• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿದ ನ್ಯಾಯಾಧೀಶರನ್ನು ವಜಾ ಮಾಡಿ : ಡಿಕೆ ಶಿವಕುಮಾರ್ ಆಗ್ರಹ

Any Mind by Any Mind
February 20, 2022
in ಕರ್ನಾಟಕ
0
ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿದ ನ್ಯಾಯಾಧೀಶರನ್ನು ವಜಾ ಮಾಡಿ : ಡಿಕೆ ಶಿವಕುಮಾರ್ ಆಗ್ರಹ
Share on WhatsAppShare on FacebookShare on Telegram

ರಾಯಚೂರು ಜಿಲ್ಲಾ ನ್ಯಾಯಾಧೀಶರು ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿದ ವಿಚಾರವಾಗಿ ಪ್ರತಿಕ್ರಿಯಿಸಿ ಡಿಕೆ ಶಿವಕುಮಾರ್, ದೇಶಕ್ಕೆ ಸಂವಿಧಾನ ಕೊಟ್ಟಂತಹ ಮಹಾಪುರುಷರಿಗೆ ಅಪಮಾನ ಮಾಡಿದವರು ಯಾರೇ ಆದರೂ ಅವರನ್ನು ವಜಾಗೊಳಿಸಬೇಕಿದೆ ಎಂದು ಆಗ್ರಹಿಸಿದ್ದಾರೆ.

ADVERTISEMENT

ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳಿಗೆ ಭಾನುವಾರ ಮಾತನಾಡಿದ ಡಿ.ಕೆ. ಶಿವಕುಮಾರ್, ಅಂಬೇಡ್ಕರ್ ಅವರಿಗೆ ನ್ಯಾಯಾಧೀಶರು ಅಪಮಾನ ಮಾಡಿದ ವಿಚಾರವಾಗಿ ಡಿಎಸ್ ಎಸ್ ನವರು ಬೃಹತ್ ಪ್ರತಿಭಟನೆ ಮಾಡಿರುವುದು ಸರಿಯಾಗಿದೆ. ದೇಶಕ್ಕೆ ಸಂವಿಧಾನ ಕೊಟ್ಟಂತಹ ಮಹಾಪುರುಷರಿಗೆ ಅಪಮಾನ ಮಾಡಿದವರು ಯಾರೇ ಆದರೂ ಅವರನ್ನು ವಜಾಗೊಳಿಸಬೇಕಿದೆ ಎಂದು ಆಗ್ರಹಿಸಿದ್ದಾರೆ.

ಇಂದು ಅಂತಹ ಮಹಾನ್ ವ್ಯಕ್ತಿಯನ್ನೇ ಅಗೌರವವಾಗಿ ಕಾಣುವ ಪರಿಸ್ಥಿತಿ ಎಂದಾದರೆ, ಸರ್ಕಾರ ಕೂಡಲೇ ಮುಖ್ಯನ್ಯಾಯಾಧೀಶರಿಗೆ ಪತ್ರ ಬರೆದು ಕ್ರಮ ಕೈಗೊಳ್ಳುವಂತೆ ಮನವಿ ಮಾಡಬೇಕು. ಒಂದು ಬಾರಿ ಇದಕ್ಕೆ ಅವಕಾಶ ಕೊಟ್ಟರೆ ಮತ್ತೆ ಮತ್ತೆ ಇಂತಹ ಪ್ರಕರಣಗಳು ಮರುಕಳಿಸುತ್ತವೆ. ಇದಕ್ಕೆ ಅವಕಾಶ ನೀಡಬಾರದು. ನಿನ್ನೆ ಪ್ರತಿಭಟನೆಯಲ್ಲಿ 50 ಸಾವಿರಕ್ಕೂ ಹೆಚ್ಚು ಜನ ಸೇರಿ ಪ್ರತಿಭಟನೆ ಮಾಡಿದ್ದು, ಅವರನ್ನು ಅಭಿನಂದಿಸುತ್ತೇನೆ. ಅವರ ಜತೆ ನಮ್ಮ ಧ್ವನಿ ಇರುತ್ತದೆ ಎಂದಿದ್ದಾರೆ.

ಮತ್ತೆಮೇಕೆ ದಾಟು ಪಾದಯಾತ್ರೆ ಆರಂಭ

ಇತ್ತೀಚೆಗೆ ಮುಖ್ಯಮಂತ್ರಿಗಳು ದೆಹಲಿ ಭೇಟಿ ಕೊಟ್ಟಾಗ ಕೇಂದ್ರ ಸಚಿವರ ಅನುಮತಿ ಪಡೆದು ಮೇಕೆದಾಟು ಯೋಜನೆ ಆರಂಭಿಸುತ್ತಾರೆ ಎಂದು ಭಾವಿಸಿದ್ದೆವು. ಆದರೆ ಅದು ಸಾಧ್ಯವಾಗಲಿಲ್ಲ. ನಾವು ನಮ್ಮ ಪಾದಯಾತ್ರೆ ವಿಚಾರವಾಗಿ ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದ್ದೇವೆ. ಶೀ಼ಘ್ರದಲ್ಲೇ ಪಾದಯಾತ್ರೆ ಆರಂಭಿಸುತ್ತೇವೆ ಎಂದು ಹೇಳಿದ್ದಾರೆ.

ಅಹೋರಾತ್ರಿ ಧರಣಿ:

ಈಶ್ವರಪ್ಪನ ವಿಚಾರಕ್ಕಿಂತ ಬಿಜೆಪಿ ಹಾಗೂ ರಾಜ್ಯ ಸರ್ಕಾರದ ಧೋರಣೆ. ಈಶ್ವರಪ್ಪ ಅವರ ಹೇಳಿಕೆ ವೈಯಕ್ತಿಕ ಎಂದು ಸೂರ್ಯ ಹೇಳಿದ್ದಾರೆ. ಹಾಗಾದರೆ ಅವರನ್ನು ವಜಾ ಮಾಡಬೇಕಲ್ಲವೇ? ಈಶ್ವರಪ್ಪ ಅವರನ್ನು ಒಂದೆರಡು ದಿನಗಳಲ್ಲಿ ವಜಾ ಮಾಡುತ್ತಾರೆ ಎಂದು ಭಾವಿಸಿ ರಾಜ್ಯಪಾಲರಿಗೆ ಗೌರವ ಕೊಟ್ಟು ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ಮಾಡಿದ್ದೆವು. ಇಲ್ಲದಿದ್ದರೆ ರಾಜ್ಯಪಾಲರ ಭಾಷಣಕ್ಕೂ ಅವಕಾಶ ನೀಡುತ್ತಿರಲಿಲ್ಲ. ಇಂತಹ ಘಟನೆಗಳು ಈ ಹಿಂದೆಯೂ ನಡೆದಿವೆ.

ಮುಖ್ಯಮಂತ್ರಿಗಳಿಗೆ ಸ್ವಾಭಿಮಾನ ಇದ್ದಿದ್ದರೆ, ಹರಕಲು ಬಾಯಿ ಈಶ್ವರಪ್ಪ, ಮುರುಗೇಶ್ ನಿರಾಣಿ ಮುಂದಿನ ಸಿಎಂ ಎಂದು ಹೇಳಿದಾಗಲೇ ವಜಾ ಮಾಡಬೇಕಿತ್ತು.

ಇನ್ನು ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಅವರ ವಿರುದ್ಧವೇ ರಾಜ್ಯಪಾಲರಿಗೆ ಪತ್ರ ಬರೆದು ದೂರು ನೀಡಿದ್ದರು. ಈಶ್ವರಪ್ಪನಿಗೆ ಅವರ ಸರ್ಕಾರದವರ ಮೇಲೆ ನಿಷ್ಠೆ ಇಲ್ಲ.

ಈ ವಿಚಾರವಾಗಿ ಯಾವ ಪಕ್ಷದ ನಾಯಕರು ಯಾವ ಹೇಳಿಕೆ ನೀಡುತ್ತಿದ್ದಾರೆ ಎಂದು ಜನ ನೋಡುತ್ತಿದ್ದಾರೆ. ನಿನ್ನೆ ಮಲ್ಲಿಕಾರ್ಜುನ ಖರ್ಗೆ ಸಾಹೇಬರು ಧರಣಿನಿರತ ಶಾಸಕರನ್ನು ಭೇಟಿ ಮಾಡಿ, ಇದು ಇಡೀ ದೇಶದ ವಿಚಾರ. ಸಂಸತ್ ಸದಸ್ಯರು, ಬೇರೆ ರಾಜ್ಯಗಳ ನಾಯಕರು ಕರೆ ಮಾಡಿ ಕರ್ನಾಟಕ ಕಾಂಗ್ರೆಸ್ ಶಾಸಕರು ಉತ್ತಮ ಕೆಲಸ ಮಾಡುತ್ತಿದ್ದಾರೆ. ನಮ್ಮ ಸ್ವಾಭಿಮಾನ, ಗೌರವ, ಪ್ರಜಾಪ್ರಭುತ್ವ, ದೇಶಭಕ್ತಿ ಉಳಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಪ್ರಶಂಸೆ ಮಾಡಿದ್ದನ್ನು ನಮಗೆ ತಿಳಿಸಿದರು.

Tags: BJPCongress PartyCovid 19ಅಂಬೇಡ್ಕರ್ಅಹೋರಾತ್ರಿ ಧರಣಿಎಚ್ ಡಿ ಕುಮಾರಸ್ವಾಮಿಕರೋನಾಕೋವಿಡ್-19ನರೇಂದ್ರ ಮೋದಿನ್ಯಾಯಾಧೀಶಬಿ ಎಸ್ ಯಡಿಯೂರಪ್ಪಬಿಜೆಪಿಮತ್ತೆಮೇಕೆ ದಾಟು ಪಾದಯಾತ್ರೆಸಿದ್ದರಾಮಯ್ಯ
Previous Post

ಅತಿಥಿ ಶಿಕ್ಷಕರಿಗೆ ಬಿಗ್ ಶಾಕ್ ; ಕಾಯಂಗೊಳಿಸಲು ಸಾಧ್ಯವಿಲ್ಲ ಎಂದ ರಾಜ್ಯ ಸರ್ಕಾರ! : ಮತ್ತೆ ಚುರುಕುಗೊಂಡ ಅತಿಥಿ ಉಪನ್ಯಾಸಕರ ಪ್ರತಿಭಟನೆ

Next Post

ಬಿಜೆಪಿಯವರಿಗೆ ಹುತಾತ್ಮರು ಹಿಡಿದ ರಾಷ್ಟ್ರ ಧ್ವಜದ ಬೆಲೆಯೂ ಗೊತ್ತಿಲ್ಲ : ಸಿದ್ದರಾಮಯ್ಯ ಆಕ್ರೋಶ

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

April 18, 2026
ಪ್ಯಾರಾಚೂಟ್​ ತರಬೇತಿ ವೇಳೆ ಅವಘಡ ಸೇನಾ ಸಿಬ್ಬಂದಿಗೆ ಗಾಯ : ಮುಂದೇನಾಯ್ತು..?

ಪ್ಯಾರಾಚೂಟ್​ ತರಬೇತಿ ವೇಳೆ ಅವಘಡ ಸೇನಾ ಸಿಬ್ಬಂದಿಗೆ ಗಾಯ : ಮುಂದೇನಾಯ್ತು..?

April 18, 2026
Next Post
ತಮ್ಮ ಭ್ರಷ್ಟಾಚಾರಕ್ಕೆ ಬಿಜೆಪಿ ನನ್ನ ಮಗನ ಹೆಸರನ್ನು ಎಳೆದು ತಂದಿದೆ : ಸುಪ್ರೀಂ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆ ನಡೆಯಲಿ – ಸಿದ್ದರಾಮಯ್ಯ

ಬಿಜೆಪಿಯವರಿಗೆ ಹುತಾತ್ಮರು ಹಿಡಿದ ರಾಷ್ಟ್ರ ಧ್ವಜದ ಬೆಲೆಯೂ ಗೊತ್ತಿಲ್ಲ : ಸಿದ್ದರಾಮಯ್ಯ ಆಕ್ರೋಶ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada