• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನೇರವಾಗಿ ಚುನಾವಣೆ ಎದುರಿಸುತ್ತೇನೆ, ಜೇಬಲ್ಲಿ ಪೆನ್ ಡ್ರೈವ್, ಸಿ.ಡಿ ಇದೆ ಎಂದು ಹೆದರಿಸುವವನು ನಾನಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
April 30, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ನೇರವಾಗಿ ಚುನಾವಣೆ ಎದುರಿಸುತ್ತೇನೆ, ಜೇಬಲ್ಲಿ ಪೆನ್ ಡ್ರೈವ್, ಸಿ.ಡಿ ಇದೆ ಎಂದು ಹೆದರಿಸುವವನು ನಾನಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್
Share on WhatsAppShare on FacebookShare on Telegram

ನಾನು ಚುನಾವಣೆಯನ್ನು ನೇರವಾಗಿ ಎದುರಿಸುತ್ತೇನೆ. ಜೇಬಲ್ಲಿ ಪೆನ್ ಡ್ರೈವ್ ಇದೆ, ಸಿ.ಡಿ ಇದೆ ಎಂದು ಹೆದರಿಸುವವನು ನಾನಲ್ಲ. ಸದನದಲ್ಲಿ ಚರ್ಚೆಗೆ ಬರುವಂತೆ ನೇರ ಸವಾಲು ಹಾಕುವುದು ಬೆಂಗಳೂರಿನ ಕೆಂಪೇಗೌಡರ ರಕ್ತದ ಗುಣ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಜಿ ಸಿಎಂ ಕುಮಾರಸ್ವಾಮಿ ಮೇಲೆ ವಾಗ್ದಾಳಿ ನಡೆಸಿದರು.

ADVERTISEMENT

ಪೆನ್ ಡ್ರೈವ್ ಪ್ರಕರಣದ ಹಿಂದೆ ಮಹಾನಾಯಕ ಡಿ.ಕೆ. ಶಿವಕುಮಾರ್ ಇದ್ದಾರೆ ಎಂಬ ಕುಮಾರಸ್ವಾಮಿ ಅವರ ಆರೋಪಕ್ಕೆ ಶಿವಕುಮಾರ್ ಅವರು ತಿರುಗೇಟು ನೀಡಿದ್ದು , ಇದೆಲ್ಲವೂ ಹಳೇ ವಿಡಿಯೋ ಎಂದು ಸ್ವತಃ ರೇವಣ್ಣ ಅವರೇ ಒಪ್ಪಿಕೊಂಡಿದ್ದಾರೆ. ಉಪ್ಪು ತಿಂದವನು ನೀರು ಕುಡಿಯುತ್ತಾನೆ, ಈ ವಿಚಾರವಾಗಿ ದೇವೇಗೌಡರು ತೀರ್ಮಾನ ಮಾಡುತ್ತಾರೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಬಿಜೆಪಿ ನಾಯಕ ದೇವರಾಜೇಗೌಡ ಅವರು ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ರಾಷ್ಟ್ರೀಯ ನಾಯಕರಿಗೆ ಪತ್ರ ಬರೆದಿದ್ದರು. ಈ ಬಗ್ಗೆ ಮಾಧ್ಯಮಗಳಿಗೂ ತಿಳಿಸಿದ್ದಾರೆ. ಹೀಗಿರುವಾಗ ನನಗೂ ಈ ಪ್ರಕರಣಕ್ಕೂ ಏನು ಸಂಬಂಧ ಎಂದು ಪ್ರಶ್ನೆಮಾಡಿದ್ರು.

ಕುಮಾರಸ್ವಾಮಿ ಅವರಿಗೆ ನನ್ನನ್ನು ನೆನೆಸಿಕೊಳ್ಳದೆ ಇರಲು ಸಾಧ್ಯವಿಲ್ಲ. ಈಗ ಮಾತ್ರವಲ್ಲ, ಬಹಳ ವರ್ಷಗಳಿಂದ ಅವರು ಹಾಗೂ ಅವರ ಕುಟುಂಬದವರಿಗೆ ನನ್ನನ್ನು ನೆನೆಸಿಕೊಳ್ಳಲಿದ್ದರೆ ಊಟ ಸೇರಲ್ಲ, ನಿದ್ದೆ ಬರಲ್ಲ, ಸ್ಫೂರ್ತಿಯೂ ಇರಲ್ಲ. ಹಾಸನದ ಪ್ರಚಾರದ ವೇಳೆ ಕುಮಾರಸ್ವಾಮಿ ಅವರು ನನಗೆ ನಿಖಿಲ್ ಬೇರೆ ಅಲ್ಲ, ಪ್ರಜ್ವಲ್ ಬೇರೆ ಅಲ್ಲ ಎಂದು ಬೆನ್ನುತಟ್ಟಿ ಹೇಳಿದ್ದನ್ನು ನೋಡಿದ್ದೇವೆ. ಅದರಲ್ಲಿ ತಪ್ಪೇನಿಲ್ಲ. ಅವರ ಕುಟುಂಬ ಹಾಗೂ ಅವರ ಕುಡಿ. ಈಗ ನನಗೂ ಪ್ರಜ್ವಲ್ ಕುಟುಂಬಕ್ಕೂ ಸಂಬಂಧ ಇಲ್ಲ ಎಂದು ಮಾತು ಬದಲಿಸಿದ್ದಾರೆ.

ಪೆನ್ ಡ್ರೈವ್ ವಿಚಾರ ಡಿ.ಕೆ. ಶಿವಕುಮಾರ್ ಹಾಗೂ ಡಿ.ಕೆ ಸುರೇಶ್ ಅವರಿಗೆ ಗೊತ್ತಿತ್ತು ಎಂಬ ದೇವರಾಜೇಗೌಡ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ನಮಗೆ ಈ ವಿಚಾರ ಗೊತ್ತಿದ್ದರೆ ನಾವು ಮುಂಚಿತವಾಗಿ ರಿಲೀಸ್ ಮಾಡಬಹುದಾಗಿತ್ತು. ಇಂದು ಬೆಳಗ್ಗೆ ಅವರ ಚಾಲಕರೇ ಈ ಪೆನ್ ಡ್ರೈವ್ ವಿಚಾರ ಬಹಿರಂಗಗೊಳಿಸಿರುವುದಾಗಿ ಹೇಳಿದ್ದಾರೆ. ನಾನಂತೂ ಇಂತಹ ಚಿಲ್ಲರೆ ಕೆಲಸಕ್ಕೆ ಕೈ ಹಾಕುವುದಿಲ್ಲ. 

ಇಲ್ಲಿ ಮಹಿಳೆಯರ ಗೌರವದ ವಿಚಾರ ಪ್ರಮುಖ. ನನಗೆ ಬಂದ ಮಾಹಿತಿ ಪ್ರಕಾರ 200-300 ಮಹಿಳೆಯರು ಹಾಗೂ ಅವರ ಕುಟುಂಬದ ವಿಚಾರ. ಇದರಲ್ಲಿ ಅವರ ಪಕ್ಷದ ಕಾರ್ಯಕರ್ತರು, ಕೆಲಸಗಾರರ ಹೆಸರೂ ಕೇಳಿಬರುತ್ತಿದೆ. ಪಕ್ಷದ ಅಧ್ಯಕ್ಷನಾಗಿ ನನಗೆ ಮಾಹಿತಿ ತಿಳಿಸುತ್ತಾರೆ. ಈ ವಿಚಾರವಾಗಿ ಮೊದಲಿನಿಂದಲೇ ಗುಸುಗುಸು ನಡೆದೆದೆ.

ಈ ಮಧ್ಯೆ ಅಮಿತ್ ಶಾ ಅವರು ಕರ್ನಾಟಕದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲ ಎಂದು ಹೇಳಿಕೆ ನೀಡಿದ್ದಾರೆ. ಹುಬ್ಬಳ್ಳಿ ಕೊಲೆ ಪ್ರಕರಣದಲ್ಲಿ ನಮ್ಮ ಸರ್ಕಾರ ಆರೋಪಿಯನ್ನು ಬಂಧಿಸಿ, ತನಿಖೆಯನ್ನು ಸಿಐಡಿಗೆ ವಹಿಸಿದ್ದರೂ ಪ್ರಧಾನಮಂತ್ರಿಗಳಿಂದ ಹಿಡಿದು ಎಲ್ಲಾ ಬಿಜೆಪಿ ನಾಯಕರು ಆ ಪ್ರಕರಣದ ಬಗ್ಗೆ ಮಾತನಾಡಿದ್ದಾರೆ. ಬೇರೆ ಬೇರೆ ರಾಜ್ಯಗಳಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ನೋಡಿಕೊಂಡರೆ ನಮ್ಮ ರಾಜ್ಯದಲ್ಲಿ ಕಡಿಮೆ ಇದೆ. ನಮಗೆ ಈ ವಿಚಾರವಾಗಿ ಮುಂಚಿತವಾಗಿ ಗೊತ್ತಾಗಿದ್ದರೆ, ಅಥವಾ ಯಾರಾದರೂ ದೂರು ನೀಡಿದ್ದರೆ ನಾವು ತಕ್ಷಣವೇ ದೂರು ದಾಖಲೆ ಮಾಡುತ್ತಿದ್ದೆವು. ಆದರೆ ಪೆನ್ ಡ್ರೈವ್ ವಿಚಾರದ ಬಗ್ಗೆ ಬಿಜೆಪಿಯ ಯಾವುದೇ ನಾಯಕರು ಮಾತನಾಡುತ್ತಿಲ್ಲ. ಇದು ಅವರ ಮನಸ್ಥಿತಿ ತೋರಿಸುತ್ತದೆ.

ಕುಮಾರಸ್ವಾಮಿ ಪ್ರಜ್ವಲ್ ರೇವಣ್ಣ ನಮ್ಮ ಕುಟುಂಬವಲ್ಲ ಎಂದಿದ್ದಾರೆ. ಪ್ರಜ್ವಲ್ ಅವರ ಕುಟುಂಬದವರಲ್ಲವೇ ಎಂದು ಮಾಧ್ಯಮಗಳೇ ಚರ್ಚೆ ಮಾಡಬೇಕು. ರೇವಣ್ಣ ದೇವೇಗೌಡರ ಮಗನೋ ಅಲ್ಲವೋ? ತಪ್ಪು ಮಾಡಿದ್ದರೆ ತಪ್ಪು ಎಂದು ಹೇಳಲಿ, ತಪ್ಪು ಮಾಡಿಲ್ಲವೆಂದರೆ ತಪ್ಪಲ್ಲ ಎಂದು ಹೇಳಲಿ. ಆದರೆ ನಮ್ಮ ಕುಟುಂಬವೇ ಅಲ್ಲ ಎಂದರೆ ಹೇಗೆ? ಹೆಚ್.ಡಿ ಕುಮಾರಸ್ವಾಮಿ ಹಾಗೂ ಹೆಚ್.ಡಿ ರೇವಣ್ಣ ಅವರ ಹೆಸರಿನಲ್ಲಿರುವ ಹೆಚ್.ಡಿ ಅಂದರೆ ಏನು? ಹೊಳೆನರಸಿಪುರದ ದೇವೇಗೌಡರ ಮಗ ಅಂತಲ್ಲವೇ? ಪ್ರಜ್ವಲ್ ರೇವಣ್ಣ ಅಂದರೆ ಏನು? ರೇವಣ್ಣನ ಮಗ ಎಂದಲ್ಲವೇ?

ಕುಮಾರಸ್ವಾಮಿ ಈಗ ಬೇರೆಯವರ ಮೇಲೆ ದೂರಬೇಕು. ಹೀಗಾಗಿ ನನ್ನ ಹೆಸರು ಹೇಳುತ್ತಿದ್ದಾರೆ. ನನ್ನ ಹೆಸರು ಹೇಳಿದರೆ ಅವರಿಗೆ ನೆಮ್ಮದಿ. ಅಮಿತ್ ಶಾ ಅವರು ಕರ್ನಾಟಕ ಸರ್ಕಾರ ಕ್ರಮ ಕೈಗೊಳ್ಳುತ್ತಿಲ್ಲ ಎಂದಿದ್ದಾರೆ. ನಮಗೆ ಮಾಹಿತಿ ಬಂದ ತಕ್ಷಣವೇ ನಾವು ತನಿಖೆಗೆ ಆದೇಶ ಮಾಡಿದ್ದೇವೆ. ಆತ ವಿದೇಶಕ್ಕೆ ಪರಾರಿಯಾಗಲು ನಾವು ಸಹಕಾರ ಕೊಟ್ಟಿದ್ದೇವಾ? ಅಮಿತ್ ಶಾ ಅವರು ಮೈಸೂರಿಗೆ ಬಂದಾಗ ಪ್ರಜ್ವಲ್ ಗೆ ಟಿಕೆಟ್ ನೀಡಬೇಡಿ ಎಂದು ಸ್ವತಃ ಬಿಜೆಪಿ ನಾಯಕರೇ ಹೇಳಿದ್ದರಲ್ಲವೇ? ಆತ ವಿದೇಶಕ್ಕೆ ಪರಾರಿಯಾಗುವ ಮುನ್ನ ಯಾರು ಯಾರು ಎಲ್ಲಿದ್ದರು? ಯಾರ ಜತೆ ಮಾತನಾಡಿದ್ದರು ಎಂದು ಆತನ ದೂರವಾಣಿ ಕರೆಗಳನ್ನು ತೆಗೆಸಿ ನೋಡಿ, ಗೊತ್ತಾಗುತ್ತದೆ” ಎಂದರು.

ಪೆನ್ ಡ್ರೈವ್ ನಲ್ಲಿ ಸಂತ್ರಸ್ತ ಮಹಿಳೆಯರ ಗುರುತು ಬಹಿರಂಗವಾಗಿದ್ದು, ಇದರ ವಿರುದ್ಧ ಕ್ರಮ ಕೈಗೊಳ್ಳುತ್ತೀರಾ ಎಂದು ಕೇಳಿದಾಗ, “ಕೆಲವು ಸಂತ್ರಸ್ತರ ಗುರುತು ಬಹಿರಂಗವಾಗಿದ್ದು, ಅವರ ಖಾಸಗಿ ಜೀವನಕ್ಕೆ ಧಕ್ಕೆಯಾಗಿದೆ. ನಾವು ಮಹಿಳೆಯರ ಸಂರಕ್ಷಣೆ ಮಾಡಬೇಕಿದೆ. ಆರೋಪಿ ಸಾಮಾನ್ಯನಲ್ಲ. ಆತ ಸಂಸದ, ಮಾಜಿ ಪ್ರಧಾನಮಂತ್ರಿಗಳ ಕುಟುಂಬದ ಸದಸ್ಯ. ಈ ವಿಚಾರದಲ್ಲಿ ಗುಪ್ತಚರ ಇಲಾಖೆ ಏನು ಮಾಡುತ್ತಿತ್ತು ಗೊತ್ತಿಲ್ಲ. ಈ ಅಮಾಯಕ ಮಹಿಳೆಯರ ಮೇಲಿನ ದೌರ್ಜನ್ಯ ಖಂಡನೀಯ. ಮನೆಗೆಲಸದವರ ಮೇಲೂ ದೌರ್ಜನ್ಯ ನಡೆಸಲಾಗಿದೆ ಎಂಬ ಮಾಹಿತಿ ಕೇಳಿದೆ. ಇದರಿಂದ ಬಹಳ ನೋವಾಗಿದೆ. ಹೀಗಾಗಿ ಸಂತ್ರಸ್ತ ಮಹಿಳೆಯರ ಗುರುತನ್ನು ರಹಸ್ಯವಾಗಿಡಲಾಗುವುದು. ಈ ಮಧ್ಯೆ ಸತ್ಯಾಂಶ ಬಯಲಿಗೆಳೆಯಬೇಕು. ತಂತ್ರಜ್ಞಾನ ಯುಗದಲ್ಲಿ ನಡೆದಿರುವ ಅತ್ಯಂತ ದೊಡ್ಡ ದೌರ್ಜನ್ಯ ಪ್ರಕರಣ ಇದಾಗಿದೆ” ಎಂದರು.

Tags: BJPCongress Partyಎಚ್ ಡಿ ಕುಮಾರಸ್ವಾಮಿಕಾಂಗ್ರೆಸ್ನರೇಂದ್ರ ಮೋದಿಪ್ರಜ್ವಲ್ ರೇವಣ್ಣಬಿಜೆಪಿರೇವಣ್ಣಸಿದ್ದರಾಮಯ್ಯಹೆಚ್.ಡಿ. ಕುಮಾರಸ್ವಾಮಿ
Previous Post

ಪೆನ್ ಡ್ರೈವ್ ಹರಿಬಿಟ್ಟಿದ್ದು ಕಾಂಗ್ರೆಸ್ ಮಹಾ ನಾಯಕ ! ಕುಮಾರಸ್ವಾಮಿ ಸ್ಫೋಟಕ ಆರೋಪ !

Next Post

ಬಿಜೆಪಿ ಬಗ್ಗೆ ಶಾಕಿಂಗ್ ಹೇಳಿಕೆ ನೀಡಿದ ಶಾಸಕ ಲಕ್ಷ್ಮಣ್ ಸವದಿ

Related Posts

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ
ರಾಜಕೀಯ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

by ಪ್ರತಿಧ್ವನಿ
April 25, 2026
0

ನವದೆಹಲಿ: ದೇಶದ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಬೆಳವಣಿಗೆಯೊಂದರಲ್ಲಿ ಆಮ್ ಆದ್ಮಿ ಪಕ್ಷದ ಪ್ರಮುಖ ನಾಯಕ ರಾಘವ ಚಡ್ಡಾ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗಿರುವುದು ಮಹತ್ವದ ರಾಜಕೀಯ...

Read moreDetails
ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

April 24, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
Next Post

ಬಿಜೆಪಿ ಬಗ್ಗೆ ಶಾಕಿಂಗ್ ಹೇಳಿಕೆ ನೀಡಿದ ಶಾಸಕ ಲಕ್ಷ್ಮಣ್ ಸವದಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada