• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಬೆಂಗಳೂರಿನ ಕೊಳಚೆ ನೀರನ್ನು ಕೋಲಾರ–ಚಿಕ್ಕಬಳ್ಳಾಪುರಕ್ಕೆ ಹರಿಸಿದರು: ಸಿಎಂ ವಿರುದ್ಧ ದೇವೇಗೌಡರ ವಾಗ್ದಾಳಿ

ಪ್ರತಿಧ್ವನಿ by ಪ್ರತಿಧ್ವನಿ
March 6, 2026
in Uncategorized, ಕರ್ನಾಟಕ
0
ಹೂಡಿ ವಿಜಯ್ ಕುಮಾರ್ ಸೇರ್ಪಡೆಯಿಂದ ಜೆಡಿಎಸ್‌ಗೆ ಬಲ : ನಿಖಿಲ್ ಕುಮಾರಸ್ವಾಮಿ
Share on WhatsAppShare on FacebookShare on Telegram

ಬೆಂಗಳೂರು, ಮಾರ್ಚ್ 5:

ADVERTISEMENT

ಹದಿನಾರು ಬಜೆಟ್‌ಗಳನ್ನು ಮಂಡಿಸಿರುವವರು ಇದೀಗ ಹದಿನೇಳನೇ ಬಜೆಟ್ ಮಂಡಿಸಲು ಹೊರಟಿದ್ದು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಬೆಂಗಳೂರಿನ ಕೊಳಚೆ ನೀರನ್ನು ಹರಿಸಿರುವುದು ದುರಂತಕರ ಬೆಳವಣಿಗೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಗುರುವಾರ ನಡೆದ ಮಾಲೂರು ವಿಧಾನಸಭಾ ಕ್ಷೇತ್ರದ ಹಿರಿಯ ಮುಖಂಡ ಹೂಡಿ ವಿಜಯಕುಮಾರ್ ಅವರ ಪಕ್ಷ ಸೇರ್ಪಡೆ ಹಾಗೂ ಅವರ ನೇತೃತ್ವದ ಸ್ವಾಭಿಮಾನಿ ಜನತಾ ಪಕ್ಷದ ವಿಲೀನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನದಿಯ ನೀರು ಕೊಡುತ್ತೇವೆ ಎಂದು ಹೇಳಿ ಕೊನೆಗೆ ರಾಜಧಾನಿಯ ಕೊಳಚೆ ನೀರನ್ನೇ ಆ ಜಿಲ್ಲೆಗಳ ಜನರಿಗೆ ನೀಡಲಾಗಿದೆ ಎಂದು ಆರೋಪಿಸಿದರು.

 

ಒಂದು ಕಾಲದಲ್ಲಿ ಕೋಲಾರದ ಟೊಮ್ಯಾಟೊ ಜಗತ್ತಿಗೇ ಪ್ರಸಿದ್ಧವಾಗಿತ್ತು. ಆದರೆ ಈಗ ಅದನ್ನು ತಿನ್ನಬೇಡಿ ಎಂದು ಹೇಳುವ ಪರಿಸ್ಥಿತಿ ಬಂದಿದೆ. ಇದಕ್ಕೆ ಗಲೀಜು ನೀರು ಹಾಗೂ ಕಾಂಗ್ರೆಸ್ ಸರ್ಕಾರವೇ ಕಾರಣ ಎಂದು ಅವರು ದೂರಿದರು.

ನಾನು ಮುಖ್ಯಮಂತ್ರಿ ಆಗುವ ಮೊದಲು ರಾಜ್ಯ ಖಜಾನೆ ಖಾಲಿಯಾಗಿತ್ತು. ಸರ್ಕಾರಿ ನೌಕರರಿಗೆ ಸಂಬಳ ನೀಡಲು ಅಂದಿನ ಮುಖ್ಯಮಂತ್ರಿ ವೀರಪ್ಪ ಮೊಯಿಲಿ ಅವರು ಕೋಲ್ಕತಾದ ಪಿಯರ್ ಲೆಸ್ ಕಂಪನಿಯಿಂದ 200 ಕೋಟಿ ರೂ. ಸಾಲ ಪಡೆದಿದ್ದರು. ಅಂತಹ ಸಂದರ್ಭದಲ್ಲಿ ನಾನು ರಾಜ್ಯವನ್ನು ಹೇಗೆ ನಡೆಸಿದ್ದೆ ಎಂಬುದನ್ನು ಜನರು ಊಹಿಸಬಹುದು ಎಂದು ದೇವೇಗೌಡರು ಹೇಳಿದರು.

 

ಅಂದು ಇಂದಿನ ಮುಖ್ಯಮಂತ್ರಿಗಳು ನನ್ನ ಸಂಪುಟದಲ್ಲಿ ಹಣಕಾಸು ಮಂತ್ರಿಯಾಗಿದ್ದರು. ಅವರಿಗೆ ಈ ಎಲ್ಲಾ ವಿಚಾರಗಳು ಗೊತ್ತಿವೆ. ಧರ್ಮಸಿಂಗ್ ಸರ್ಕಾರದಲ್ಲಿ ಹಣಕಾಸು ಖಾತೆ ಮಾತ್ರ ನೀಡಿ ಅಬಕಾರಿ ಖಾತೆ ನೀಡಲಿಲ್ಲ ಎಂಬ ಕಾರಣಕ್ಕೆ ಅವರು ಮುನಿಸಿಕೊಂಡಿದ್ದರು ಎಂದು ಅವರು ಟೀಕಿಸಿದರು.

 

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕುಮಾರಸ್ವಾಮಿ ಅವರು ಪಂಚರತ್ನ ಯೋಜನೆಗಳ ಮೂಲಕ ಉಚಿತ ಮನೆ, ಉಚಿತ ಶಿಕ್ಷಣ, ಉಚಿತ ಆರೋಗ್ಯ ಹಾಗೂ ಉದ್ಯೋಗದ ಭರವಸೆ ನೀಡಿದ್ದರು. ಆದರೆ ಕಾಂಗ್ರೆಸ್ ಪಕ್ಷ ಕೊನೆಯ ಕ್ಷಣದಲ್ಲಿ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿ ಜನರನ್ನು ಸೆಳೆದಿತು. ಈಗ ಅದೇ ಗ್ಯಾರಂಟಿಗಳು ರಾಜ್ಯ ಬೊಕ್ಕಸಕ್ಕೆ ಹೊರೆ ಆಗಿವೆ ಎಂದು ಅವರು ಹೇಳಿದರು.

 

ಜೆಡಿಎಸ್ ಪಕ್ಷ ಬಲಿಷ್ಠವಾಗಿದ್ದು, ನಾವು ಎನ್‌ಡಿಎ ಮೈತ್ರಿಯಲ್ಲಿದ್ದೇವೆ. ಮೈತ್ರಿಯನ್ನು ಉಳಿಸಿಕೊಂಡು ಪಕ್ಷವನ್ನು ಇನ್ನಷ್ಟು ಸಂಘಟಿಸುವ ಕೆಲಸ ಮುಂದುವರೆಯಲಿದೆ. ಮಾಲೂರು ಮುಖಂಡರ ಸೇರ್ಪಡೆ ಅದಕ್ಕೆ ಒಂದು ಆರಂಭ ಮಾತ್ರ ಎಂದು ದೇವೇಗೌಡರು ಹೇಳಿದರು.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Tags: #-pratidhvaniBengaluru's sewageChikkaballapurCMDeve GowdaKolar
Previous Post

SSLC, PUC ಪಾಸಾಗಲು ಎಷ್ಟು ಅಂಕ ಪಡೆಯಬೇಕು? ಇಲ್ಲಿದೆ ಅಧಿಕೃತ ಮಾಹಿತಿ

Next Post

ಸರ್ವನಾಶದ ಹಾದಿಯೂ ಆಧಿಪತ್ಯದ ಹಂಬಲವೂ

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

April 18, 2026
ಪ್ಯಾರಾಚೂಟ್​ ತರಬೇತಿ ವೇಳೆ ಅವಘಡ ಸೇನಾ ಸಿಬ್ಬಂದಿಗೆ ಗಾಯ : ಮುಂದೇನಾಯ್ತು..?

ಪ್ಯಾರಾಚೂಟ್​ ತರಬೇತಿ ವೇಳೆ ಅವಘಡ ಸೇನಾ ಸಿಬ್ಬಂದಿಗೆ ಗಾಯ : ಮುಂದೇನಾಯ್ತು..?

April 18, 2026
Next Post
ಸರ್ವನಾಶದ ಹಾದಿಯೂ ಆಧಿಪತ್ಯದ ಹಂಬಲವೂ

ಸರ್ವನಾಶದ ಹಾದಿಯೂ ಆಧಿಪತ್ಯದ ಹಂಬಲವೂ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada