ಕೇವಲ ರಾಜ್ಯ ಮಾತ್ರವಲ್ಲದೇ ಅಂತರರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾದ ಧರ್ಮಸ್ಥಳ ಪ್ರಕರಣ (Dharmasthala case) ಸಂಪೂರ್ಣ ಷಡ್ಯಂತ್ರದಿಂದ ಕೂಡಿದ್ದು, ಇದರ ತನಿಖೆಯನ್ನು NIAಗೆ ವಹಿಸಬೇಕು ಎಂದು ಮಠಾಧೀಶರು ಸೇರಿದಂತೆ ಬಿಜೆಪಿ (Bjp) ನಾಯಕರ ಆಗ್ರಹವಾಗಿದೆ.

ಈ ವಿಚಾರವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೊಂಚ ಕಾಲಾವಕಾಶ ಕೇಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಹೌದು ಈ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅಮಿತ್ ಶಾರನ್ನ ಭೇಟಿಯಾಗಿ ಧರ್ಮಸ್ಥಳ ಚಲೋ ಹೋರಾಟದ ಬಗ್ಗೆ ಮಾಹಿತಿ ನೀಡಿದ್ದಾರೆ. ಧರ್ಮಸ್ಥಳ ವಿರುದ್ಧ ಷಡ್ಯಂತ್ರ, ಪಿತೂರಿ ಬಗ್ಗೆಯೂ ವರದಿ ನೀಡಿ, ಧರ್ಮಸ್ಥಳ ಬುರುಡೆ ಪ್ರಕರಣವನ್ನು NIAಗೆ ನೀಡುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.

ಈ ವೇಳೆ ಸದ್ಯ ಬಿ.ವೈ ವಿಜಯೇಂದ್ರ ಅವರ ಮನವಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮಯಾವಕಾಶ ಕೇಳಿದ್ದು, ಪ್ರಕರಣವನ್ನು ಮತ್ತಷ್ಟು ಪರಿಶೀಲಿಸಿ, ಮಾಹಿತಿ ಪಡೆದು ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದ್ದಾರೆ ಎನ್ನಲಾಗ್ತಿದೆ.











