ಈ ಹಿಂದೆ ವಿವಾದಾತ್ಮಕ ಹೇಳಿಕೆ(Controversial statement) ಮೂಲಕ ಕಾಂಗ್ರೆಸ್ ಪಕ್ಷವನ್ನು (congress party) ಸಂಕಷ್ಟಕ್ಕೆ ಸಿಲುಕಿಸಿದ್ದ ಸ್ಯಾಮ್ ಪಿತ್ರೋಡಾ (Sam pitroda) ಇದೀಗ ಭಾರತೀಯರ ಬಗ್ಗೆ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡೋದ್ರ ಮೂಲಕ ತಮ್ಮ ಸ್ಥಾನಮಾನವನ್ನು ಕಳೆದುಕೊಂಡಿದ್ದಾರೆ. ಇಡೀ ಭಾರತ ಒಂದು ದೇಶವಾಗಿದ್ದರೂ ಕೂಡ ದಕ್ಷಿಣ ಭಾರತೀಯರು ಆಫ್ರಿಕನ್ನರಂತೆ (African), ಪಶ್ಚಿಮ ಭಾಗದವರು ಚೀನಿಯರಂತೆ (chinese), ಪೂರ್ವದವರು ಆರ್ಯನ್ನರಂತೆ ಕಾಣುತ್ತಾರೆ ಎಂಬ ಹೇಳಿಕೆ ಅವರಿಗೆ ಮುಳುವಾಗಿ ಪರಿಣಮಿಸಿದೆ.
ಪಿತ್ರಾರ್ಜಿತ ಆಸ್ತಿ ತೆರಿಗೆ ವಿವಾದದ ಬೆನ್ನಲ್ಲೇ ಭಾರತೀಯರ ಜನಾಂಗೀಯ ನಿಂದನೆಯಿಂದ ತೀವ್ರ ಟೀಕೆಗೆ ಗುರಿಯಾಗಿರುವ ಭಾರತೀಯ ಸಾಗತೋತ್ತರ ಕಾಂಗ್ರೆಸ್ನ (overseas congress president) ಅಧ್ಯಕ್ಷ ಸ್ಯಾಮ್ ಪಿತ್ರೋಡಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ಸ್ಯಾಮ್ ಪಿತ್ರೋಡಾ ನಿರ್ಧಾರವನ್ನು ಎಐಸಿಸಿ ಅಧ್ಯಕ್ಷರು (AICC President) ಸಮ್ಮತಿಸಿದ್ದಾರೆ ಎಂದು ಪಕ್ಷದ ಹಿರಿಯ ನಾಯಕ ಜೈರಾಮ್ ರಮೇಶ್ ತಿಳಿಸಿದ್ದಾರೆ.
ಅಮೆರಿಕಾದಲ್ಲಿರುವ (America) ಸ್ಯಾಮ್ ಪಿತ್ರೋಡಾ ಸಂದರ್ಶನವೊಂದರಲ್ಲಿ ಭಾರತೀಯ ಭಾರತೀಯರ ವರ್ಣದ ಬಗ್ಗೆ ಮಾತನಾಡಿ ಬಿಜೆಪಿ (BJP) ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದರು. ಇಷ್ಟೆಲ್ಲಾ ವಿವಾದ ಸೃಷ್ಟಿಸಿದ ಸ್ಯಾಮ್ ಪಿತ್ರೋಡಾ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಡ್ಯಾಮೇಜ್ ಕಂಟ್ರೋಲ್ಗೆ (Damage control) ಮುಂದಾಗಿದ್ದಾರೆ.