• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಔರಾದನಲ್ಲಿ 141 ವಿಶೇಷಚೇತನರಿಗೆ ಸೌಲಭ್ಯ ವಿತರಣೆದಿವ್ಯಾಂಗರಿಗೆ ತೊಂದರೆ ಕೊಟ್ಟರೆ ಸುಮ್ಮನೆ ಬಿಡುವುದಿಲ್ಲ:ಶಾಸಕ ಪ್ರಭು ಚವ್ಹಾಣ

ಪ್ರತಿಧ್ವನಿ by ಪ್ರತಿಧ್ವನಿ
September 23, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೀದರ್:ದಿವ್ಯಾಂಗರ ಅನುಕೂಲಕ್ಕಾಗಿ ಸರ್ಕಾರ ಜಾರಿಗೊಳಿಸಿದ ಎಲ್ಲ ಯೋಜನೆಗಳು ಸಮರ್ಪಕವಾಗಿ ಜಾರಿಗೊಳಿಸಬೇಕು. ಯಾವುದಾದರೂ ಕಛೇರಿಗಳಲ್ಲಿ ದಿವ್ಯಾಂಗರಿಗೆ ಹಣಕ್ಕಾಗಿ ಬೇಡಿಕೆಯಿಡುವುದು, ವಿನಾಕಾರಣ ಸತಾಯಿಸುವುದು ಮಾಡಿದರೆ ಯಾವುದೇ ಕಾರಣಕ್ಕೂ ಸುಮ್ಮನೆ ಬಿಡುವುದಿಲ್ಲವೆಂದು ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು ಬಿ.ಚವ್ಹಾಣ ಅವರು ಅಧಿಕಾರಿಗಳಿಗೆ ಎಚ್ಚರಿಸಿದರು.ಔರಾದ(ಬಿ) ಪಟ್ಟಣದ ಶಾಸಕರ ಕಛೇರಿ ಆವರಣದಲ್ಲಿ ಸೆ.23ರಂದು ಜರುಗಿದ ಕೇಂದ್ರ ಸರ್ಕಾರದ ದಿವ್ಯಾಂಗರ ಎಡಿಐಪಿ ಯೋಜನೆಯಡಿ ವಿಶೇಷಚೇತನ ಫಲಾನುಭವಿಗಳಿಗೆ ಸಾಧನ ಸಲಕರಣೆಗಳನ್ನು ವಿತರಿಸುವ ಸಾಮಾಜಿಕ ಆಧಾರಿತ ಶಿಬಿರದಲ್ಲಿ ಅವರು ಮಾತನಾಡಿದರು.

ADVERTISEMENT

ವಿಕಲಚೇತನರಿಗೆ ಅನುಕೂಲವಾಗುವ ದಿಶೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದಿಂದ ಸಾಕಷ್ಟು ಯೋಜನೆಗಳು ಚಾಲ್ತಿಯಲ್ಲಿವೆ. ಔರಾದ(ಬಿ) ಮತಕ್ಷೇತ್ರದಲ್ಲಿನ ವಿಕಲಚೇತನರ ಅನುಕೂಲಕ್ಕಾಗಿ ಸುಮಾರು 1 ಕೋಟಿ ಮೌಲ್ಯದ ಸಾಧನ ಸಲಕರಣೆಗಳನ್ನು ವಿತರಿಸಲಾಗುತ್ತಿದೆ ಎಂದು ಹೇಳಿದರು.ವಿಕಲಚೇನರು ಕೂಡ ಎಲ್ಲರಂತೆ ಸ್ವಾಭಿಮಾನ ಮತ್ತು ಗೌರವದಿಂದ ಬದುಕಬೇಕೆಂಬ ಉದ್ದೇಶದಿಂದ ಅವರನ್ನು ದಿವ್ಯಾಂಗರೆ ಕರೆಯಲಾಗುತ್ತಿದೆ. ಅವರ ವ್ಯಾಸಂಗಕ್ಕೆ ಅನುಕೂಲವಾಗಲು ವಿದ್ಯಾರ್ಥಿವೇತನ, ಪಿಂಚಣಿ ಯೋಜನೆ, ಉನ್ನತ ವಿದ್ಯಾಭ್ಯಾಸಕ್ಕೆ ನೆರವು, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ, ಟಾಕಿಂಗ್ ಲ್ಯಾಪ್‌ಟಾಪ್, ಸಾಧನ ಸಲಕರಣೆ ವಿತರಣೆ, ರಿಯಾಯಿತಿ ದರದಲ್ಲಿ ಬಸ್ ಪಾಸ್, ಉಚಿತ ರೈಲ್ವೇ ಪಾಸ್, ಕಿಟ್ ವಿತರಣೆ, ಶಿಶುಪಾಲನಾ ಭತ್ಯೆ ಹೀಗೆ ಹತ್ತು ಹಲವು ಯೋಜನೆಗಳು ಜಾರಿಯಲ್ಲಿವೆ. ಇವುಗಳ ಲಾಭ ಪಡೆಯಬೇಕು ಎಂದರು.

ನನಗೆ ದಿವ್ಯಾಂಗರ ಬಗ್ಗೆ ಸಾಕಷ್ಟು ಗೌರವವಿದೆ. ಅವರಿಗೆ ಸಾಧನ ಸಲಕರಣೆಗಳನ್ನು ವಿತರಿಸುವ ಸೌಭಾಗ್ಯ ದೊರೆತಿರುವುದು ಸಂತೋಷ ನೀಡಿದೆ. ಇನ್ನು ಮುಂದೆ ಏನೆ ಸಮಸ್ಯೆಯಿರಲಿ ನೇರವಾಗಿ ಭೇಟಿಯಾಗಬಹುದು. ಸರ್ಕಾರದ ಸೌಲಭ್ಯ ಬೇಕಿದ್ದರೆ ನನ್ನ ಬಳಿಗೆ ಬಂದು ಗುರುತಿನ ಚೀಟಿ ತೋರಿಸಿದರೆ ಸಾಕು ಸೌಲಭ್ಯ ಕಲ್ಪಿಸಲು ಸಿದ್ಧನಿದ್ದೇನೆ. ಔರಾದ(ಬಿ) ಕ್ಷೇತ್ರದ ದಿವ್ಯಾಂಗರು ಹೆದರಬೇಕಿಲ್ಲ. ನಾನು ನಿಮ್ಮ ಜೊತೆಗಿದ್ದೇನೆ ಎಂದು ದಿವ್ಯಾಂಗರಿಗೆ ಅಭಯ ನೀಡಿದರು.ದಿವ್ಯಾಂಗರ ಅನುಕೂಲಕ್ಕಾಗಿ ತಾಲ್ಲೂಕು ಕೇಂದ್ರದಲ್ಲಿ ಕಛೇರಿಯನ್ನು ಒದಗಿಸಲಾಗಿದೆ. ಕೆಲಸ ಕಾರ್ಯಗಳು ಇನ್ನಷ್ಟು ಅಚ್ಚುಕಟ್ಟಾಗಿ ನಡೆಯಲು ಟೇಬಲ್, ಕಂಪ್ಯೂಟರ್ ಸೇರಿದಂತೆ ಇನ್ನಿತರೆ ಅಗತ್ಯ ಸಲಕರಣೆಗಳನ್ನು ಒದಗಿಸಬೇಕು ಎಂಬ ಮನವಿಗೆ ಸ್ಪಂದಿಸಿದ ಶಾಸಕರು, ಕಛೇರಿ ನೀಡಿದ್ದೇನೆ. ಅವಶ್ಯಕ ಸಲಕರಣೆಗಳನ್ನು ನೀಡುತ್ತೇನೆ. ದಿವ್ಯಾಂಗರ ಅನುಕೂಲಕ್ಕಾಗಿ ಪ್ರಮಾಣಿಕವಾಗಿ ಸೇವೆ ಸಲ್ಲಿಸುವಂತೆ ತಿಳಿಸಿದರು.

ಈ ಸಂದರ್ಭದಲ್ಲಿ ಔರಾದ(ಬಿ) ಎಪಿಎಂಸಿ ಅಧ್ಯಕ್ಷರಾದ ಧೊಂಡಿಬಾ ನರೋಟೆ, ಔರಾದ(ಬಿ) ತಾಲ್ಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಬೀರೇಂದ್ರಸಿಂಗ್ ಠಾಕೂರ್, ಶಿವಜುಮಾರ ಘಾಟೆ, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಸ್ವಾಮಿದಾಸ, ಎಂಆರ್ ಡಬ್ಲ್ಯೂ ಬಸವರಾಜ ದೇಶಮುಖ ಸೇರಿದಂತೆ ಇತರರು ಉಪಸ್ಥಿತರಿದ್ದರು. ಚನ್ನಬಸಪ್ಪ ಪಾಟೀಲ ನಿರೂಪಿಸಿ ವಂದಿಸಿದರು.

Tags: MLA Prabhu ChavanMR W Basavaraja DeshmukhShivjumara GhateTaluk Panchayat Executive Officer Birendra Singh ThakurTown Panchayat Chief Swamidas
Previous Post

ಖೇರ್ಡಾ-ಚಿಕ್ಲಿ(ಯು) ರಸ್ತೆ ಕಾಮಗಾರಿಗೆ ಶಾಸಕ ಪ್ರಭು ಚವ್ಹಾಣ ಚಾಲನೆ

Next Post

ಕೇಂದ್ರ ಸಚಿವ ಕುಮಾರಸ್ವಾಮಿ ಮಾತಿಗೆ ತಿರುಗೇಟು ಕೊಟ್ಟ ಸಚಿವ ಕೃಷ್ಣಬೈರೇಗೌಡ.

Related Posts

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..
Top Story

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

by ಪ್ರತಿಧ್ವನಿ
April 14, 2026
0

ಬೆಂಗಳೂರು : ಸುಮಾರು ಎರಡು ದಶಕಗಳ ಕಾಲ 10 ಬಾರಿ ಉನ್ನತ ಹುದ್ದೆಯಲ್ಲಿ ಸೇವೆ ಸಲ್ಲಿಸಿದ ನಂತರ ಬಿಹಾರದ (Bihar CM) ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್...

Read moreDetails
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

April 14, 2026
Next Post
ಕೇಂದ್ರ ಸಚಿವ ಕುಮಾರಸ್ವಾಮಿ ಮಾತಿಗೆ ತಿರುಗೇಟು ಕೊಟ್ಟ ಸಚಿವ ಕೃಷ್ಣಬೈರೇಗೌಡ.

ಕೇಂದ್ರ ಸಚಿವ ಕುಮಾರಸ್ವಾಮಿ ಮಾತಿಗೆ ತಿರುಗೇಟು ಕೊಟ್ಟ ಸಚಿವ ಕೃಷ್ಣಬೈರೇಗೌಡ.

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada