ಕಲ್ಕತ್ತಾ :ಆರ್.ಜಿ.ಕರ್ ಆಸ್ಪತ್ರೆಯಲ್ಲಿ 31 ವರ್ಷದ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಭಾನುವಾರದೊಳಗೆ ಗಲ್ಲಿಗೇರಿಸಬೇಕು ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಆಗ್ರಹಿಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ದೀದಿ,ನಮ್ಮ ಕೋಲ್ಕತ್ತಾ ಪೊಲೀಸರು ಈಗಾಗಲೇ ಶೇಕಡಾ 90 ರಷ್ಟು ತನಿಖೆಯನ್ನು ಪೂರ್ಣಗೊಳಿಸಿದ್ದಾರೆ, ಸಿಬಿಐ ಉಳಿದ ತನಿಖೆ ತ್ವರಿತವಾಗಿ ಮುಗಿಸಬೇಕು ಎಂದಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಈ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಳ್ಳುತ್ತಿದ್ದು ಪ್ರತಿಭಟನೆಗಳು ಉಗ್ರ ಸ್ವರೂಪ ಪಡೆದುಕೊಂಡಿರುವ ಹಿನ್ನೆಲೆ,ಇಂದು ವೈದ್ಯರ ಜೊತೆಗೆ ಸಿಎಂ ಮಮತಾ ಬ್ಯಾನರ್ಜಿ ಮೆರವಣಿಗೆ ನಡೆಸುವ ಮೂಲಕ ಸರ್ಕಾರ ಆರೋಪಿಗೆ ಶಿಕ್ಷೆ ಕೊಡಿಸಲು ಬದ್ಧವಾಗಿದೆ ಎಂಬ ಸಂದೇಶ ರವಾನಿಸಲು ಮುಂದಾಗಿದ್ದಾರೆ.