ಗಾಳಿಪಟ-2 ಭರ್ಜರಿ ಯಶಸ್ಸಿನ ಬಳಿಕ ದೂದ್ ಪೇಡಾ ದಿಗಂತ್ ನಟನೆಯ ಹೊಸ ಚಿತ್ರ ’ಎಡಗೈ ಅಪಘಾತಕ್ಕೆ ಕಾರಣ’ವಿಶ್ವ ಎಡಚರ ದಿನದಂದು ಪೋಸ್ಟರ್ ಹಾಗೂ ಟೈಟಲ್ ರಿವೀಲ್ ಮಾಡಿದ್ದ ಚಿತ್ರತಂಡ ಶುಕ್ರವಾರ ಬೆಂಗಳೂರಿನ ವರಸಿದ್ದಿ ವಿನಾಯಕ ದೇಗುಲದಲ್ಲಿ ಸರಳವಾಗಿ ಮುಹೂರ್ತ ನೆರವೇರಿಸಿದೆ.
ಸಸ್ಪೆನ್ಸ್ ಥ್ರಿಲ್ಲರ್ ಡಾರ್ಕ್ ಕಾಮಿಡಿ ಜಾನರ್ ನ ಈ ಚಿತ್ರಕ್ಕೆ ಸಮರ್ಥ್ ಬಿ ಕಡ್ಕೋಲ್ ಆಕ್ಷನ್ ಕಟ್ ಹೇಳಿದ್ದು, ಗುರುದತ್ತ ಗಾಣಿಗ ಮತ್ತು ಸಮರ್ಥ್ ಜಂಟಿಯಾಗಿ ನಿರ್ಮಾಣ ಮಾಡಲಿದ್ದಾರೆ. ದಿಗಂತ್ ಗೆ ಜೋಡಿಯಾಗಿ ಯುವನಟಿ ಧನು ಹರ್ಷ ನಟಿಸಲಿದ್ದಾರೆ. ಇಂದಿನಿಂದ ಬೆಂಗಳೂರಿನಲ್ಲಿ ಸಿನಿಮಾದ ಚಿತ್ರೀಕರಣ ನಡೆಯಲಿದೆ. ಅಭಿಮನ್ಯು ಸದಾನಂದ್ ಛಾಯಾಗ್ರಾಹಣ, ರಾಹುಲ್ ವಿ ಪಾರ್ವತಿಕರ್ ಹಾಗೂ ಶ್ರೀಪಾದ್ ಜೋಶಿ ಸಂಭಾಷಣೆ ಚಿತ್ರಕ್ಕಿದೆ.
ಪ್ರಪಂಚದಲ್ಲಿ ಹಲವು ವಿಷಯಗಳನ್ನು ಬಲಗೈ ಬಳಕೆಗೆ ಅನುಕೂಲವಾಗಿ ಮಾಡಲಾಗಿರುತ್ತದೆ. ಆದರೆ ಎಡಗೈ ಬಳಕೆದಾರರ ಸಂಖ್ಯೆ ಬಹಳ ಕಡಿಮೆ ಇದ್ದು, ಇದರಿಂದ ಅವರಿಗೆ ಒಂದಷ್ಟು ತೊಂದರೆಗಳು ಆಗುತ್ತಿವೆ. ಅದರ ಬಗೆಗಿನ ಕಥೆ ಇದಾಗಿದ್ದು, ಶೀಘ್ರದಲ್ಲಿ ಚಿತ್ರತಂಡ ತಾರಾಬಳಗದ ಬಗ್ಗೆ ಮಾಹಿತಿ ನೀಡಲಿದೆ.
