• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, August 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

M B Patil: ಧಾರವಾಡದಲ್ಲಿ ಜಪಾನಿನ ಹಿಟಾಚಿ ಮಷಿನರಿ ಕಂಪನಿಯ ಅಭಿವೃದ್ಧಿ ಕೇಂದ್ರ ಸ್ಥಾಪನೆ : ಎಂ. ಬಿ. ಪಾಟೀಲ

ಪ್ರತಿಧ್ವನಿ by ಪ್ರತಿಧ್ವನಿ
September 9, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ
0
Share on WhatsAppShare on FacebookShare on Telegram

ಜಪಾನ್‌ನಲ್ಲಿ ರಾಜ್ಯದ ನಿಯೋಗದ ಎರಡನೆ ದಿನದ ಯಶಸ್ವಿ ರೋಡ್‌ಷೋ, ರೆನೆಸಾಸ್‌ ಎಲೆಕ್ಟ್ರಾನಿಕ್ಸ್‌ , ಅಸಾಯಿ ಕಸೆಯಿ, ಹಿಟಾಚಿ ಕನ್‌ಸ್ಟ್ರಕ್ಷನ್‌ ಮತ್ತು ಯಮಹಾ ರೋಬೊಟಿಕ್ಸ್‌ ಜೊತೆ ಸಮಾಲೋಚನೆ. • ಮೈಸೂರಿನಲ್ಲಿ ಆರ್‌ಆ್ಯಂಡ್‌ಡಿ ಕೇಂದ್ರ ಸ್ಥಾಪಿಸಲು ಅಸಾಹಿ ಕಸೆಯಿ ಕಂಪನಿಗೆ ಮನವಿ

ADVERTISEMENT

ʼಜಪಾನಿನ ಹಿಟಾಚಿ ಕನ್‌ಸ್ಟ್ರಕ್ಷನ್‌ ಮಷಿನರಿ ಕಂಪನಿಯು ಧಾರವಾಡದಲ್ಲಿ ನಿರ್ಮಾಣ ಯಂತ್ರೋಪಕರಣಗಳ ಅಭಿವೃದ್ಧಿ ಕೇಂದ್ರ ಸ್ಥಾಪಿಸಲಿದೆʼ ಎಂದು ಬೃಹತ್ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ಅವರು ತಿಳಿಸಿದ್ದಾರೆ.

ಜಪಾನ್‌ಗೆ ಭೇಟಿ ನೀಡಿರುವ ಸಚಿವರ ನೇತೃತ್ವದ ಉನ್ನತ ಮಟ್ಟದ ನಿಯೋಗವು ಮಂಗಳವಾರ ಕಂಪನಿಯ ಉನ್ನತ ಅಧಿಕಾರಿಗಳ ಜೊತೆ ನಡೆಸಿದ ಸಭೆಯಲ್ಲಿ ಈ ನಿರ್ಧಾರ ಪ್ರಕಟಿಸಲಾಗಿದೆ.

ʼಧಾರವಾಡದಲ್ಲಿ 2027ರ ವೇಳೆಗೆ ಕಾರ್ಯಾರಂಭ ಮಾಡಲಿರುವ ಈ ಕೇಂದ್ರವು, ನಿರ್ಮಾಣ ಯಂತ್ರೋಪಕರಣಗಳ ಜಾಗತಿಕ ಉತ್ಪನ್ನಗಳ ವಿನ್ಯಾಸ ರೂಪಿಸಲು ಮತ್ತು ಅಭಿವೃದ್ಧಿಪಡಿಸಲು ಆದ್ಯತೆ ನೀಡಲಿದೆ. 200 ಎಂಜಿನಿಯರ್‌ಗಳಿಗೆ ಇಲ್ಲಿ ಉದ್ಯೋಗ ಅವಕಾಶಗಳು ದೊರೆಯಲಿವೆ. ಜಾಗತಿಕ ಇತರ ತಾಣಗಳ ತೀವ್ರ ಪೈಪೋಟಿ ಮಧ್ಯೆಯೂ ಧಾರವಾಡವನ್ನು ಆಯ್ಕೆ ಮಾಡಿರುವುದು ಪ್ರಮುಖ ಮೈಲುಗಲ್ಲು ಆಗಿರುವುದರ ಜೊತೆಗೆ, ಬೆಂಗಳೂರಿನ ಆಚೆಗೆ ಬಂಡವಾಳ ಹೂಡಿಕೆ ಆಕರ್ಷಿಸುವ ರಾಜ್ಯ ಸರ್ಕಾರದ ಧ್ಯೇಯಕ್ಕೆ ಪೂರಕವಾಗಿದೆʼ ಎಂದು ಸಚಿವರು ತಿಳಿಸಿದ್ದಾರೆ.

ನಿಯೋಗವು ತನ್ನ ಜಪಾನ್‌ ಭೇಟಿಯ ಎರಡನೆ ದಿನ, ರೆನೆಸಾಸ್‌ ಎಲೆಕ್ಟ್ರಾನಿಕ್ಸ್‌ , ಅಸಾಯಿ ಕಸೆಯಿ, ಹಿಟಾಚಿ ಕನ್‌ಸ್ಟ್ರಕ್ಷನ್‌ ಮತ್ತು ಯಮಹಾ ರೋಬೊಟಿಕ್ಸ್‌ನ ಉನ್ನತ ಅಧಿಕಾರಿಗಳ ಜೊತೆಗೆ ಸಮಾಲೋಚನೆ ನಡೆಸಿತು.

ಬೆಂಗಳೂರಿನಲ್ಲಿ ಏರ್‌ಬ್ಯಾಗ್‌ ಬಿಡಿಭಾಗಗಳನ್ನು ತಯಾರಿಸುವ ಘಟಕ ಸ್ಥಾಪಿಸುವುದಾಗಿ ಅಸಾಹಿ ಕಸೆಯಿ-ನ ಅಂಗಸಂಸ್ಥೆಯಾಗಿರುವ ಅಸಾಹಿ ಕಸೆಯಿ ಅಡ್ವಾನ್ಸ್‌ ಪ್ರಕಟಿಸಿದೆ. ಈ ಹೂಡಿಕೆ ನಿರ್ಧಾರವು ಕರ್ನಾಟಕದಲ್ಲಿ ವಾಹನ ತಯಾರಿಕಾ ವಲಯವು ಗಮನಾರ್ಹವಾಗಿ ವಿಸ್ತರಣೆಯಾಗುತ್ತಿರುವುದಕ್ಕೆ ಪೂರಕವಾಗಿದೆ.

ಈ ನಿರ್ಧಾರ ಪ್ರಕಟಿಸಿರುವುದಕ್ಕೆ ಸಚಿವರು ಕಂಪನಿಗೆ ರಾಜ್ಯ ಸರ್ಕಾರದ ಪರವಾಗಿ ಧನ್ಯವಾದ ಅರ್ಪಿಸಿದ್ದಾರೆ. ಟೆಕ್ಸ್‌ಟೈಲ್ಸ್‌, ಎಲೆಕ್ಟ್ರಾನಿಕ್ಸ್‌ ಮತ್ತು ಕೆಮಿಕಲ್ಸ್‌ ಕ್ಷೇತ್ರಗಳಲ್ಲಿನ ತನ್ನ ಜಾಗತಿಕ ಪರಿಣತಿಯನ್ನು ಕರ್ನಾಟಕದಲ್ಲಿಯೂ ವಿಸ್ತರಿಸಲು ಮುಂದಾಗಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.
ಭಾರತದಲ್ಲಿ ತನ್ನ ಹೊಸ ಸಂಶೋಧನೆ ಹಾಗೂ ಅಭಿವೃದ್ಧಿ ಕೇಂದ್ರ ಸ್ಥಾಪಿಸುವಾಗ ಮೈಸೂರು ನಗರವನ್ನು ಆದ್ಯತೆ ಮೇರೆಗೆ ಪರಿಗಣಿಸಬೇಕು ಎಂದು ರಾಜ್ಯದ ನಿಯೋಗವು ಜಪಾನಿನ ಸೆಮಿಕಂಡಕ್ಟರ್‌ ದೈತ್ಯ ಕಂಪನಿ ರೆನೆಸಾಸ್‌ ಎಲೆಕ್ಟ್ರಾನಿಕ್ಸ್‌ಗೆ ಮನವಿ ಮಾಡಿಕೊಂಡಿದೆ. ನಾವೀನ್ಯತೆ ಆಧಾರಿತ ಹೂಡಿಕೆಗೆ ಮೈಸೂರು ನಗರವು ಅತ್ಯುತ್ತಮ ತಾಣವಾಗಿರುವುದನ್ನು ಸಭೆಯಲ್ಲಿ ವಿವರಿಸಲಾಯಿತು.

ಬೆಂಗಳೂರಿನಲ್ಲಿ ತನ್ನ ತಯಾರಿಕಾ ಘಟಕ ಸ್ಥಾಪಿಸಬೇಕು ಎಂದು ನಿಯೋಗವು ಯಮಹಾ ರೋಬೊಟಿಕ್ಸ್‌ಗೆ ಮನವಿ ಮಾಡಿಕೊಂಡಿದೆ. ಇದರಿಂದ ಭಾರತದಲ್ಲಿ ಹೆಚ್ಚುತ್ತಿರುವ ಕಂಪನಿಯ ಸ್ಥಳೀಯ ಗ್ರಾಹಕರಿಗೆ ಉತ್ತಮ ಸೇವೆ ಸಲ್ಲಿಸಲು ನೆರವಾಗಲಿರುವುದನ್ನು ನಿಯೋಗವು ಮನದಟ್ಟು ಮಾಡಿಕೊಟ್ಟಿತು.

ಎರಡನೆ ದಿನದ ಯಶಸ್ವಿ ರೋಡ್‌ಷೋದಲ್ಲಿ ರಾಜ್ಯದ ನಿಯೋಗವು, ರಾಜ್ಯದಲ್ಲಿ ಹೊಸ ಬಂಡವಾಳ ಹೂಡಿಕೆ ಮಾಡಲು ಮತ್ತು ಕರ್ನಾಟಕದ ಜೊತೆ ವಾಣಿಜ್ಯ ಬಾಂಧವ್ಯ ಬಲಪಡಿಸಲು ಜಪಾನಿನ ಪ್ರಮುಖ ಬಹುರಾಷ್ಟ್ರೀಯ ಕಂಪನಿಗಳಿಗೆ ಮನವಿ ಮಾಡಿಕೊಂಡಿತು.

ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತರಾದ ಗುಂಜನ್ ಕೃಷ್ಣ ಸೇರಿದಂತೆ ಇತರರು ಇದ್ದರು.

Tags: HK PatilM B Patilm b patil exclusive talksm b patil newsm b patil son engagementm b patil vs shivananda patilmb patil​MB Patilmb patil bhashanmb patil bijapurmb patil congressmb patil familymb patil fansmb patil housemb patil latestmb patil latest newsmb patil livemb patil meetingmb patil mlamb patil newsmb patil oathmb patil sonmb patil son basanmb patil songmb patil speechmb patil statementmb patil today newsmb patil videomb patil videosmbpatilMinister MB Patil
Previous Post

Lakshmi Hebbalkar: ಅಂಗನವಾಡಿ ನೇಮಕದಲ್ಲಿ ಭ್ರಷ್ಟಾಚಾರ ಸಹಿಸಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಎಚ್ಚರಿಕೆ

Next Post

Lakshmi Hebbalkar: ಕರ್ನಾಟಕ ಸರ್ಕಾರದ ಮಾಡೆಲ್‌ ಇಡೀ ದೇಶಕ್ಕೆ ಮಾದರಿ..!!

Related Posts

ನಾಯಿಯ ಮುಖವಾಡ ಧರಿಸಿ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ: ಕಾರಣವೇನು
Top Story

ನಾಯಿಯ ಮುಖವಾಡ ಧರಿಸಿ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ: ಕಾರಣವೇನು

by ಪ್ರತಿಧ್ವನಿ
August 19, 2026
0

ವಿರುದ್ಧ ಸಾಮಾನ್ಯವಾಗಿ ಪ್ರತಿಭಟನೆ, ಧರಣಿ, ರಸ್ತೆ ತಡೆ ಸೇರಿದಂತೆ ವಿವಿಧ ರೀತಿಯಲ್ಲಿ ಹೋರಾಟ ನಡೆಸುವುದನ್ನು ನೋಡಿದ್ದೇವೆ. ಆದರೆ ಮಧ್ಯಪ್ರದೇಶದ ಖಂಡ್ವಾ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ವಿಶಿಷ್ಟ ಪ್ರತಿಭಟನೆಯೊಂದು...

Read moreDetails
ರೇಣುಕಾಸ್ವಾಮಿ ಪ್ರಕರಣದ ಆರೋಪಿ ಪವಿತ್ರಾ ಗೌಡ ಮೊದಲ ಪತಿ ಸಂಜಯ್ ಸಿಂಗ್ ನಿಧನ

ರೇಣುಕಾಸ್ವಾಮಿ ಪ್ರಕರಣದ ಆರೋಪಿ ಪವಿತ್ರಾ ಗೌಡ ಮೊದಲ ಪತಿ ಸಂಜಯ್ ಸಿಂಗ್ ನಿಧನ

August 19, 2026
ಮಕ್ಕಳು, ಪ್ರವಾಸಿಗರಿಗೆ ಗುಡ್‌ನ್ಯೂಸ್‌ ಕೊಟ್ಟ ಕೆ.ಜೆ.ಜಾರ್ಜ್; ಹೇಳಿದ್ದೇನು?

ಮಕ್ಕಳು, ಪ್ರವಾಸಿಗರಿಗೆ ಗುಡ್‌ನ್ಯೂಸ್‌ ಕೊಟ್ಟ ಕೆ.ಜೆ.ಜಾರ್ಜ್; ಹೇಳಿದ್ದೇನು?

August 19, 2026
ಕೃಷಿ ಸಚಿವ ನರೇಂದ್ರಸ್ವಾಮಿ ಮನವಿಗೆ ಕೇಂದ್ರ ಸ್ಪಂದನೆ ಏನು?

ಕೃಷಿ ಸಚಿವ ನರೇಂದ್ರಸ್ವಾಮಿ ಮನವಿಗೆ ಕೇಂದ್ರ ಸ್ಪಂದನೆ ಏನು?

August 19, 2026
ಬೆಂಗಳೂರು ದಕ್ಷಿಣದಲ್ಲಿ ನಕಲಿ ಔಷಧಿ ಜಾಲ ಪತ್ತೆ: ₹5 ಕೋಟಿ ಮೌಲ್ಯದ ವಸ್ತು ವಶ

ಬೆಂಗಳೂರು ದಕ್ಷಿಣದಲ್ಲಿ ನಕಲಿ ಔಷಧಿ ಜಾಲ ಪತ್ತೆ: ₹5 ಕೋಟಿ ಮೌಲ್ಯದ ವಸ್ತು ವಶ

August 19, 2026
Next Post

Lakshmi Hebbalkar: ಕರ್ನಾಟಕ ಸರ್ಕಾರದ ಮಾಡೆಲ್‌ ಇಡೀ ದೇಶಕ್ಕೆ ಮಾದರಿ..!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada