ದಕ್ಷಿಣ ಕಾಶಿ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯದಲ್ಲಿ ಭಾನುವಾರ ಹುಣ್ಣಿಮೆ ದಿನ ಆದುದರಿಂದ ದೇವಾಲಯಕ್ಕೆ ಭಕ್ತಾದಿಗಳು ಆಗಮಿಸಿ ಶ್ರೀಕಂಠೇಶ್ವರನ ದರ್ಶನ ಪಡೆದ್ರು. ಭಾನುವಾರ ಬೆಳಗಿನ ಜಾವ ಮೂರು ಗಂಟೆಯಿಂದಲೇ ಕಪಿಲಾ ನದಿಯಲ್ಲಿ ಮಿಂದು ದೇವಾಲಯ ಸುತ್ತ ಉರುಳು ಸೇವೆ ದೂಪದ ಸೇವೆ ಮಾಡಿದರು. ಭಕ್ತಾದಿಗಳು ಮುಡಿಸೇವೆ ಪಂಚಮುಡಿ ಸೇವೆ ಬಿಲ್ಪತ್ರೆ ಸೇವೆ ದೀಪದ ಸೇವೆ ದೂಪದ ಸೇವೆ ಮಾಡಿ ದೇವಾಲಯ ಒಳಗಡೆ ಸರತಿ ಸಾಲಿನಲ್ಲಿ ನಿಂತು ದರ್ಶನ ಪಡೆದರು.ದೇವಾಲಯ ಆಡಳಿತ ಮಂಡಳಿ ವತಿಯಿಂದ ಭಕ್ತಾದಿಗಳಿಗೆ ದೇವರ ದರ್ಶನ ಮಾಡಲು ವ್ಯವಸ್ಥೆ ಮಾಡಲಾಗಿತ್ತು, ಬಿಸಿಲಿನ ತಾಪ ಹೆಚ್ಚುವುದರಿಂದ ಶಾಮಿಯಾನ ವ್ಯವಸ್ಥೆ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿತ್ತು. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಇದ್ದುದ್ದರಿಂದ ಬಿಗಿ ಪೊಲೀಸ್ ಬಂದೋ ಬಸ್ತ್ ವ್ಯವಸ್ಥೆ ಮತ್ತು ಟ್ರಾಫಿಕ್ ಇಲಾಖೆಯಿಂದ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದರು ಅಂಗಡಿಗಳಲ್ಲಿ ಭಕ್ತಾದಿಗಳಿಂದ ಹೆಚ್ಚಿನ ವ್ಯಾಪಾರ ನಡೆಯಿತು.


ಕೆಲ ಭಕ್ತರ ಆಕ್ರೋಶ..
ದಕ್ಷಿಣ ಕಾಶಿ ನಂಜನಗೂಡು ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದ ಆಡಳಿತ ಮಂಡಳಿ ವಿರುದ್ಧ ಕೆಲ ಭಕ್ತರು ಅಕ್ರೋಶ ವ್ಯಕ್ತಪಡಿಸಿದ್ದಾರೆ.ಪ್ರತಿ ಹುಣ್ಣುಮೆಯಂದು ದೇವಾಲಯಕ್ಕೆ ಭಕ್ತರು ಹೆಚ್ಚಾಗಿ ಆಗಿಸುತ್ತಾರೆ ಈ ಬಾರಿಯೂ ಭಕ್ತರ ಸಂಖ್ಯೆ ಹೆಚ್ಚಾಗಿದ್ದು ನೂಕುನುಗ್ಗಲು ಉಂಟಾಗಿದೆ. ಕೆಲವರು ತಮ್ಮ ಪ್ರಭಾವ ಬಳಸಿ ಅನಧಿಕೃತವಾಗಿ ದೇಗುಲಕ್ಕೆ ಪ್ರವೇಶ ಪಡೆದಿದ್ದಾರೆ. ದೇವರ ದರ್ಶನಕ್ಕೆ ಸರಿಯಾಗಿ ವ್ಯವಸ್ಥೆ ಕಲ್ಪಿಸದೆ ನಿರ್ಲಕ್ಷ್ಯ ವಹಿಸಿರುವ ದೇವಾಲಯದ ಆಡಳಿತ ಮಂಡಳಿ ವಿರುದ್ಧ ಭಕ್ತರು ಆಕ್ರೋಶ ವ್ಯಕ್ತಪಡಿಸಿದರು.ದೇವಾಲಯದ ಮುಂಭಾಗದಲ್ಲಿ ಭಕ್ತರನ್ನು ನಿಯಂತ್ರಿಸಲು ಪೊಲೀಸರು ವಿಫಲರಾಗಿದ್ದಾರೆ. ಬೆಳಿಗ್ಗೆಯಿಂದಲೇ ಸಾವಿರಾರು ಭಕ್ತರು ಸಾಲುಗಟ್ಟಿ ನಿಂತಿದ್ದರು. ದೇವಾಲಯದ ಒಳಗೆ ಮತ್ತು ಹೊರಗೆ ಬರಲು ಸಾಧ್ಯವಾಗದೇ ನೂಕುನುಗ್ಗಲು ಏರ್ಪಟ್ಟಿದೆ.
ಪ್ರತಿ ತಿಂಗಳು ಹುಣ್ಣಿಮೆಯಲ್ಲಿ ಇದೇ ರೀತಿ ನಡೆಯುತ್ತಿದೆ ಆದ್ದರಿಂದ ದೇವಾಲಯದ ಆಡಳಿತ ಮಂಡಳಿ ದೇವರ ದರ್ಶನಕ್ಕೆ ಉತ್ತಮ ವ್ಯವಸ್ಥೆ ಕಲ್ಪಿಸಬೇಕು ಎಂದು ಭಕ್ತರು ಒತ್ತಾಯಿಸಿದ್ದಾರೆ.