ಇತ್ತೀಚಿನ ದಿನಮಾನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಒಂದಲ್ಲ ಒಂದು ರೀತಿಯಾದಂತಹ ವಿವಾದಗಳು ಭುಗಿಲೇಳುತ್ತಲೇ ಇತುತ್ತವೆ ಇದೀಗ ಇಂತಹದ್ದೇ ಒಂದು ವಿವಾದ ಚಿಂತಕ ಚಕ್ರವರ್ತಿ ಸೂಲಿಬೆಲೆಗೆ ಸುತ್ತಿಕೊಂಡಿದೆ. ಹೌದು.. ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಕಮೆಂಟ್ ಹಿನ್ನೆಲೆಯಲ್ಲಿ ಚಿಂತಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಶಿವಮೊಗ್ಗದ ವಿನೋಬ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಅವಹೇಳನಕಾರಿ ಕಮೆಂಟ್ ಮಾಡಿದ್ದಾರೆ ಎಂಬ ಆರೋಪ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಕೇಳಿ ಬಂದಿದ್ದು, ಆಗಸ್ಟ್ 24ರಂದು ಕಾಂಗ್ರೆಸ್ ರಾಜ್ಯ ಸಾಮಾಜಿಕ ಜಾಲತಾಣದ ಸಂಚಾಲಕಿ ಸೌಗಂಧಿಕಾ ರಘುನಾಥ್ ದೂರು ದಾಖಲಿಸಿದ್ದರು.

ಇದೀಗ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಐಪಿಸಿ ಸೆಕ್ಷನ್ 504 ಹಾಗೂ 509 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಹೆಚ್ಚಿನ ತನಿಖೆಯನ್ನು ನಡೆಸಲು ಪ್ರಾರಂಭಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ
ಕೆಲ ದಿನಗಳ ಹಿಂದೆ ಚಂದ್ರಯಾನ-3 ಯಶಸ್ಸಿನ ಹಿನ್ನೆಲೆಯಲ್ಲಿ ಚಕ್ರವರ್ತಿ ಸೂಲಿಬೆಲೆ ಫೇಸ್ ಬುಕ್ ನಲ್ಲಿ ಪೋಸ್ಟ್ ವೊಂದನ್ನು ಹಾಕಿದ್ದರು. ತಮ್ಮದೇ ಆದಂತಹ ಪ್ರತಿಕ್ರಿಯೆಗಳನ್ನು ನೀಡುತ್ತಾ ಬಂದಿದ್ದರು ಇನ್ನು ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಸೌಗಂಧಿಕಾ ರಘುನಾಥ್ ದೇವಸ್ಥಾನಕ್ಕೆ ಪೂಜೆ ಮಾಡೋದು ತಪ್ಪಲ್ಲ. ಆದರೆ ಫೊಟೋ ಹಾಕಿ ಅಂತ ಹೇಳಿರೋದು ತಪ್ಪು ವಿಜ್ಞಾನಿಗಳ ಪರಿಶ್ರಮ ಫಲಿಸಲಿ ಎಂದು ಬೇಡಿಕೊಂಡರೆ ಸಾಕು ಎಂದು ಹೇಳಿದ್ದರು.
ಈ ಕಮೆಂಟ್‌ಗೆ ಪ್ರತಿಕ್ರಿಯೆ ನೀಡಿದ ಚಕ್ರವರ್ತಿ ಸೂಲಿಬೆಲೆ “ನಿನಗೆ ಎಲ್ಲಿ ಯಾಕೆ ಉರಿ ಬಂತೊ ಗೊತ್ತಿಲ್ಲ” ಇಂದು ಅವಾಚ್ಯವಾಗಿ ಕಮೆಂಟ್ ಮಾಡಿದ್ದರು. ಈ ಕಮೆಂಟಿಗೆ ಸಾಕಷ್ಟು ಮಂದಿ ಮಹಿಳೆಯರನ್ನ ಹೀಗೆ ಅಪಮಾನಿಸುವುದು ಸರಿಯಲ್ಲ ಎಂದು ಹೇಳಿದ್ದರು, ಇದಾದ ಬಳಿಕ ಈ ಕುರಿತು ಸೌಗಂಧಿಕಾ ರಘುನಾಥ್ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು












