೊಲ್ಲಿಯಲ್ಲಿ ಶ್ರೀಲಂಕಾ ದೇಶದಿಂದ 40ಕಿ.ಮೀ. ದೂರ ಅಂದರೆ ಚೆನ್ನೈನಿಂದ 210ಕಿ.ಮೀ.ದೂರದಲ್ಲಿ ವಾಯುಭಾರ ಕುಸಿತ ಸೃಷ್ಟಿಯಾಗಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರ ತಿಳಿಸಿದ್ದಾರೆ.
ಇನ್ನೂ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಮುಂದಿನ 48ಗಂಟೆ ಮೋಡ ಕವಿದ ವಾತಾವರಣ ಕಂಡು ಬರಲಿದ್ದು, ಆಗಾಗ ಸೋನೆ ಮಳೆ ಆಗುವ ಸಾಧ್ಯತೆ ಇದೆ. ಗರಿಷ್ಠ 27 ಕನಿಷ್ಠ 152 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನಾ ವರದಿ ತಿಳಿಸಿದೆ.