ಮುಡಾ ಪ್ರಕರಣದಲ್ಲಿ (Muda) ಸಿಬಿಐ ತನಿಖೆ (CBI Investigation) ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಈಗಾಗಲೇ ಪೂರ್ಣಗೊಂಡಿದ್ದು,ಈ ಸಂಬಂಧ ಕೋರ್ಟ್ ಇಂದು ಆದೇಶ ಪ್ರಕಟಿಸಲಿದೆ. ಮುಡಾ ನಿವೇಶನ ಹಂಚಿಕೆ ಸಂಬಂಧ ಸಿದ್ದರಾಮಯ್ಯ (Siddaramaiah) ವಿರುದ್ಧದ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಕೋರಿ ಸ್ನೇಹಮಯಿ ಕೃಷ್ಣ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಯ ವಿಚಾರಣೆ ಈಗಾಗಲೇ ಪೂರ್ಣಗೊಂಡಿದ್ದು, ಇಂದು ಬೆಳಗ್ಗೆ 10.30ಕ್ಕೆ ಧಾರವಾಡ ಹೈಕೋರ್ಟ್ ಪೀಠದಲ್ಲಿ ತೀರ್ಪು ಪ್ರಕಟವಾಗಲಿದೆ. ಹೀಗಾಗಿ ಕೋರ್ಟ್ ಏನು ತೀರ್ಪು ನೀಡುತ್ತೋ ಎನ್ನುವ ಟೆನ್ಷನ್ ಸಿಎಂ ರನ್ನ ಕಾಡುತ್ತಿದೆ.
ಇನ್ನು ಈ ಬಗ್ಗೆ ದೂರುದಾರ ಸ್ನೇಹಮಯಿಕೃಷ್ಣ (Snehamayi krishna) ಮಾತನಾಡಿ, ನಮ್ಮ ಪರ ಸಿಬಿಐ ತೀರ್ಪು ಬರಲಿದೆ, ನಮ್ಮ ಹೋರಾಟಕ್ಕೆ ಜಯ ಸಿಗಲಿದೆ ಎಂದಿದ್ದಾರೆ. ಮೊದಲಿನಿಂದಲೂ ನಮಗೆ ಲೋಕಾಯುಕ್ತದ ಮೇಲೆ ವಿಶ್ವಾಸ ಇರಲಿಲ್ಲ.ಆ ಕಾರಣಕ್ಕೆ ಸಿಬಿಐಗೆ ನೀಡಿ ಎಂದು ಮನವಿ ಮಾಡಿದ್ದೇವೆ. ನ್ಯಾಯಾಲಯ ನಮ್ಮ ಮನವಿ ಪುರಸ್ಕರಿಸುವ ವಿಶ್ವಾಸವಿದೆ ಎಂದಿದ್ದಾರೆ.