• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಜೆಪಿ ಟಿಕೆಟ್ ವಂಚಿತ ಹೂಡಿ ವಿಜಯ ಕುಮಾರ್ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ..!

Any Mind by Any Mind
April 15, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
ಬಿಜೆಪಿ ಟಿಕೆಟ್ ವಂಚಿತ ಹೂಡಿ ವಿಜಯ ಕುಮಾರ್ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ..!
Share on WhatsAppShare on FacebookShare on Telegram

ಕೋಲಾರ:ಏ.15: ಬಿಜೆಪಿಯಿಂದ ಟಿಕೆಟ್ ವಂಚಿತರಾದ ಹಿನ್ನೆಲೆಯಲ್ಲಿ ಬಂಡಾಯ ಎದ್ದಿರುವ ಹೂಡಿ ವಿಜಯ್ ಕುಮಾರ್ ಅವರು ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಿ ಇಂದು ಮಾಲೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.

ADVERTISEMENT

ಮಾಲೂರಿನ ವೈಟ್ ಗಾರ್ಡನ್ ನಲ್ಲಿರುವ ಹೂಡಿ ವಿಜಯ್ ಕುಮಾರ್ ಅವರ ನಿವಾಸದಿಂದ ಅಪಾರ ಬೆಂಬಲಿಗರೊಂದಿಗೆ ರೋಡ್ ಶೋ ಮಾಲಕ ಮೆರವಣಿಗೆ ಆರಂಭಿಸಿ, ನಗರದ ಪ್ರಮುಖ ರಸ್ತೆಯಲ್ಲಿ ಸಂಚರಿಸಿದರು. ಬಳಿಕ ಮಾರೆಮ್ಮನ ದೇವಸ್ಥಾನದಲ್ಲಿ ಹೂಡಿ ವಿಜಯ್ ಕುಮಾರ್ ದಂಪತಿ ಪೂಜೆ ಸಲ್ಲಿಸಿದರು. ಬಳಿಕ ಸಾವಿರಾರು ಬೆಂಬಲಿಗರ ಮೂಲಕ ತಾಲೂಕು ಕಚೇರಿಗೆ ಆಗಮಿಸಿ ಪತ್ನಿ ಜೊತೆ ಹೂಡಿ ವಿಜಯ್ ಕುಮಾರ್ ಅವರು ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು. ರೋಡ್ ಶೋನಲ್ಲಿ ಸುಮಾರು 15 ಸಾವಿರಕ್ಕೂ ಹೆಚ್ಚು ಮಂದಿ ಬೆಂಬಲಿಗರು ಭಾಗಿಯಾಗಿದ್ದು, ಇದು ಹೂಡಿ ವಿಜಯ್ ಕುಮಾರ್ ದಂಪತಿ ಅವರ ಶಕ್ತಿ ಪ್ರದರ್ಶನವಾಗಿತ್ತು.

ಪಕ್ಷೇತರ ಅಭ್ಯರ್ಥಿಯಾಗಿ ಉಮೇದುವಾರಿಕೆ ಸಲ್ಲಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಹೂಡಿ ವಿಜಯ್ ಕುಮಾರ್ ಅವರು, ನನಗೆ ಬಿಜೆಪಿ ಪಕ್ಷದಲ್ಲಿ ನಿಜಕ್ಕೂ ಮೋಸವಾಗಿದೆ. ಮಾಲೂರು ಸ್ವಾಭಿಮಾನಕ್ಕಾಗಿ ಸ್ಪರ್ಧಿಸಬೇಕೆಂದು ಬೆಂಬಲಿಗರು ಸೂಚಿಸಿದ್ರು. ಅದರಂತೆ ಪಕ್ಷೇತರವಾಗಿ ನಾಮಪತ್ರ ಸಲ್ಲಿಸಿದ್ದೇನೆ. ಮಾಲೂರು ಜನರು ನನ್ನ ಕೈ ಬಿಡೋದಿಲ್ಲ ಎಂಬ ನಂಬಿಕೆ ಇದೆ. ಈ ಚುನಾವಣೆಯಲ್ಲಿ ನನ್ನನ್ನು ಆಯ್ಕೆ ಮಾಡುತ್ತಾರೆ ಅನ್ನೋ ನಂಬಿಕೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇನ್ನು ಮಾಧ್ಯಮದವರ ಜೊತೆ ಮಾತನಾಡುವ ವೇಳೆ ಹೂಡಿ ವಿಜಯ್ ಕುಮಾರ್ ಪತ್ನಿ ಶ್ವೇತಾ ಅವರು ಭಾವುಕರಾದರು.

ಒಬಿಸಿ ಜನಾಂಗ ಅನ್ನೋ ಕಾರಣಕ್ಕೆ ಟಿಕೆಟ್ ನೀಡಿಲ್ಲ. ಮಾಲೂರು ಕ್ಷೇತ್ರದಲ್ಲಿ ಅಲ್ಪಸಂಖ್ಯಾತರು ಸೇರಿದಂತೆ ಎಲ್ಲಾ ಜನಾಂಗದವರು ಪಕ್ಷಾತೀತವಾಗಿ ನಮಗೆ ಬೆಂಬಲಿಸುತ್ತಿದ್ದಾರೆ. ನನ್ನ ಸೇವೆಯನ್ನ ಮಾಲೂರು ಕ್ಷೇತ್ರದ ಜನತೆಗೆ ಮೀಸಲಿಡುತ್ತೇನೆ. ನಾಲ್ಕು ವರ್ಷ ಬಿಜೆಪಿ ಪಕ್ಷವನ್ನು ಕಟ್ಟಿ ಬೆಳೆಸಿದ್ದೇನೆ.‌ ನನಗೆ ಸಾಕಷ್ಟು ಬಾರಿ ಅವಮಾನ ಮಾಡಿದ್ರು, ಏನೇ ಅವಮಾನ ಮಾಡಿದ್ರು ಜಯ ಸಿಗತ್ತೆ ಅನ್ಕೊಂಡಿದ್ವಿ. ಆದ್ರೆ ಟಿಕೆಟ್ ನೀಡದೆ ಈ ರೀತಿಯಾಗಿ ಅವಮಾನ ಮಾಡುತ್ತಾರೆ ಅಂತ ಕನಸ್ಸಲ್ಲೂ ಅಂದುಕೊಂಡಿರಲಿಲ್ಲ ಎಂದು ಹೂಡಿ ವಿಜಯ್ ಕುಮಾರ್ ಬೇಸರ ವ್ಯಕ್ತಪಡಿಸಿದರು.

ಕಳೆದ ಐದು ವರ್ಷಗಳಿಂದ ಬಿಜೆಪಿ ಪಕ್ಷ ಸಂಘಟನೆಯಲ್ಲಿ ಹೂಡಿ ವಿಜಯ್ ಕುಮಾರ್ ತೊಡಗಿದ್ದರು. ಈ ಚುನಾವಣೆಯಲ್ಲಿ ಪ್ರಬಲ ಟಿಕೆಟ್ ಆಕಾಂಕ್ಷಿಯೂ ಆಗಿದ್ದರು. ಆದ್ರೆ ಮೂಲ ಬಿಜೆಪಿಗರನ್ನು ಕಡೆಗಣಿಸಿ ಪಕ್ಷಕ್ಕೆ ಹೊಸದಾಗಿ ಬಂದ ಮಂಜುನಾಥ್ ಗೌಡಗೆ ಟಿಕೆಟ್ ಕೊಟ್ಟ ಹಿನ್ನೆಲೆಯಲ್ಲಿ ಬೇಸತ್ತು ಹೂಡಿ ವಿಜಯ್ ಕುಮಾರ್ ಹಾದಿಯಾಗಿ ಹಲವಾರು ಮಂದಿ ಬಿಜೆಪಿಗೆ ರಾಜೀನಾಮೆ ನೀಡಿದ್ದರು.

Tags: BJPBJP Governmenthudi vijayakumarIndependent politicianKarnataka GovernmentKarnataka PoliticskarnatakanewsKolarkolarelectionlatest newslatestnews
Previous Post

ಜನರ ಅಭೂತಪೂರ್ವ ಬೆಂಬಲ ಸಿಕ್ಕಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Next Post

ಪ್ರಚೋದನಕಾರಿ ಹೇಳಿಕೆ ; ನಟ ಚೇತನ್​ ಅಹಿಂಸಾ OCI ರದ್ದು..!

Related Posts

ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ
Top Story

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

by ಪ್ರತಿಧ್ವನಿ
April 9, 2026
0

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 600 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post
ಪ್ರಚೋದನಕಾರಿ ಹೇಳಿಕೆ ; ನಟ ಚೇತನ್​ ಅಹಿಂಸಾ OCI ರದ್ದು..!

ಪ್ರಚೋದನಕಾರಿ ಹೇಳಿಕೆ ; ನಟ ಚೇತನ್​ ಅಹಿಂಸಾ OCI ರದ್ದು..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada