• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, August 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

‘TRP ರಾಮ’ ಸಿನಿಮಾದಿಂದ ಬಂತು ಧರೆಗೆ ದೊಡ್ಡವಳು ಹಾಡು: ನ.3ಕ್ಕೆ ತೆರೆಗೆ ಬರ್ತಿದೆ ಮಹಾಲಕ್ಷ್ಮಿ ಕಂಬ್ಯಾಕ್ ಚಿತ್ರ

ಪ್ರತಿಧ್ವನಿ by ಪ್ರತಿಧ್ವನಿ
October 29, 2023
in Top Story, ಸಿನಿಮಾ
0
‘TRP ರಾಮ’ ಸಿನಿಮಾದಿಂದ ಬಂತು ಧರೆಗೆ ದೊಡ್ಡವಳು ಹಾಡು: ನ.3ಕ್ಕೆ ತೆರೆಗೆ ಬರ್ತಿದೆ ಮಹಾಲಕ್ಷ್ಮಿ ಕಂಬ್ಯಾಕ್ ಚಿತ್ರ
Share on WhatsAppShare on FacebookShare on Telegram

ಟ್ರೇಲರ್ ಮೂಲಕ ಭಾರೀ ಸದ್ದು ಮಾಡಿರುವ TRP ರಾಮ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ನವೆಂಬರ್ 3ರಂದು ರಾಜ್ಯಾದ್ಯಂತ ಚಿತ್ರ ತೆರೆಗೆ ಬರ್ತಿದೆ. ಹಿರಿಯ ನಟಿ ಮಹಾಲಕ್ಷ್ಮಿ ಕಂಬ್ಯಾಕ್ ಮಾಡ್ತಿರುವ TRP ರಾಮ ಸಿನಿಮಾದ ಧರೆಗೆ ದೊಡ್ಡವಳು ಎಂಬ ಹಾಡು ಅನಾವರಣಗೊಂಡಿದೆ. A2 ಮ್ಯೂಸಿಕ್ ಯೂಟ್ಯೂಬ್ ನಲ್ಲಿ ಈ ಗೀತೆ ರಿಲೀಸ್ ಆಗಿದ್ದು, ಲಿಂಗರಾಜು-ರವಿ ಪ್ರಸಾದ್ ಹಾಗೂ ಪ್ರವೀಣ್ ಸೂಡ ಸಾಹಿತ್ಯ ಬರೆದಿದ್ದು, ತಾಯಿ ಕುರಿತ ಈ ಹಾಡಿಗೆ ಸಾಧು ಕೋಕಿಲ ಧ್ವನಿಯಾಗಿದ್ದಾರೆ. ರಾಜ್ ಗುರು ಹೊಸಕೋಟೆ ಟ್ಯೂನ್ ಕೂಡ ಗಮನಾರ್ಹ. ಹಾಡು ಬಿಡುಗಡೆ ಕಾರ್ಯಕ್ರಮ ರೇಣುಕಾಂಬ ಸ್ಟುಡಿಯೋದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಚಿತ್ರತಂಡ ಮಾಧ್ಯಮದರೊಟ್ಟಿಗೆ ಸಾಕಷ್ಟು ಮಾಹಿತಿ ಹಂಚಿಕೊಂಡಿದೆ.

ADVERTISEMENT

ಹಿರಿಯ ನಟಿ ಮಹಾಲಕ್ಷ್ಷೀ ಮಾತನಾಡಿ, ,30 ವರ್ಷ ಆದ್ಮೇಲೆ ಒಂದೊಳ್ಳೆ ತಂಡದ ಜೊತೆ ಅಭಿನಯಿಸಿರುವ ಖುಷಿ ಇದೆ. ತಾಯಿ ಪಾತ್ರ ಮಾತ್ರವಲ್ಲ, ಇಡೀ ತಂಡ ತಾಯಿ ತರ ನೋಡಿಕೊಂಡರು. ಪ್ರಪಂಚದಲ್ಲಿ ಎರಡು ತರಹದ ಕುಟುಂಬ ಇರುತ್ತದೆ. ಒಂದು ನಾರ್ಮಲ್ ಫ್ಯಾಮಿಲಿ.. ಇನ್ನೊಂದು ಅಬ್ ನಾರ್ಮಲ್ ಫ್ಯಾಮಿಲಿ. ಅಬ್ ನಾರ್ಮಲ್ ಫ್ಯಾಮಿಲಿ ಎದುರಿಸುವ ಕಷ್ಟವನ್ನು ಕಟ್ಟಿಕೊಡುವುದೇ ಸಿನಿಮಾ ಕಥೆ. ಇದೊಂದು ಎಮೋಷನಲ್ ಸ್ಟೋರಿ. ಪ್ರತಿಯೊಬ್ಬರು ಕಷ್ಟಪಟ್ಟು ಕೆಲಸ ಮಾಡಿದ್ದಾರೆ. ಆ ಪರಿಶ್ರಮಕ್ಕೆ ಬೆಲೆ ಸಿಗಲಿದೆ ಎಂಬ ನಂಬಿಕೆ ಇದೆ. ಸಮಾಜಕ್ಕೆ ಒಂದೊಳ್ಳೆ ಸಂದೇಶ ಕೊಡುವ ಸಿನಿಮಾ ಇದು ಎಂದರು.

ನಿರ್ದೇಶಕ‌ ಕಂ ನಟ ರವಿ ಪ್ರಸಾದ್ ಮಾತನಾಡಿ, ಕಥೆ ಸಮಯದಿಂದಲೂ, ಸಾಂಗ್ ಬರೆಯುವಾಗಲೂ ಕಣ್ಣೀರು ಬಂದಿದೆ. ಬರೆದು ರಿಪೀಟ್ ಮಾಡುವಾಗ ಎಮೋಷನಲ್ ಆಗಿದ್ದೇನೆ. ಪ್ರತಿಯೊಬ್ಬರೂ ನೋಡಲೇಬೇಕಾದ ಸಿನಿಮಾ. ನವೆಂಬರ್ 3ಕ್ಕೆ ತೆರೆಗೆ ಬರ್ತಿದೆ. ಕನ್ನಡ ಚಿತ್ರಗಳು ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿವೆ. ನಾವು ಅದರಲ್ಲಿ ಒಂದು ಭಾಗವಾಗಿರುವುದಕ್ಕೆ ಖುಷಿ ಇದೆ. ತೆಲುಗು, ಮಲಯಾಳಂ, ತಮಿಳು ಭಾಷೆಗೆ ಡಬ್ ಮಾಡುವ ಪ್ಲಾನ್ ನಲ್ಲಿದ್ದೇವೆ. ಪ್ರಪಂಚದಲ್ಲಿ ನಡೆಯುವ ಸತ್ಯವನ್ನು ಸಿನಿಮಾದಲ್ಲಿ ಹೇಳಿದ್ದೇವೆ. ಸೋಷಿಯಲ್ ಜೊತೆಗೆ ಕಮರ್ಷಿಯಲ್ ಅಂಶಗಳು ಸಿನಿಮಾದಲ್ಲಿವೆ ಎಂದರು.

ಪತ್ರಕರ್ತೆ ಪಾತ್ರದಲ್ಲಿ ನಟಿಸಿರುವ ಸ್ಪರ್ಶ ಮಾತನಾಡಿ, ನವೆಂಬರ್ 3ಕ್ಕೆ ಸಿನಿಮಾ ರಿಲೀಸ್ ಆಗುತ್ತಿದೆ. ಸಾಮಾಜಿಕ ಜವಾಬ್ದಾರಿ ಇಟ್ಟುಕೊಂಡು ಮಾಡಿರುವ ಚಿತ್ರ. ಚಿತ್ರದ ಗೆಲುವಿನ ಜೊತೆಗೆ ಸಮಾಜಕ್ಕೆ ಗೆಲುವು ಸಿಕ್ಕಿದಾಗ ಹಾಗೇ ಎನ್ನುವುದು ನನ್ನ ಅಭಿಪ್ರಾಯ ಎಂದರು.

‘TRP ರಾಮ’ ಸಿನಿಮಾಗೆ ರವಿಪ್ರಸಾದ್‌ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದ ಪ್ರಮುಖ ಪಾತ್ರದಲ್ಲೂ ಅವರು ನಟಿಸಿದಾರೆ. ‘ಅಶುತೋಶ್ ಪಿಕ್ಚರ್ಸ್’ ಬ್ಯಾನರ್ ಮೂಲಕ ಈ ಸಿನಿಮಾ ನಿರ್ಮಾಣವಾಗಿದೆ. ತಾಯಿ ಪಾತ್ರದಲ್ಲಿ ಮಹಾಲಕ್ಷ್ಮಿ ನಟಿಸಿದ್ದಾರೆ. ಪತ್ರಕರ್ತೆಯಾಗಿ ಸ್ಪರ್ಶ ಅಭಿನಯಿಸಿದ್ದಾರೆ.

ರಾಜ್ ಗುರು ಹೊಸಕೋಟೆ ಅವರು ಸಂಗೀತ ನೀಡಿದ್ದಾರೆ. ಸುನಿಲ್ ಕಶ್ಯಪ್ ಅವರು ಸಂಕಲನ ಮತ್ತು ಗುರುಪ್ರಸಾದ್ ಅವರು ಛಾಯಾಗ್ರಹಣ ಮಾಡಿದ್ದಾರೆ. ರಾಕೇಶ್ ಆಚಾರ್ಯ ಅವರ ಹಿನ್ನೆಲೆ ಸಂಗೀತ, ಪ್ರವೀಣ್ ಸೂಡ ಅವರ ಸಂಭಾಷಣೆ ಈ ಚಿತ್ರಕ್ಕಿದೆ. TRP ಸತ್ಯ ಘಟನೆಗಳನ್ನ ಆಧರಿಸಿ ಬರ್ತಿರೋ ಸಿನಿಮಾ ಆಗಿದೆ. ಚಿತ್ರದ ನಿರ್ದೇಶಕ ರವಿ ಪ್ರಸಾದ್ ಇಲ್ಲಿ ಆ ವಿಕೃತ ರಾಮನ ಪಾತ್ರ ಮಾಡಿದ್ದಾರೆ. ಆದರೆ ಇಲ್ಲಿ “TRP” ಅಂದ್ರೇನೂ ಅನ್ನೋ ಪ್ರಶ್ನೆ ಕುತೂಹಲಕ್ಕೆ ನವೆಂಬರ್ 3ರಂದು ಉತ್ತರ ಸಿಗಲಿದೆ.

Tags: A2 Music YouTubeMahalakshmi comebackTRPRam
Previous Post

ಜಾತಿಗಣತಿ ವರದಿ ಸ್ವೀಕಾರಕ್ಕೆ ನಾವು ಬದ್ಧರಾಗಿದ್ದೇವೆ : CM ಸಿದ್ದರಾಮಯ್ಯ

Next Post

ಕೇಳದೆ ನಿಮಗೀಗ ದೂರದಲ್ಲಿ ಯಾರೋ: ‘ ಕಾಳಿಕಾಂಬೆಯ ಸನ್ನಿಧಿಯಲ್ಲಿ ಚಾಲನೆ

Related Posts

ಬಿಗ್ ಬಾಸ್‌ನ ಅಸಲಿ ಒಡೆಯ ಯಾರು? ಸುದೀಪ್‌ ಅಲ್ಲ, ಸಲ್ಮಾನ್‌ ಅಲ್ಲ; ಮತ್ಯಾರು ?
Top Story

ಬಿಗ್ ಬಾಸ್‌ನ ಅಸಲಿ ಒಡೆಯ ಯಾರು? ಸುದೀಪ್‌ ಅಲ್ಲ, ಸಲ್ಮಾನ್‌ ಅಲ್ಲ; ಮತ್ಯಾರು ?

by ಪ್ರತಿಧ್ವನಿ
August 29, 2026
0

ಕನ್ನಡ ಕಿರುತೆರೆಯಲ್ಲಿ ‘ಬಿಗ್ ಬಾಸ್’ ಎಂದರೆ ಕೇವಲ ರಿಯಾಲಿಟಿ ಶೋ ಅಲ್ಲ, ವೀಕ್ಷಕರಿಗೆ ಅದೊಂದು ಭಾವನಾತ್ಮಕ ಸಂಪರ್ಕ. ಪ್ರತಿವರ್ಷ ಬಿಗ್ ಬಾಸ್ ಮನೆಗೆ ಯಾರು ಪ್ರವೇಶಿಸುತ್ತಾರೆ, ಮನೆಯಲ್ಲಿ...

Read moreDetails
ರವಿಚಂದ್ರನ್‌ಗೆ ರಾಜಕೀಯ ಎಂಟ್ರಿ? ವಿಧಾನ ಪರಿಷತ್‌ಗೆ ನಾಮನಿರ್ದೇಶನದ ಚರ್ಚೆ; ಡಿಕೆಶಿ ಭೇಟಿ ಕುತೂಹಲ

ರವಿಚಂದ್ರನ್‌ಗೆ ರಾಜಕೀಯ ಎಂಟ್ರಿ? ವಿಧಾನ ಪರಿಷತ್‌ಗೆ ನಾಮನಿರ್ದೇಶನದ ಚರ್ಚೆ; ಡಿಕೆಶಿ ಭೇಟಿ ಕುತೂಹಲ

August 29, 2026
*’ಪಿಎಂ ಇ-ಡ್ರೈವ್’ಅಡಿ ಸರ್ಕಾರಿ ಇಲಾಖೆಗಳ ಆವರಣದಲ್ಲಿ ಇವಿ ಚಾರ್ಜಿಂಗ್ ಕೇಂದ್ರ ಸ್ಥಾಪನೆ: ಗೌರವ್‌ ಗುಪ್ತ*

*’ಪಿಎಂ ಇ-ಡ್ರೈವ್’ಅಡಿ ಸರ್ಕಾರಿ ಇಲಾಖೆಗಳ ಆವರಣದಲ್ಲಿ ಇವಿ ಚಾರ್ಜಿಂಗ್ ಕೇಂದ್ರ ಸ್ಥಾಪನೆ: ಗೌರವ್‌ ಗುಪ್ತ*

August 29, 2026
ಆರೋಪಗಳ ನಡುವೆಯೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಡಿಕೆಶಿ ಹೇಳಿದ್ದೇನು?

ಆರೋಪಗಳ ನಡುವೆಯೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಡಿಕೆಶಿ ಹೇಳಿದ್ದೇನು?

August 29, 2026
ಜಾತಿ ನೋಡದೆ ಆರ್ಥಿಕ ಸ್ಥಿತಿ ಆಧರಿಸಿ ಗ್ಯಾರಂಟಿ ಯೋಜನೆ ಜಾರಿ: ಡಿ.ಕೆ. ಶಿವಕುಮಾರ್

ಜಾತಿ ನೋಡದೆ ಆರ್ಥಿಕ ಸ್ಥಿತಿ ಆಧರಿಸಿ ಗ್ಯಾರಂಟಿ ಯೋಜನೆ ಜಾರಿ: ಡಿ.ಕೆ. ಶಿವಕುಮಾರ್

August 29, 2026
Next Post
ಕೇಳದೆ ನಿಮಗೀಗ ದೂರದಲ್ಲಿ ಯಾರೋ: ‘ ಕಾಳಿಕಾಂಬೆಯ ಸನ್ನಿಧಿಯಲ್ಲಿ ಚಾಲನೆ

ಕೇಳದೆ ನಿಮಗೀಗ ದೂರದಲ್ಲಿ ಯಾರೋ: ' ಕಾಳಿಕಾಂಬೆಯ ಸನ್ನಿಧಿಯಲ್ಲಿ ಚಾಲನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada