ಚಿಕ್ಕಮಗಳೂರಿನ ಬಿಂಡಿಗ ದೇವಿರಮ್ಮ ಬೆಟ್ಟದಲ್ಲಿ ಭಕ್ತ ಸಾಗರವೇ ಹರಿದು ಬಂದಿದೆ. ಕಿರಿದಾದ ದುರ್ಗಮ ಹಾದಿಯಲ್ಲಿ ಬೆಟ್ಟ ಏರಿ ದೇವಿಯ ದರ್ಶನ ಪಡೆದಿದ್ದಾರೆ ಭಕ್ತರು. ಮೂರು ಸಾವಿರ ಅಡಿ ಎತ್ತರದ ಬೆಟ್ಟ ಏರಿ ದೇವಿರಮ್ಮ ದೇವಿ ದರ್ಶನ ಪಡೆದಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಸಮೀಪದ ಬಿಂಡಿಗ ದೇವಿರಮ್ಮ ಬೆಟ್ಟದಲ್ಲಿ ವರ್ಷಕ್ಕೊಮ್ಮೆ ಮಾತ್ರವೇ ದರ್ಶನ ನೀಡಲಿದ್ದು, ದೀಪಾವಳಿಯ ಮೊದಲ ದಿನ ಪೂಜೆ ಸಲ್ಲಿಸಲಾಗುತ್ತದೆ.
ಚಿಕ್ಕಮಗಳೂರಿನ ದೇವಿರಮ್ಮ ಬೆಟ್ಟದಲ್ಲಿ ಭಕ್ತರು ಸಾಗರೊಪಾದಿಯಲ್ಲಿ ಹರಿದು ಬಂದಿದ್ದು, ಜನರನ್ನು ನಿಯಂತ್ರಿಸಲು ಹರಸಾಹಸ ಮಾಡಲಾಗಿದೆ. 10ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ. ಹಲವರು ಬೆಟ್ಟದಿಂದ ಜಾರಿ ಪ್ರಪಾತಕ್ಕೆ ಬಿದ್ದಿದ್ದಾರೆ. ಎಲ್ಲರನ್ನೂ ರಕ್ಷಣೆ ಮಾಡುವ ಕೆಲವನ್ನು ಪೊಲೀಸ್ರು ಹಾಗು ಅಗ್ನಿಶಾಮಕ ದಳ ಸಿಬ್ಬಂದಿ ಮಾಡಿದ್ದಾರೆ.
ದುರ್ಗಮ ಮಾರ್ಗದ ಬೆಟ್ಟದಿಂದ ಕಾಲು ಜಾರಿ ಯುವಕ ಬಿದ್ದಿದ್ದು, ಯುವಕನ ಕಾಲಿಗೆ ಗಂಭೀರ ಗಾಯಗಳಾಗಿವೆ. ಸ್ಟ್ರಚರ್ ಮೂಲಕ ಬೆಟ್ಟದ ಮೇಲಿಂದ ಹೊತ್ತು ತಂದಿದ್ದಾರೆ ಪೊಲೀಸ್ ಸಿಬ್ಬಂದಿ. 5 ಕಿಮೀ ಗಿಂತಲೂ ಅಧಿಕ ದೂರ ಹೊತ್ತು ತಂದಿದ್ದಾರೆ. ಆ ಬಳಿಕ ಆಂಬುಲೆನ್ಸ್ ಮೂಲಕ ಚಿಕ್ಕಮಗಳೂರು ನಗರದ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.