
ಧರ್ಮಸ್ಥಳದ ಸಮಾಧಿ ರಹಸ್ಯದ ಬಗ್ಗೆ ಎಸ್ಐಟಿ ತನಿಖೆ ನಿರ್ಣಾಯಕ ಹಂತ ತಲುಪಿದೆ. ಸಾಕ್ಷ್ಯ ದೂರುದಾರ ಗುರುತು ಮಾಡಿದ ಜಾಗಗಳಲ್ಲಿ ಉತ್ಖನನ ಕಾರ್ಯ ನಡೆದಿದ್ದು, ಕಾರ್ಯಾಚರಣೆ ಕೂಡ ಕೊನೆಯ ಹಂತಕ್ಕೆ ಬಂದಿದೆ. ಕಳೆದ ಕೆಲವು ವರ್ಷಗಳಿಂದ ಈ ಬಗ್ಗೆ ಚರ್ಚೆಗಳು ನಡೆಯುತ್ತಲೇ ಇದೆ. ಇದೀಗ ಧರ್ಮಸ್ಥಳ ಗ್ರಾಮದಲ್ಲಿ ರಹಸ್ಯವಾಗಿ ಬುರುಡೆ ಹೂತಿಡಲಾಗಿದೆ ಎನ್ನಲಾದ ಆರೋಪ ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿದೆ. ಈ ನಡುವೆ ಧರ್ಮಸ್ಥಳದಲ್ಲಿ ಯೂಟ್ಯೂಬರ್‌ಗಳು ಹಾಗೂ ಮತ್ತೊಂದು ಗುಂಪುಗಳ ನಡುವೆ ಜಟಾಪಟಿ ನಡೆದಿದ್ದು, ಗುಂಪು ಚದುರಿಸಲು ಪೊಲೀಸರು ಹರಸಾಹಸ ಪಟ್ಟ ಘಟನೆ ನಡೆದಿದೆ.

ಈ ಕುರಿತು ಕಾರ್ಕಳ ಬಿಜೆಪಿ ಶಾಸಕ ಸುನಿಲ್ ಕುಮಾರ್ ಅವರು ಧರ್ಮಸ್ಥಳದ ಪ್ರಕರಣದ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ..ಧರ್ಮಸ್ಥಳ ವಿಚಾರದಲ್ಲಿ ಸರ್ಕಾರ ಏನು ಮಾಡುತ್ತಿದೆ ? ಇದೇನು ತನಿಖೆಯೋ ? ದೊಂಬಿಯೋ?
ಹಿಂದು ಶ್ರದ್ಧಾ ಕೇಂದ್ರದ ಮೇಲೆ ನಡೆಯುತ್ತಿರುವ ಯೋಜಿತ ಅಪಪ್ರಚಾರದಲ್ಲಿ ಕಾಂಗ್ರೆಸ್ ಸರ್ಕಾರ ಯೂ ಟ್ಯೂಬರ್ ಗಳು ಹಾಗೂ ಅನ್ಯಮತೀಯರ ಕೈಗೊಂಬೆಯಾಗಿ ಕುಣಿಯುತ್ತಿದೆಯೇ ?
ನಾಡಿನ ಪ್ರಮುಖ ವಾಹಿನಿಯ ಮೇಲೆ, ಸ್ಥಳೀಯ ನಾಗರಿಕರ ಮೇಲೆ ಈ ಹೋರಾಟಗಾರರ ಸೋಗಿನ ವ್ಯಕ್ತಿಗಳು ಹಲ್ಲೆ, ಗೂಂಡಾಗಿರಿ ಮಾಡುತ್ತಿದ್ದರೂ ಪೊಲೀಸ್ ಇಲಾಖೆ ಏನು ಮಾಡುತ್ತಿದೆ ? ಸಹನೆಗೂ ಒಂದು ಮಿತಿ ಇದೆ. ಮೌನವನ್ನು ದೌರ್ಬಲ್ಯ ಎಂದು ಪರಿಗಣಿಸಬೇಡಿ. ಡಿಸಿಎಂ ಡಿಕೆ ಶಿವಕುಮಾರ್, ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಪರಮೇಶ್ವರ್ ಅವರೇ
ನೇತ್ರಾವತಿ ತಟದಲ್ಲಿ ತನಿಖೆ, ಬುರುಡೆ ಶೋಧದ ನೆಪದಲ್ಲಿ ಹಿಂದು ಧಾರ್ಮಿಕ ಕೇಂದ್ರಗಳ ವಿರುದ್ಧ ನಡೆಯುವ ಅಪಪ್ರಚಾರವನ್ನು ಸಹಿಸುವುದಕ್ಕೆ ಸಾಧ್ಯವಿಲ್ಲ.ಹೋರಾಟ ಹಾಗೂ ತನಿಖೆ ಜನರ ನಂಬಿಕೆಯನ್ನು ಘಾಸಿಗೊಳಿಸುವಂತಿರಬಾರದು.ಸರ್ಕಾರ ಈ ವಿಚಾರವನ್ನು ಗಮನದಲ್ಲಿಟ್ಟುಕೊಂಡು ಜಾಗೃತೆಯ ಹೆಜ್ಜೆ ಇಡಲಿ. ಜನರು ಬೀದಿಗೆ ಇಳಿಯುವ ಸಂದರ್ಭ ಸೃಷ್ಟಿಯಾಗದಿರಲಿ.ಎಂದು ಸರ್ಕಾರದ ವಿರುದ್ದ ಬಿಜೆಪಿ ಶಾಸಕ ಸುನಿಲ್ ಕುಮಾರ್ ವಾಗ್ದಾಳಿ













