• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಬಿಜೆಪಿ ಸೋಲಿಗೆ ಕಾರಣವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ನಿರ್ದೇಶಕ, ಸಾಹಿತಿ ಕವಿರಾಜ್‌..!

Any Mind by Any Mind
May 14, 2023
in ರಾಜಕೀಯ
0
ಬಿಜೆಪಿ ಸೋಲಿಗೆ ಕಾರಣವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ನಿರ್ದೇಶಕ, ಸಾಹಿತಿ ಕವಿರಾಜ್‌..!
Share on WhatsAppShare on FacebookShare on Telegram

2023ರ ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ(karnataka assembly election results) ನೆನ್ನೆಯಷ್ಟೇ ಹೊರಬಿದ್ದಿದೆ. ರಾಜ್ಯಾದ್ಯಂತ ಬಹುಮತ ಪಡೆದುಕೊಳ್ಳುವ ಮೂಲಕ ಕಾಂಗ್ರೆಸ್‌(congress) ಪಕ್ಷ ಭರ್ಜರಿ ಜಯ ಸಾಧಿಸಿದೆ. ಸುಮಾರು ಮೂರೂವರೆ  ವರ್ಷಗಳ ಕಾಲ, ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಬಿಜೆಪಿ ಪಕ್ಷ ಸೋತು ಸುಣ್ಣಾಗಿದೆ. ಇನ್ನು ಚುನಾವಣಾ ಫಲಿತಾಂಶದ ಕುರಿತು, ಕೆಲವರು ಬಿಜೆಪಿ(BJP) ಪರ ಮಾತನಾಡಿದ್ರೆ, ಇನ್ನೂ ಕೆಲವರು ಬಿಜೆಪಿಗೆ ವಿರುದ್ಧವಾಗಿ ಮಾತನಾಡಿಕೊಳ್ತಿದ್ದಾರೆ. ಸ್ಯಾಂಡಲ್‌ವುಡ್‌(sandalwood) ನಿರ್ದೇಶಕ, ಸಾಹಿತಿ ಕವಿರಾಜ್‌(kaviraj) ಕೂಡ ಬಿಜೆಪಿ ಸೋಲಿಗೆ ಕಾರಣ ಏನೆಂಬುದನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ.   

ADVERTISEMENT

40 % ಕಮಿಷನ್‌ ಸರ್ಕಾರ.. ಬಿಜೆಪಿಯಿಂದ ಹಿಂದೆಂದೂ ಕಂಡಿರದ ಭ್ರಷ್ಟಾಚಾರ

ಹಿಂದೆಂದೂ ಕಂಡಿರದ ಭ್ರಷ್ಟಾಚಾರ -ಅಹಂಕಾರದ ಆಡಳಿತ, ಬೆಲೆ ಏರಿಕೆಗಳಿಂದ ಬಡವರ ಬದುಕನ್ನು ಸಂಕಷ್ಟಕ್ಕೆ ದೂಡಿದ್ದು, ಪದೇ ಪದೇ ತಪ್ಪು ನಿರ್ಧಾರಗಳನ್ನು ತೆಗೆದುಕೊಂಡು ಜನ ಉಗಿದ ನಂತರ ಯೂ ಟರ್ನ್ ಹೊಡೆದಿದ್ದು, ಕೊರೋನಾದಂತ(covid time) ವಿಕೋಪದ ಸಮಯದಲ್ಲಿ ಜೀವಗಳನ್ನು ರಕ್ಷಿಸುವಲ್ಲಿ ಹೊಣೆಗೇಡಿತನ ತೋರಿದ್ದು, ಅಮಾಯಕ ಯುವಕರ ಹೆಣಗಳನ್ನು ರಾಜಕೀಯಕ್ಕೆ(politics) ಬಳಸಿಕೊಂಡಿದ್ದು. 

ಕನ್ನಡತನ, ಕನ್ನಡದ ಆಸ್ಮಿತೆಗಳ ವಿರುದ್ಧ ನಿಂತಿದ್ದ ಬಿಜೆಪಿ ಸರ್ಕಾರ

ʻಪದೇ ಪದೇ ನಾಡಿನ ಶಾಂತಿ ಕದಡಿದ್ದು, ಶಾಲೆ – ಪಠ್ಯಪುಸ್ತಕಗಳಲ್ಲೂ ರಾಜಕೀಯ(politics)  ತಂದು ಮಲೀನಗೊಳಿಸಿದ್ದು, ಕುವೆಂಪು ,(kuvempu) ಬಸವಣ್ಣ,(basavanna) ಅಂಬೇಡ್ಕರ್,(ambedkar)  ಅವರಂತಹ ಮಹನೀಯರನ್ನು ಅವಮಾನಿಸಿದ್ದು. ಧರ್ಮ – ದೇವರು ಎಲ್ಲವನ್ನು ರಾಜಕೀಯ ಅಸ್ತ್ರವಾಗಿಸಿಕೊಂಡಿದ್ದು, ಕನ್ನಡತನ, ಕನ್ನಡದ(kannada) ಆಸ್ಮಿತೆಗಳ ವಿರುದ್ಧ ನಿಂತಿದ್ದು , ಹಿಂದಿ ಹೇರಿಕೆ ಬೆಂಬಲಿಸಿದ್ದು, ಈ ಮಣ್ಣಿನ ಹೋರಾಟಗಾರರನ್ನು ಕಡೆಗಣಿಸಿ  , ಶಿವಾಜಿ,(shivaji) ಸಾವರ್ಕರ್(savarkar) ಅಂತಹಾ ಉತ್ತರದ ಹೋರಾಟಗಾರರನ್ನು ಮೆರೆಸಿದ್ದು.

ಕೇಂದ್ರ ನಾಯಕರ ಅಬ್ಬರದ ರ್ಯಾಲಿಯಿಂದ ಅಲೆ ಸೃಷ್ಟಿಯಾಗಿಬಿಡುತ್ತೆ ಎಂಬ ಭ್ರಮೆ

ನಾಗಪುರ ನಿರ್ದೇಶಿತ ಮೂಲಭೂತವಾದದ ಪ್ರಯೋಗಗಳಿಗೆ ಕರ್ನಾಟಕವನ್ನು ಪ್ರಯೋಗಶಾಲೆಯಾಗಿಸಿದ್ದು, ಆಪರೇಷನ್ ಕಮಲ, ರೆಸಾರ್ಟ್ ರಾಜಕೀಯದಂತ ಅನೈತಿಕ ರಾಜಕಾರಣದಿಂದ ರಾಷ್ಟ್ರಮಟ್ಟದಲ್ಲಿ ನಾಡಿನ ಗೌರವ ಹಾಳುಮಾಡಿದ್ದು, ವಿರೋಧಿಸಿದವರನ್ನು ಹೆದರಿಸಲು ಆಡಳಿತ ವ್ಯವಸ್ಥೆಯನ್ನು ಬಳಸಿಕೊಂಡಿದ್ದು. ಕೇಂದ್ರ ನಾಯಕರ ಅಬ್ಬರದ ರ್ಯಾಲಿಯಿಂದ(rally) ಅಲೆ ಸೃಷ್ಟಿಯಾಗಿಬಿಡುತ್ತೆ ಎಂಬ ಭ್ರಮೆ, ಹಣ ಬಲದ ಧಿಮಾಕು , ಜಾತಿ ರಾಜಕೀಯ , ದ್ವೇಷ ಭಾಷಣ ಇವಕ್ಕೆಲ್ಲಾ ಸೊಪ್ಪು ಹಾಕದ ಕರುನಾಡಿನ ಮತದಾರರ ಪ್ರಜ್ಞಾವಂತಿಕೆ ಬಗ್ಗೆ ಹೆಮ್ಮೆಯೆನಿಸುತ್ತದೆ. ಅತಂತ್ರ ಫಲಿತಾಂಶ(result) ಕೊಟ್ಟರೇ ಅನೈತಿಕ ರಾಜಕಾರಣದ ರೂವಾರಿಗಳು ಅದನ್ನು ಹೇಗೆಲ್ಲಾ ದುರುಪಯೋಗ ಪಡಿಸಿಕೊಂಡು ಹಣಬಲ , ಅಧಿಕಾರ ಬಲದಿಂದ ರಾಜ್ಯದಲ್ಲಿ ಸರ್ಕಾರ(karnataka government) ಸ್ಥಾಪಿಸುತ್ತಾರೆ ಎಂಬ ಸ್ಪಷ್ಟ ಅರಿವು ಮತದಾರ ಪ್ರಭುಗಳಿಗೆ ಇದೆ. ಹಾಗಾಗಿಯೇ ನಿರ್ಣಾಯಕ ಫಲಿತಾಂಶ ನೀಡಿ ಯಾರ್ಯಾರು ಎಲ್ಲಿರಬೇಕು ಎಂದು ಖಚಿತವಾಗಿ ತೋರಿಸಿರುವ ಮತದಾರರು ಅಭಿನಂದನಾರ್ಹರು. ಮತದಾರರ ಪ್ರಜ್ಞಾವಂತಿಕೆ ಮತ್ತು ಪ್ರಜಾಪ್ರಭುತ್ವ ಹೀಗೆ ಪ್ರಬುದ್ಧವಾಗುತ್ತ ಚಿರಾಯುವಾಗಲಿʼ ಅಂತ ನಿರ್ದೇಶಕ(director) ಮತ್ತು ಸಾಹಿತಿ ಕವಿರಾಜ್‌ ಫೇಸ್‌ ಬುಕ್‌ನಲ್ಲಿ(face book) ಸುಧೀರ್ಘವಾಗಿ ಬರೆದುಕೊಂಡಿದ್ದಾರೆ.  ಸದ್ಯ ಅವರ ಪೋಸ್ಟ್‌ ಸಾಮಾಜಿಕ ಜಾಲತಾಣದಲ್ಲಿ(social media) ಸಖತ್‌ ವೈರಲ್‌ ಆಗ್ತಿದೆ.

Tags: amithshahbasavarajbommaiBJPdirectorDKShivakumarELECTION2023KarnatakakarnatakaassemblyelectionKavirajnarendramodipostPratidhvanipratidhvanidigitalpratidhvaninewssiddaramaiahsocialmediaviral
Previous Post

ಸಿಎಂ ರೇಸ್​ನಲ್ಲಿ ಕೇಳಿ ಬರ್ತಿದೆ ಪ್ರಿಯಾಂಕ್​ ಖರ್ಗೆ ಹೆಸರು

Next Post

ಹನುಮಂತನಿಗೆ ಕಾಂಗ್ರೆಸ್‌ ಕಾರ್ಯಕರ್ತರಿಂದ ವಿಶೇಷ ಪೂಜೆ..!

Related Posts

ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಶಾಸಕ ವಿನಯ್ ಕುಲಕರ್ಣಿ ದೋಷಿ-ನಿರ್ದೋಷಿ ?
ರಾಜಕೀಯ

ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಶಾಸಕ ವಿನಯ್ ಕುಲಕರ್ಣಿ ದೋಷಿ-ನಿರ್ದೋಷಿ ?

by ಪ್ರತಿಧ್ವನಿ
April 15, 2026
0

ಧಾರವಾಡ ಜಿಲ್ಲೆಯ ರಾಜಕೀಯ ವಲಯವನ್ನು ಕದಡಿದ್ದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಕೊನೆಗೂ ತೀರ್ಪು ಹೊರಬಿದ್ದಿದೆ. ದೀರ್ಘಕಾಲದ ಕಾನೂನು ಹೋರಾಟದ ಬಳಿಕ...

Read moreDetails
ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

April 14, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
Next Post
ಹನುಮಂತನಿಗೆ ಕಾಂಗ್ರೆಸ್‌ ಕಾರ್ಯಕರ್ತರಿಂದ ವಿಶೇಷ ಪೂಜೆ..!

ಹನುಮಂತನಿಗೆ ಕಾಂಗ್ರೆಸ್‌ ಕಾರ್ಯಕರ್ತರಿಂದ ವಿಶೇಷ ಪೂಜೆ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada