ಉತ್ತರ ಪ್ರದೇಶದ ಗೊಂಡಾದಲ್ಲಿ ದಿಬ್ರುಗಢ ಎಕ್ಸ್‌ಪ್ರೆಸ್‌ನ (15904) 15 ಬೋಗಿಗಳು ಹಳಿತಪ್ಪಿ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಸಾವಿಗೀಡಾಗಿದ್ದಾರೆ. ಈ ಘಟನೆಯಲ್ಲಿ 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.ಗೊಂಡಾ ಜುಲೈ 18: ಉತ್ತರ ಪ್ರದೇಶದ (Uttar Pradesh) ಗೊಂಡಾದಲ್ಲಿ ದಿಬ್ರುಗಢ ಎಕ್ಸ್‌ಪ್ರೆಸ್‌ನ (15904) (Dibrugarh Express)15 ಬೋಗಿಗಳು ಹಳಿತಪ್ಪಿದೆ.
ಈ ದುರ್ಘಟನೆಯಲ್ಲಿ ನಾಲ್ವರು ಸಾವಿಗೀಡಾಗಿದ್ದು 60 ಮಂದಿ ಗಾಯಗೊಂಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಈ ರೈಲು ಚಂಡೀಗಢದಿಂದ ಬರುತ್ತಿತ್ತು. ಯುಪಿಯ ಜಿಲಾಹಿ ರೈಲು ನಿಲ್ದಾಣ ಮತ್ತು ಗೋಸಾಯಿ ದಿಹ್ವಾ ನಡುವೆ ಈ ದುರ್ಘಟನೆ ನಡೆದಿದೆ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ರೈಲ್ವೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಅಧಿಕಾರಿಗಳ ಪ್ರಕಾರ ರಕ್ಷಣಾ ಕಾರ್ಯಾಚರಣೆ ಆರಂಭವಾಗಿದೆ.
VIDEO | A few bogies of Dibrugarh Express derailed near UP's Gonda railway station earlier today. Details awaited. pic.twitter.com/SfJTfc01Wp
— Press Trust of India (@PTI_News) July 18, 2024
ಅಪಘಾತದಲ್ಲಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿಲ್ಲಾ ಅಧಿಕಾರಿಗಳಿಗೆ ಸೂಚಿಸಿದ್ದಾರೆ.