• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಸಿಧು ವಿರುದ್ದ ಶಿಸ್ತು ಕ್ರಮಕ್ಕೆ ಮುಂದಾದ ಕಾಂಗ್ರೆಸ್‌ ?

ಪ್ರತಿಧ್ವನಿ by ಪ್ರತಿಧ್ವನಿ
May 2, 2022
in ದೇಶ, ರಾಜಕೀಯ
0
ಸಿಧು ವಿರುದ್ದ ಶಿಸ್ತು ಕ್ರಮಕ್ಕೆ ಮುಂದಾದ ಕಾಂಗ್ರೆಸ್‌ ?
Share on WhatsAppShare on FacebookShare on Telegram

ರಾಷ್ಟ್ರ ರಾಜಕಾರಣದ ಹುಚ್ಚು ದೊರೆ ಎಂದು ಖ್ಯಾತಿ ಪಡೆದಿರುವ ಮಾಜಿ ಸಚಿವ ಹಾಗು ಪಂಜಾಬ್‌ ಕಾಂಗ್ರೆಸ್ಸಿನ ಮಾಜಿ ಮುಖ್ಯಸ್ಥ ನವಜೋತ್‌ ಸಿಂಗ್‌ ವಿರುದ್ದ ಶಿಸ್ತು ಕ್ರಮ ಜರುಗಿಸಲು ಕಾಂಗ್ರೆಸ್‌ ಹೈ ಕಮಾಂಡ್‌ ಮುಂದಾಗಿದೆ.

ADVERTISEMENT

ಪಂಜಾಬ್‌ ಕಾಂಗ್ರೆಸ್‌ ಉಸ್ತುವಾರಿ ಹರೀಶ್‌ ಚೌಧರಿ ಈಗಾಗಲೇ ಈ ಕುರಿತು ಪಕ್ಷದ ವರಿಷ್ಠೆ ಸೋನಿಯಾಗೆ ಪತ್ರ ಬರೆದಿದ್ದು ಪಕ್ಷ ವಿರೋಧಿ ಹೇಳಿಕೆ ಹಾಗು ಚಟುವಟಿಕೆ ನಡೆಸಿದ ಆರೋಪದ ಮೇಲೆ ಶಿಸ್ತು ಕ್ರಮ ಜರುಗಿಸುವಂತೆ ಕೋರಿದ್ದಾರೆ. ಕಾಂಗ್ರೆಸ್‌ ವರಿಷ್ಠೆ ಸೋನಿಯಾ ಈ ದೂರನ್ನು ಶಿಸ್ತು ಸಮಿತಿಗೆ ರವಾನಿಸಿದ್ದಾರೆ ಎಂದು ತಿಳಿದು ಬಂದಿದೆ. ಇತ್ತೀಚಿಗೆ ಸುನೀಲ್‌ ಜಾಖರ್‌ರನ್ನು ಇದೇ ಆರೋಪದ ಮೇಲೆ ಪಕ್ಷದಿಂದ ಉಚ್ಚಾಟಿಸಲಾಗಿತ್ತು.

ಈ ಹಿಂದೆ ಸಿಧು ತಮ್ಮನ್ನು ಮುಖ್ಯಮಂತ್ರಿಯನ್ನಾಗಿ ಮಾಡಲಿಲ್ಲ ಮತ್ತು ಚುನಾವಣೆ ಸಮಯದಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಘೋಷಿಸಲಿಲ್ಲ ಎಂಬುದಕ್ಕೆ ಹಾಗು ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಸೋಲಿಗೆ ಪಕ್ಷವನ್ನು ಹೀನಾಮಾನವಾಗಿ ಟೀಕಿಸಿದ್ದಾರೆ ಮತ್ತು ಕಾಂಗ್ರೆಸ್‌ನ ಬದ್ದವೈರಿ ಎಂದೇ ಕರೆಯಲ್ಪಡುವ ಪಂಜಾಬ್‌ ಆಮ್‌ ಆದ್ಮಿ ಪಕ್ಷದ ಮುಖ್ಯಸ್ಥ ಮುಖ್ಯಮಂತ್ರಿ ಭಗವಂತ್‌ ಮಾನ್‌ರನ್ನು ಹಾಡಿ ಹೊಗಳಿದ್ದಾರೆ.

ಮುಂದುವರೆದು, ಇತ್ತೀಚಿಗೆ ಪ್ರಶಾಂತ್ ಕಿಶೋರ್‌ ಕಾಂಗ್ರೆಸ್‌ ಪ್ರಸ್ತಾವನೆಯನ್ನು ತಿರಸ್ಕರಿಸಿದ ಬೆನ್ನಲ್ಲೇ ಪ್ರಶಾಂತ್‌ ಜೊತೆಗಿದ್ದ ಫೋಟೋ ಒಂದನ್ನು ಪೋಸ್ಟ್‌ ಮಾಡಿದ್ದ ಸಿಧು ಪ್ರಶಾಂತ್‌ ಬೆಂಬಲಿಸಿ ಟ್ವೀಟ್‌ ಮಾಡಿದ್ದರು. ಮೊದಲ ಹೊಡೆತವು ಯುದ್ದದ ಅರ್ಧದಷ್ಟು ನೀಡಿದಂತೆ ಒಳ್ಳೆಯ ಆರಂಭವು ಯಾವತ್ತಿದ್ದರು ಉಳ್ಳೆಯ ಅಂತ್ಯವನ್ನು ಕಾಣುತ್ತದೆ ನಮ್ಮ ಸಂವಿಧಾನವನ್ನು ಗೌರವಿಸುವ ನಿಮ್ಮ ಪ್ರಾಮಾಣಿಕ ಪ್ರಯತ್ನಗಳು ಯಾವಾಗಲು ಉತ್ತಮ ಎಂದು ಟ್ವೀಟ್‌ ಮಾಡಿದ್ದರು.

The first blow is half the battle my friend… A good beginning always makes a good ending… Best always in your sincere efforts to honour the spirit of our Constitution… ‘The power of people must return to the people’, manifold… https://t.co/Upav1EY9IN

— Navjot Singh Sidhu (@sherryontopp) May 2, 2022

ತಮ್ಮ ಹಾಗು ಪಕ್ಷದೊಳಗಿನ ಆಂತರಿಕ ಕಿತ್ತಾಟ, ಮುಖ್ಯಮಂತ್ರಿಯಾಗಿ ಚನ್ನಿ ಆಯ್ಕೆ ಸರ್ಕಾರದ ಯೋಜನೆಗಳನ್ನು ನಿರಂತರವಾಗಿ ಟೀಕಿಸಿದ ಫಲವಾಗಿ ಸಿಧು ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸೋಲಿಗೆ ಪ್ರಮುಖ ಪಾತ್ರ ವಹಿಸಿದ್ದರು ಎಂದು ಹೇಳಿದರೆ ತಪ್ಪಾಗದು. ಯಾಕೆಂದರೆ ತಮ್ಮದೇ ಪಕ್ಷದ ಸರ್ಕಾರವನ್ನು ಭ್ರಷ್ಟ ಹಾಗೂ ಬೇರೆ ಕಪ್ಷದೊಮದಿಗೆ ಕೈ ಜೋಡಿಸಿದ್ದಾರೆ ಎಂದರೆ ಪಕ್ಷದ ಇಮೇಜ್‌ ಡ್ಯಾಮೇಜ್‌ ಆಗದೇ ಇರುತ್ತದೆಯೆ.

ಅಮರಿಂದರ್‌ ಸಿಂಗ್‌ ವಿರುದ್ದ ನಿರಂತರವಾಗಿ ಕೆಂಡಕಾರುತ್ತಲೇ ಬಂದಿದ್ದ ಸಿಧುರನ್ನು ಕಳೆದ ವರ್ಷ ಜುಲೈನಲ್ಲಿ ಪಂಜಾಬ್‌ ಪಿಸಿಸಿ ಅಧ್ಯಕ್ಷರನ್ನಾಗಿ ಘೋಷಿಸಲಾಗಿತ್ತು. ಆದರೆ, ಅದು ಮೂರು ತಿಂಗಳ ನಂತರ ಅಮರೀಂದರ್‌ರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುವಲ್ಲಿ ಯಶಸ್ವಿಯಾದರು.

ಮತ್ತೊಂದು ಸುದ್ದಿ ಕೇಳಿ ಬರುತ್ತಿರುವುದು ಏನೆಂದರೆ ಸಿಧು ಕಾಂಗ್ರೆಸ್‌ಗೆ ರಾಜೀನಾಮೆ ನೀಡಿ ಆಪ್‌ಗೆ ಸೇರಲಿದ್ದಾರೆ ಎಂದು ತಿಳಿದು ಬಂದಿದೆ. ಸದ್ಯ ಪಾಂಜಾಬ್‌ನಲ್ಲಿ 5 ರಾಜ್ಯಸಭಾ ಸ್ಥಾನಗಳು ಖಾಲಿಯಿದ್ದು ಇದರಲ್ಲಿ ಒಂದು ಸ್ಥಾನದ ಮೇಲೆ ಸಿಧು ಕಣ್ಣಿಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಆದರೆ, ಆಪ್‌ ವರಿಷ್ಠರು ಸಿಧುರನ್ನು ಬಿಲಕುಲ್‌ ಪಕ್ಷಕ್ಕೆ ಸೇರಿಸಿಕೊಳ್ಳಬಾರದು ಎಂಬ ಒತ್ತಾಯ ಕೇಳಿ ಬಂದಿದೆ ಮುಂದಿನ ದಿನಗಳಲ್ಲಿ ಸಿಧುರ ಹುಚ್ಚಾಟ ಎಲ್ಲಿಯವರೆಗು ಬಂದು ನಿಲ್ಲುತ್ತದೆ ಬುದನ್ನು ಕಾದು ನೋಡಬೇಕಿದೆ.

Tags: BJPCongress PartyDisciplinary action against Sidhu in the offingನರೇಂದ್ರ ಮೋದಿಬಿಜೆಪಿ
Previous Post

ಕೆಜಿಎಫ್ ಚಿತ್ರದ ಅಬ್ಬರ ಕಂಡು ನಾನು ಹೆದರಿದ್ದೆ : ನಟ ಅಮೀರ್ ಖಾನ್

Next Post

ರಾಜಸ್ಥಾನ್ ಗೆ 7 ವಿಕೆಟ್ ಆಘಾತ: ಕೆಕೆಆರ್ ಪ್ಲೇಆಫ್ ಆಸೆ ಜೀವಂತ

Related Posts

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು
Top Story

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

by ಪ್ರತಿಧ್ವನಿ
April 30, 2026
0

ಬೆಂಗಳೂರು : ವಿಜಯಪುರದಲ್ಲಿ 227.91 ಕೋಟಿ ರೂ. ವೆಚ್ಚದಲ್ಲಿ ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆ.ಎಸ್.ಡಿ.ಎಲ್) ನೂತನ ಉತ್ಪಾದನಾ ಘಟಕ ಸ್ಥಾಪಿಸುವ ಯೋಜನೆಗೆ...

Read moreDetails
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
Next Post
ರಾಜಸ್ಥಾನ್ ಗೆ 7 ವಿಕೆಟ್ ಆಘಾತ: ಕೆಕೆಆರ್ ಪ್ಲೇಆಫ್ ಆಸೆ ಜೀವಂತ

ರಾಜಸ್ಥಾನ್ ಗೆ 7 ವಿಕೆಟ್ ಆಘಾತ: ಕೆಕೆಆರ್ ಪ್ಲೇಆಫ್ ಆಸೆ ಜೀವಂತ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada