ಕರ್ನಾಟಕ ಸರ್ಕಾರದ ಆರೋಗ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಗೆ ಮೂರು ತಿಂಗಳಿನಿಂದ ವೇತನ ಪಾವತಿಯಾಗಿಲ್ಲ ಎಂಬುದು ತಿಳಿದು ಬಂದಿದೆ. ಈ ಬಗ್ಗೆ ಆರೋಗ್ಯ ಕಾರ್ಯಕರ್ತರು ಸಚಿವರು ಮತ್ತು ಇಲಾಖೆಯ ವಿರುದ್ದ ತೀವ್ರ ಅಸಮಾಧಾನವನ್ನ ಹೊರ ಹಾಕಿದ್ದು ಈ ಬಗ್ಗೆ ಕಾಂಗ್ರೆಸ್ ಪಕ್ಷದ ನಾಯಕ ಹಾಗು ಗಾಂಧಿನಗರ ವಿಧಾನಸಭಾ ಕ್ಷೇತ್ರದ ಶಾಸಕ ದಿನೇಶ ಗುಂಡುರಾವ್ ಈ ಬಗ್ಗೆ ಟ್ವೀಟ್ ಮಾಡಿದ್ದು ಸಚಿವ ಸುಧಾಕರ್‌ನನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
ರಾಜ್ಯದ ಆರೋಗ್ಯ ಇಲಾಖೆ ಅನಾರೋಗ್ಯ ಪೀಡಿತವಾಗಿ ಹಾಸಿಗೆ ಹಿಡಿದಿದೆ. ಇಲಾಖೆಯ ಸಿಬ್ಬಂದಿಗಳಿಗೆ ಕಳೆದ 3 ತಿಂಗಳಿನಿಂದ ವೇತನ ಬಿಡುಗಡೆಯಾಗಿಲ್ಲ. ಆರೋಗ್ಯ ಸಿಬ್ಬಂದಿ ಕೊರೋನಾ ಫ್ರಂಟ್‌ಲೈನ್ ವರ್ಕರ್‌ಗಳಾಗಿ ಕಾರ್ಯನಿರ್ವಹಿಸಿದ್ದಾರೆ. ಆದರೂ ಕೊರೊನಾ ಭತ್ಯೆ ಸಿಕ್ಕಿಲ್ಲ. ತಮ್ಮ ಇಲಾಖೆಯ ಸಿಬ್ಬಂದಿಗಳ ವೇದನೆ ತಿಳಿದಿಲ್ಲವೆ ಸಚಿವರೆ? ಎಂದು ಟ್ವೀಟ್ ಮೂಲಕ ಪ್ರಶ್ನಿಸಿದ್ದಾರೆ.
ವೇತನ ಮತ್ತು ಭತ್ಯೆಗಾಗಿ ಆರೋಗ್ಯ ಸಿಬ್ಬಂದಿ ಈಗ ಮುಷ್ಕರದ ಹಾದಿ ಹಿಡಿದಿದ್ದಾರೆ. ಕೊರೊನಾ ವೇಳೆಯಲ್ಲಿ ಜೀವದ ಹಂಗು ತೊರೆದು ಸೇವೆ ಮಾಡಿದ ಸಿಬ್ಬಂದಿಗಳನ್ನು ನಡೆಸಿಕೊಳ್ಳುವ ರೀತಿ ಇದಲ್ಲ. ಸಚಿವ ಸುಧಾಕರ್ ಹಾಗೂ ಆಯುಕ್ತರು ಸಿಬ್ಬಂದಿಗಳ ಸಮಸ್ಯೆಯತ್ತ ಗಮನಹರಿಸಬೇಕು.ಸಚಿವರು ಕೇವಲ ಪ್ರಚಾರಕ್ಕೆ ಸೀಮಿತವಾಗದೆ ಸಿಬ್ಬಂದಿಗಳ ಗೋಳು ಕೇಳಲಿ ಎಂದು ಸಚಿವರ ಮತ್ತು ಇಲಾಖೆಯ ವಿರುದ್ದ ಹರಿಹಾಯ್ದಿದ್ದಾರೆ.