ಬೆಂಗಳೂರು (Bengaluru): ನರೇಂದ್ರ ಮೋದಿಯವರು (Narendra Modi) ಪ್ರಧಾನಿಯಾದರೆ ದೇಶ ತೊರೆಯುತ್ತೇನೆ ಎಂದು ಹೆಚ್.ಡಿ.ದೇವೇಗೌಡರು (H.D.Devegowda) ಹೇಳಿದ್ದು ಮರೆತುಹೋಯ್ತಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (siddaramaiah) ನುಡಿದರು.
ಇಂದು ಕರ್ನಾಟಕ ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯಲ್ಲಿ ಪುಟ್ಟಣ್ಣ (Puttanna) ಜಯಗಳಿಸಿರುವ ಹಿನ್ನೆಲೆಯಲ್ಲಿ ಕಂಗೇರಿಯ ಸೂಲಿಕೇರಿ ಮೈದಾನದಲ್ಲಿ ಆಯೋಜಿಸಿದ್ದ ಶಿಕ್ಷಕರ ಕೃತಜ್ಞತಾ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಮಾಜಿ ಪ್ರಧಾನಿ ದೇವೇಗೌಡರು ಈಗ ಬಿಜೆಪಿ (BJP) ಜತೆ ಸೇರಿರುವುದು, ಮೋದಿಯವರನ್ನು ವಿಪರೀತ ಹೊಗಳುತ್ತಿದ್ದಾರೆ. ನನಗೂ ಅವರಿಗೂ ಅವಿನಾಭಾವ ಸಂಬಂಧ ಇದೆ ಅಂತಲೂ ಎನ್ನುತ್ತಾರೆ. ಗೌಡರು ಹೀಗೇಕಾದರು ಎಂದು ಆಶ್ಚರ್ಯವಾಗಿದೆ. ಇದೇ ದೇವೇಗೌಡರು ನರೇಂದ್ರ ಮೋದಿಯವರು ಪುನಃ ಪ್ರಧಾನಿಯಾದರೆ ನಾನು ದೇಶ ಬಿಟ್ಟು ಹೋಗುತ್ತೇನೆ ಎಂದಿದ್ದರು. ಈಗ ಹೊಗಳುತ್ತಾರೆ. ಹೀಗೆ ದ್ವಂದ್ವ ನೀತಿ ಅನುಸರಿಸುತ್ತಿದ್ದಾರೆ. ಈ ದೇಶದ ಪ್ರಧಾನ ಮಂತ್ರಿಯಾಗಿದ್ದವರು ಈ ರೀತಿ ಹೇಳುತ್ತಾರೆ ಎಂದು ನಿರೀಕ್ಷಿಸಿರಲಿಲ್ಲ ಎಂದರು.
ಮುಂದಿನ ಜನ್ಮದಲ್ಲಿ ಮುಸಲ್ಮಾನನಾಗಿ ಹುಟ್ಟಲು ಬಯಸುತ್ತೇನೆ. ಬಿಜೆಪಿಗೆ ಯಾವತ್ತೂ ವಿರುದ್ಧವಾಗಿರುತ್ತೇವೆ ಎಂದಿದ್ದರು. ಈಗ ತಮ್ಮ ಪಕ್ಷದ ಉಳಿವಿಗಾಗಿ ಬಿಜೆಪಿ ಜೊತೆಗೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ. ಇಂದು ನಾಡಿನ ಜನತೆ ನಿಮ್ಮ ಹಾಗೆ ಪ್ರಜ್ಞಾವಂತರಾಗಿದ್ದಾರೆ. ಇವರ ಹೇಳಿಕೆಗಳನ್ನು ಪರಿಶೀಲಿಸಿ ತುಲನೆ ಮಾಡುವಷ್ಟು ತಿಳಿವಳಿಕೆ ನಾಡಿನ ಜನರಿಗೆ ಬಂದಿದೆ. ರಾಜಕೀಯವಾಗಿ ದೇವೇಗೌಡರು ತಮ್ಮ ಕುಟುಂಬದ ಉಳಿವಿಗಾಗಿ ಯಾವುದೇ ನಿರ್ಧಾರಕ್ಕೆ ಬಂದರೂ ಜನರು ಕಣ್ಣುಮುಚ್ಚಿಕೊಂಡು ಅವರನ್ನು ಬೆಂಬಲಿಸಬೇಕು ಎನ್ನುವ ಸಂದರ್ಭ ಈಗ ಇಲ್ಲ ಎಂದರು.

ಹಿಂದೆ ನಾನು ಜನತಾದಳ ‘ಎಸ್’ ನಲ್ಲಿದ್ದಾಗ, ಪುಟ್ಟಣ್ಣನವರಿಗೆ ಶಿಕ್ಷಕರು ಬೆಂಬಲಿಸುತ್ತಾರೆ ಎಂಬ ವಿಶ್ವಾಸವಿದ್ದು, ಚುನಾವಣೆಗೆ ನಿಲ್ಲುವುದಾಗಿ ತಿಳಿಸಿದ್ದರು. 2002ರಲ್ಲಿ ಜನರ ಆಶೀರ್ವಾದದಿಂದ ಜಯಗಳಿಸಿದರು. ನಂತರ ಐದು ಬಾರಿ ಗೆದ್ದಿದ್ದಾರೆ. ಜನರ ಧ್ವನಿಯಾಗಿ ಸಮರ್ಥವಾಗಿ ಕೆಲಸ ಮಾಡಿದ್ದು, ಬಿಜೆಪಿಯಿಂದ ಕಾಂಗ್ರೆಸ್ ಗೆ ಬಂದರೂ ಅವರನ್ನು ಬೆಂಬಲಿಸಿದ ಶಿಕ್ಷಕ ಸಮುದಾಯದ ಪ್ರಜ್ಞಾವಂತಿಕೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಡಿ.ಕೆ.ಸುರೇಶ್ ಗೆಲ್ಲುವ ವಿಶ್ವಾಸ ನನಗಿದೆ
ಬಿಜೆಪಿ (BJP) ಮತ್ತು ಜೆಡಿಎಸ್ (JDS) ಹೊಂದಾಣಿಕೆ ಲೋಕಸಭಾ ಚುನಾವಣೆಗೆ (Loksabha Election) ದಿಕ್ಸೂಚಿಯಾಗಲಿದೆ ಎಂದು ಕುಮಾರಸ್ವಾಮಿ(Kumarswamy) ಹೇಳಿದ್ದರು. ಈಗ ಜನರೇ ತೀರ್ಮಾನಿಸಬೇಕು. ಬೆಂಗಳೂರು ಗ್ರಾಮಾಂತರದಿಂದ ಡಿ.ಕೆ.ಸುರೇಶ್ (D.K.Suresh) ಅವರನ್ನು ಕಣಕ್ಕೆ 4 ಬಾರಿ ಇಳಿಸಲಾಗಿದೆ. ಈ ಕ್ಷೇತ್ರದಲ್ಲಿ ಅವರು ಖಂಡಿತ ಗೆಲುವು ಸಾಧಿಸಲಿದ್ದಾರೆ ಎಂಬ ವಿಶ್ವಾಸವಿದೆ. ಬಿಜೆಪಿಯವರು ನರೇಂದ್ರ ಮೋದಿಯವರ ಹೆಸರಿನಲ್ಲಿ ಗೆಲ್ಲುವ ವಿಶ್ವಾಸದಲ್ಲಿದ್ದಾರೆಯೇ ಹೊರತು ಬಿಜೆಪಿಯವರಿಗೆ ಜನರ ಬಳಿ ಹೋಗಲು ಕಾರಣಗಳೇ ಇಲ್ಲ ಎಂದರು.
ಶಿಕ್ಷಕರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಸಭೆ
ಶಿಕ್ಷಕರ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲು ಶಿಕ್ಷಕರ ಪ್ರತಿನಿಧಿಗಳು, ಆರ್ಥಿಕ ಇಲಾಖೆಯೊಂದಿಗೆ ಕೂಡಲೇ ಸಭೆ ನಡೆಸಲಾಗುವುದು ಎಂದರು.
ರಾಮೋಜಿಗೌಡ, ಶ್ರೀನಿವಾಸ್ ಇಬ್ಬರೂ ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರರ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಿದ್ದಾರೆ. ಪುಟ್ಟಣ್ಣನವರನ್ನು ಗೆಲ್ಲಿಸಿದಂತೆಯೇ ಈ ಇಬ್ಬರೂ ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿ, ಪುಟ್ಟಣ್ಣನವರ ಜಯ ಶಿಕ್ಷಕರ ಜಯ ಎಂದು ಬಣ್ಣಿಸಿದರು.
#Karnataka #bengaluru #siddaramaiah #hddevegowda #congress #bjp #jds






