ಜ್ವರ ಹಾಗೂ ಯೂರಿನ್ ಸೋಂಕಿನಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ್ರು ಚೇತರಿಸಿಕೊಂಡಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಮುಂದಿನ ಕೆಲವು ದಿನಗಳ ಕಾಲ ಮನೆಯಲ್ಲಿ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ. ದೇವೇಗೌಡ್ರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ಬಂದು ಪುಸ್ತಕ ಓದಿದ್ದಾರೆ.

ಹೆಚ್ ಡಿ ದೇವೇಗೌಡರ (HD Devegowda) ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಚಳಿಜ್ವರ ಮತ್ತು ಮೂತ್ರದ ಸೋಂಕಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದ ದೇವೇಗೌಡರ ಆರೋಗ್ಯದಲ್ಲಿ ಸುಧಾರಣೆಯಾಗಿದೆ. ಹೀಗಾಗಿ ಇಂದು (ಅಕ್ಟೋಬರ್ 13) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಆಸ್ಪತ್ರೆಯಿಂದ ಮನೆಗೆ ಬರುತ್ತಿದ್ದಂತೆಯೇ ಕೈಯಲ್ಲಿ ಪುಸ್ತಲ ಹಿಡಿದು ಓದುತ್ತ ಕುಳಿತ್ತಿದ್ದಾರೆ. 94ರ ಇಳಿವಯಸ್ಸಿನಲ್ಲಿ ಅನಾರೋಗ್ಯದ ನಡುವೆಯೂ ಬುಕ್ ಓದುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟೆ ವೈರಲ್ ಆಗಿದ್ದು, ದೊಡ್ಡಗೌಡ್ರು ಎಷ್ಟು ಗಟ್ಟಿಮುಟ್ಟು ನೋಡಿ ಎಂದು ನೆಟ್ಟಿಗರು ಕೊಂಡಿದ್ದಾರೆ.
ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಪದ್ಮನಾಭ ನಗರದಲ್ಲಿರುವ ನಿವಾಸಕ್ಕೆ ಆಗಮಿಸಿ, ಬಳಿಕ ದೇವರ ಸ್ತೂತ್ರಗಳ ಪುಸ್ತಕವನ್ನು ಓದಿದ್ದಾರೆ. ಪ್ರತಿ ದಿನ ದೇವರ ಸ್ತೋತ್ರಗಳನ್ನು ಓದುವ ಹವ್ಯಾಸ ಬೆಳೆಸಿಕೊಂಡಿದ್ದಾರೆ. ಅನಾರೋಗ್ಯದ ಸಲುವಾಗಿ ಆಸ್ಪತ್ರೆಗೆ ದಾಖಲಾಗಿದ್ದ ದೇವೇಗೌಡ್ರು ಕೆಲವು ದಿನ ಪುಸ್ತಕ ಓದಲು ಸಾಧ್ಯವಾಗಿರಲಿಲ್ಲ. ಇದೀಗ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುತ್ತಿದ್ದಂತೆಯೇ ಮನೆಗೆ ಬಂದು ದೇವರುಗಳ ಸ್ತೋತ್ರಗಳ ಪುಸ್ತಕವನ್ನು ಓದಿದ್ದಾರೆ.

ಆಸ್ಪತ್ರೆಯಿಂದ ಮನೆಗೆ ಬಂದು ಪುಸ್ತಕ ಓದುತ್ತಿರುವ ಫೋಟೋವನ್ನು ದೇವೇಗೌಡ್ರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಕೆಲವು ದಿನಗಳ ಆಸ್ಪತ್ರೆಯಲ್ಲಿ ಕಳೆದ ನಂತರ ಮನೆಗೆ ಮರಳಿದ್ದೇನೆ. ದೇವರ ದಯೆಯಿಂದ ನನ್ನ ಆರೋಗ್ಯ ಸ್ಥಿರವಾಗಿದೆ. ನನಗೆ ಚಿಕಿತ್ಸೆ ನೀಡಿದ್ದಕ್ಕಾಗಿ ಮಣಿಪಾಲ್ ಆಸ್ಪತ್ರೆ ವೈದ್ಯರಿಗೆ ಕೃತಜ್ಞನಾಗಿದ್ದೇನೆ. ನನ್ನ ಚೇತರಿಕೆಗಾಗಿ ಪ್ರಾರ್ಥಿಸಿದ ಎಲ್ಲರಿಗೂ ಮತ್ತು ನನ್ನನ್ನು ನೋಡಲು ಬಂದ ಸ್ನೇಹಿತರು ಮತ್ತು ನಾಯಕರಿಗೆ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ. ಇನ್ನು ನಾನು ಶೀಘ್ರದಲ್ಲೇ ನನ್ನ ಸಾರ್ವಜನಿಕ ಕರ್ತವ್ಯಗಳನ್ನು ಪುನರಾರಂಭಿಸುತ್ತೇನೆ ಎಂದು ಟ್ವೀಟ್ ಮಾಡಿಕೊಂಡಿದ್ದಾರೆ.