ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಧರಿಸುವ ಟಿ-ಶರ್ಟ್ ಹಾಗೂ ಪ್ರಧಾನಿ ಮೋದಿ ವಿದೇಶ ಪ್ರವಾಸದ ವೇಳೆ ಧರಿಸುವ ಸೂಟ್ ವಿಚಾರವಾಗಿ ಕಾಂಗ್ರೆಸ್-ಬಿಜೆಪಿ ನಾಯಕರ ನಡುವೆ ಕೆಸರೆರಚಾಟ ಶುರುವಾಗಿದ್ದು ಮಹತ್ವದ ಬೆಳವಣಿಗೆ ಕುರಿತು ಶಾಸಕ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದ್ದಾರೆ.
ನಮ್ಮ ನಾಯಕರಾದ ರಾಹುಲ್ ಗಾಂಧಿಯವರು ಧರಿಸಿರುವ ಟಿ-ಶರ್ಟ್ ಬಗ್ಗೆ ವಯಂಗ್ಯವಾಡಿರುವ ಬಿಜೆಪಿ ನಾಯಕರು ಅವರ ನಾಕರ ಸೂಟಿನ ಬೆಲೆಯ ಬಗ್ಗೆ ವ್ಯಂಗ್ಯವಾಡಲಿ ಎಂದು ಸವಾಲೆಸೆದಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ದಿನೇಶ್ ಗುಂಡೂರಾವ್ ಸ್ವಯಂಘೋಷಿತ ಫಕೀರ ಮೋದಿರವರು ಲಕ್ಷಾಂತರ ಬೆಲೆ ಬಾಳುವ ಸೂಟ ಬೂಟನ್ನು ಧರಿಸುತ್ತಾರೆ. ಇದು ಬಿಜೆಪಿಯವರ ಕಣ್ಣಿಗೆ ಕಾಣುವುದಿಲ್ಲವೇ. ಬಿಜೆಪಿಯವರೊಗೆ ರಾಹುಲ್ ಗಾಂಧಿಯವರ ಉಡುಗೆ ಬಗ್ಗೆ ಮಾತನಾಡಲು ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದ್ದಾರೆ.
ಫಕೀರ ಎಂದರೆ ಸಂತನ ಪ್ರತಿರೂಪ. ಫಕೀರ ಎಂದು ಕರೆಸಿಕೊಳ್ಳುವವರು ಆಡಂಬರ-ಐಷಾರಾಮಿ ಬದುಕು ಸಾಗಿಸಬಾರದು. ಬಿಜೆಪಿಯವರು ಮೊದಲು ಸ್ವಯಂಘೋಷಿತ ಫಕೀರ ಮೋದಿಯವರಿಗೆ ದುಬಾರಿ ಜೀವನ ತ್ಯಜಿಸಲು ಹೇಳಲಿ. ನಂತರ ರಾಹುಲ್ ಗಾಂಧಿಯವರ ಬಗ್ಗೆ ಮಾತಾಡಲಿ. ಅವರ ತಟ್ಟೆಯಲ್ಲೇ ಹೆಗ್ಗಣ ಬಿದ್ದು ಕೊಳೆಯುತ್ತಿದೆ. ಹೀಗಿರುವಾಗ ಇನ್ನೊಬ್ಬರ ತಟ್ಟೆಯ ಚಿಂತೆ ಯಾಕೆ? ಎಂದು ಟೀಕಿಸಿದ್ದಾರೆ.