• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಟಿಕೆಟ್ ಕೈ ತಪ್ಪಿದ ಹಿನ್ನೆಲೆ ವಿದಾಯ ಭಾಷಣ ಮಾಡಿದ್ರಾ ಸಂಸದ ಪ್ರತಾಪ್ ಸಿಂಹ?

Any Mind by Any Mind
March 12, 2024
in Top Story, ಕರ್ನಾಟಕ
0
ರಾಜ್ಯದ 22 ಕ್ಷೇತ್ರದ ಅಭ್ಯರ್ಥಿಗಳಿಗೆ ನಮೋ ಗ್ರೀನ್ ಸಿಗ್ನಲ್ ! ಪ್ರತಾಪ್ ಸಿಂಹ & ಈಶ್ವರಪ್ಪಗೆ ಭಾರೀ ನಿರಾಸೆ ?! 
Share on WhatsAppShare on FacebookShare on Telegram

ಮೈಸೂರು (Mysuru): ಲೋಕಸಭಾ ಚುನಾವಣೆಯಲ್ಲಿ (Loksabha Election) ಟಿಕೆಟ್‌ ಕೈ ತಪ್ಪುವುದು ಬಹುತೇಕ ಖಚಿತವಾಗುತ್ತಿದ್ದಂತೆ‌ ಸಂಸದ ಪ್ರತಾಪ್ ಸಿಂಹ (Pratap Smiha) ಅವರು ಒಂದರ್ಥದಲ್ಲಿ ವಿದಾಯದ ಭಾಷಣ ಮಾಡಿದ್ದಾರೆ. ಅಲ್ಲದೆ, ಸ್ವ ಪಕ್ಷೀಯದವರ ವಿರುದ್ಧವೇ ತಿರುಗಿ ಬಿದ್ದಿದ್ದಾರೆ.

ADVERTISEMENT

ಚುನಾವಣಾ ನಿರ್ವಹಣಾ ಸಮಿತಿ ಸಭೆಯಲ್ಲಿ ಟಿಕೆಟ್ ಕೈ ತಪ್ಪಿರುವ ವಿಚಾರ ಪ್ರಸ್ತಾಪಿಸಿರುವ ಅವರು, ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ಮಾಡಿರುವ ಅಭಿವೃದ್ಧಿ ಬಗ್ಗೆ ಮಾತನಾಡಿದ್ದಾರೆ.‌

ನಾನು ಎಂದೂ ಪಲಾಯನವಾದಿಯಲ್ಲ. ನಾನು ಎಲ್ಲಿಗೂ ಓಡಿ ಹೋಗುವುದಿಲ್ಲ.‌ ನಾನು ಜನರ ಮಧ್ಯೆಯೇ ಇರುತ್ತೇನೆ. ಮುಂದೆ ಯಾರು ಎಂಪಿಯಾಗಿ ಬರುತ್ತಾರೋ‌ ಗೊತ್ತಿಲ್ಲ‌. ನಾನು ನಿಮ್ಮಗಳ ಜೊತೆ ಇರುತ್ತೇನೆ. ನಾನು ಈಗಲೂ ಹೇಳುತ್ತೇನೆ, ಮತ್ತೊಮ್ಮೆ ನನಗೆ ಬಿಜೆಪಿ ಟಿಕೆಟ್ ಕೊಟ್ಟರೆ 3 ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತೇನೆಂದು ಹೇಳುವ ಮೂಲಕ ಒಂದರ್ಥದಲ್ಲಿ ವಿದಾಯದ ಭಾಷಣ ಮಾಡಿದ್ದಾರೆ.‌

ಹಳೇ ಮೈಸೂರು ಭಾಗದಲ್ಲಿ ಸಿದ್ದರಾಮಯ್ಯ (Siddaramaiah) ‌ವಿರುದ್ಧ ತೊಡೆ ತಟ್ಟಿದ ಏಕೈಕ ವ್ಯಕ್ತಿ ಅಂದರೆ‌‌ ಅದು ನಾನು. ಸಿದ್ದರಾಮಯ್ಯ ವಿರುದ್ಧ ಮಾತನಾಡಲು ನಮ್ಮ ನಾಯಕರಿಗೆ ತೊಡೆ ನಡುಗುತ್ತೆ ಎಂದು ಸ್ವಪಕ್ಷದ ವಿರುದ್ಧ ಸಂಸದ ಪ್ರತಾಪ‌ಸಿಂಹ ವಾಗ್ದಾಳಿ ನಡೆಸಿದ್ದಾರೆ.‌

ನಾನು ರಿಯಲ್ ಎಸ್ಟೇಟ್ ಮಾಡ್ಲಿಲ್ಲ, ಕಮಿಷನ್ ಪಡೆದಿಲ್ಲ. ಬಂಟಂಗಿಗಳನ್ನ ಕಟ್ಟಿಕೊಂಡು ಓಡಾಡಲಿಲ್ಲ. ಅಭಿವೃದ್ಧಿ ಮಾತ್ರ ಮಾಡಿದ್ದೇನೆ. ಅಡ್ಜಸ್ಟಮೆಂಟ್ ಪಾಲಿಟಿಕ್ಸ್ ಮಾಡಲಿಲ್ಲ ಎಂದಿದ್ದಾರೆ.‌

ಈ ಹಿಂದೆ ಬಿಜೆಪಿಯಿಂದ ಗೆದ್ದವರು ಪಕ್ಷವನ್ನು ಹೇಗೆ ಕಟ್ಟಿದ್ರು, ಎಷ್ಟು ಜನರನ್ನ ಬೆಳೆಸಿದ್ದಾರೆ ಹೇಳಿ? ನಾನು ಫಲಾನಯನವಾದಿಯಲ್ಲ. ನಿಮ್ಮ ಜೊತೆ ನಾನು ಸದಾ ಇರುತ್ತೇನೆ. ಮುಂದಿನ ದಿನಗಳಲ್ಲಿ ಗಾಸಿಪ್ ಗಳನ್ನ ಹರಿಡಿಸಬೇಡಿ. ಜನರ ಪ್ರೀತಿಯನ್ನ ಸಂಪಾದನೆ ಮಾಡಿದ್ದೇನೆ. ರಾಜು ಕೊಲೆಯಾದಗ ಧೈರ್ಯದಿಂದ ಹೋರಾಟ ಮಾಡಿದ್ದೇನೆ ಎಂದರು.

ಕೊಡಗು ಮೈಸೂರು ಬಿಜೆಪಿ ಭದ್ರ ಕೋಟೆ. ಇವತ್ತು ನನಗೆ ಟಿಕೆಟ್ ಕೊಟ್ರೆ ಮೂರು ಲಕ್ಷ ಮತಗಳಿಂದ ಗೆಲ್ಲುತ್ತೇನೆ. ಆಲ್ ಪಾರ್ಟಿ ಮೆಂಬರ್ ನಾನು. ಒಳ್ಳೆ ಕೆಲಸ ಮಾಡಿದ್ದೇನೆ ಪಕ್ಷಕ್ಕೆ ಕೆಲಸ ಮಾಡುತ್ತೇನೆ. ಅವಕಾಶ ಸಿಕ್ಕರೆ ಕೊಡಗಿನ ಜನರ ಋಣ ತೀರಿಸುತ್ತೇನೆ ಎಂದರು.

ನಿಮ್ಮ ಮನೆ ಕಾಯುವವರಿಗೆ ಟಿಕೆಟ್ ಕೊಡಬೇಕೆ ಹೊರತು ನಾವು ಅವರ ಮನೆ ಕಾಯುವ ಸ್ಥಿತಿ ಬರಬಾರದು ಎಂದು ಯದುವೀರ್ (Yaduveer) ವಿರುದ್ದ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.

ಕಾರ್ಯಕರ್ತರೇ ನನ್ನ ದೊಡ್ಡ ಶಕ್ತಿ. ಯಾರು ತಲೆ ಕಡೆಸಿಕೊಳ್ಳಬೇಡಿ. ಗಟ್ಟಿ ಪಿಂಡ ನಾನು. ಯಾವ ಹಿನ್ನಲೆ ಇಲ್ಲದೆ ಇಲ್ಲಿ ತನಕ ಬಂದಿದ್ದೇನೆ. ನಾನು ಪಾರ್ಟಿಗೋಸ್ಕರ ಬಾವುಟ ಕಟ್ಟುತ್ತೇನೆ. ಕೈ ಮುಗಿದು ಬೇಡಿಕೊಳ್ಳುತ್ತೇನೆ ಲೀಡರ್ ಗಳ ಹಿಂದೆ ಹೋಗಬೇಡಿ. ಪಕ್ಷದ ಜೊತೆ ಹೋಗಿ. ಅಪಪ್ರಚಾರ ಮಾಡಬೇಡಿ. ನಾನೇ ಆಗಲಿ ಮತ್ತೊಬ್ಬರೇ ಆಗಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸೋಣ ಎಂದಿದ್ದಾರೆ.

#Karnataka #mysuru #loksabhaelection #pratapsimha #bjp #bjpticket #mysore #karnatakabjp

Previous Post

5 Fashion stories from around the web you might have missed this week

Next Post

ರಾಜರು ಜನರಿಗೆ, ಪಕ್ಷದ ನಾಯಕರಿಗೆ ಕೈ ಮುಗಿಯಬೇಕು: ಯದುವೀರ್‌ ಒಡೆಯರ್‌ ಕಾಲೆಳೆದ ಪ್ರತಾಪ್‌ ಸಿಂಹ

Related Posts

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!
Top Story

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

by ಪ್ರತಿಧ್ವನಿ
April 11, 2026
0

ಅಹಮದಾಬಾದ್‌ನ ಚಾಂದ್‌ಖೇಡಾ ಪ್ರದೇಶದಲ್ಲಿ ದೋಸೆ ಹಿಟ್ಟು ಸೇವನೆಯ ಬಳಿಕ ಇಬ್ಬರು ಮಕ್ಕಳು ಮೃತಪಟ್ಟಿರುವ ಪ್ರಕರಣಕ್ಕೆ ಇದೀಗ ಹೊಸ ತಿರುವು ದೊರೆತಿದೆ. ಪ್ರಾರಂಭದಲ್ಲಿ ಆಹಾರ ವಿಷಬಾಧೆ ಎಂದು ಭಾವಿಸಲಾಗಿದ್ದ...

Read moreDetails
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
Next Post
ರಾಜರು ಜನರಿಗೆ, ಪಕ್ಷದ ನಾಯಕರಿಗೆ ಕೈ ಮುಗಿಯಬೇಕು: ಯದುವೀರ್‌ ಒಡೆಯರ್‌ ಕಾಲೆಳೆದ ಪ್ರತಾಪ್‌ ಸಿಂಹ

ರಾಜರು ಜನರಿಗೆ, ಪಕ್ಷದ ನಾಯಕರಿಗೆ ಕೈ ಮುಗಿಯಬೇಕು: ಯದುವೀರ್‌ ಒಡೆಯರ್‌ ಕಾಲೆಳೆದ ಪ್ರತಾಪ್‌ ಸಿಂಹ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada