ಸಿಂಧಗಿ ಹಾಗೂ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಅಕ್ಟೋಬರ್ 30 ಕ್ಕೆ ಘೋಷಣೆ ಆಗಿದ್ದು. ನಿಯಾಜ್ ಶೇಕ್ ನಾಮಪತ್ರವನ್ನು ಗುರುವಾರ ಸಲಿಸಿದ್ದಾರೆ. ಇತರ ರಾಜ್ಯಗಳ ಚುನಾವಣೆಗಳ ಜೊತೆ ರಾಜ್ಯದ ಎರಡು ಕ್ಷೇತ್ರಗಳ ಉಪ ಚುನಾವಣೆಯನ್ನು ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಿದೆ.
ಹಾನಗಲ್ ಉಪ ಚುನಾವಣೆ ಅಭ್ಯರ್ಥಿ ನಿಯಾಜ್ ಶೇಕ್ ಗೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸಾಥ್ ನೀಡಿದ್ದಾರೆ.ನಾಮಪತ್ರ ಸಲ್ಲಿಸಿದ್ದ ನಂತರ ಮಾತನಾಡಿದ ಅವರು, ಈ ಬಾರಿ ಯುವಕರಿಗೆ ಹೆಚ್ಚಿನ ಆದ್ಯತೆಯನ್ನು ನೀಡಿದ್ದೇವೆ ಎಂದು ನಿಖಿಲ್ ಹೇಳಿದ್ದಾರೆ.
ದೇವೇಗೌಡರು ಪ್ರಧಾನ ಮಂತ್ರಿಯಾಗಿದ್ದಾಗ ಮುಸ್ಲಿಂ ಸಮುದಾಯಕ್ಕೆ ಶೇಕಡಾ ನಾಲ್ಕರಷ್ಟು ಮೀಸಲಾತಿ ನೀಡಿದ್ದರು. ಮುಸ್ಲಿಂ ಸಮುದಾಯಕ್ಕೆ ನಮ್ಮ ಜೆಡಿಎಸ್ ಪಕ್ಷದ ದೊಡ್ಡ ಕೊಡುಗೆ ಇದೆ. ಹಾಗೆಂದ ಮಾತ್ರಕ್ಕೆ ನಾವು ಒಂದು ಜಾತಿ, ಒಂದು ಧರ್ಮ ಟಾರ್ಗೆಟ್ ಮಾಡಿಕೊಂಡು ಹೋಗುವ ಪಕ್ಷದವರಲ್ಲ. ಹಾನಗಲ್ ಮತ್ತು ಸಿಂಧಗಿ ಕ್ಷೇತ್ರದ ಜನರ ಅಭಿಪ್ರಾಯಗಳಿಗೆ, ಭಾವನೆಗಳಿಗೆ ದೇವೇಗೌಡರು, ಕುಮಾರಸ್ವಾಮಿ ಅವರು ಎಂದಿಗೂ ಬೆಲೆ ಕೊಡುತ್ತಾರೆ ಎಂದು ನಿಖಿಲ್ ಕುಮಾರಸ್ವಾಮಿ ಆಭಿಪ್ರಾಯಪಟ್ಟಿದ್ದಾರೆ.

2018 ರಲ್ಲೂ ಕಾಂಗ್ರೆಸ್ ನಾಯಕರು ಜೆಡಿಎಸ್ ಬಿಜೆಪಿಯ ಬಿ ಟೀಂ ಅಂತಾ ಹೇಳ್ತಿದ್ರು ಅವರ ರಾಜಕೀಯ ಲಾಭಕ್ಕೆ ಕಾಂಗ್ರೆಸ್ ನಾಯಕರು ಈ ರೀತಿ ಹೇಳಿಕೆ ನೀಡುತ್ತಾರೆ ಅದರ ಬಗ್ಗೆ ನಾನು ಹೆಚ್ಚು ಚರ್ಚೆ ಮಾಡಲು ಹೋಗಲ್ಲ. ವಿದ್ಯಾವಂತ ಯುವಕನಿಗೆ ಟಿಕೆಟ್ ನೀಡಿದ್ದೇವೆ ಅದರ ಬಗ್ಗೆ ನಮಗೆ ಹೆಮ್ಮೆ ಇದೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ
ಅಕ್ಟೋಬರ್ 30 ಸಿಂಧಗಿ ಹಾಗೂ ಹಾನಗಲ್ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ನಡೆಯಲಿದೆ. ಕಾಂಗ್ರೆಸ್ ಬಿಜೆಪಿ ಹಾಗೂ ಜೆಡಿಎಸ್ ಮೂರು ಪಕ್ಷಗಳು ತಮ್ಮ ಅಭ್ಯರ್ಥಿಯನ್ನು ಘೋಷಣೆ ಮಾಡಿವೆ. ಹಾನಗಲ್ ಹಾಗೂ ಸಿಂಧಗಿ ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಹಾನಗಲ್‌ನಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಶಿವರಾಜ ಸಜ್ಜನರ್ ಅವರನ್ನು ಹಾಗೂ ಸಿಂಧಗಿಯಲ್ಲಿ ಮಾಜಿ ಶಾಸಕ ರಮೇಶ ಭೂಸನೂರ ಅವರನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿದೆ

ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಘೋಷಿಸಿದ್ದು, ಸಿಂಧಗಿ ವಿಧಾನಸಭಾ ಕ್ಷೇತ್ರಕ್ಕೆ ದಿ||ಎಂ.ಸಿ.ಮನಗೊಳಿ ಪುತ್ರ ಅಶೋಕ್ ಮನಗೊಳಿರವರು ಕಾಂಗ್ರೆಸ್ ಹುರಿಯಾಳಾಗಿದ್ದಾರೆ ಮತ್ತು ಹಾನಗಲ್ ಕ್ಷೇತ್ರದಲ್ಲಿ ಶ್ರೀನಿವಾಸ್ ಮಾನೆ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ. ಇನ್ನೂ ಜೆಡಿಎಸ್ ಸಿಂಧಗಿ ಕ್ಷೇತ್ರದಲ್ಲಿ ನಾಜಿಯಾ ಶಕೀಲ್ ಅಂಗಡಿಯವರನ್ನು ಘೋಷಿಸಿದ್ದು ಅವರು ನಾಮಪತ್ರವನ್ನು ಸಲಿಸಿದ್ದಾರೆ. ಹಾಗೂ ಹಾನಗಲ್ ಕ್ಷೇತ್ರದಲ್ಲಿ ನಿಯಾಜ್ ಖಾನ್ ಅವರು ಜೆಡಿಎಸ್ ಪಕ್ಷದಿಂದ ಚುನಾವಣೆಗೆ ಸ್ಪರ್ಧಿಸಲ್ಲಿದಾರೆ.