ಬೆಂಗಳೂರು: ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರ ಉಪಸ್ಥಿತಿಯಲ್ಲಿ, ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಇಲಾಖಾ ವಿದ್ಯಾರ್ಥಿನಿಲಯಗಳ ವಾರ್ಡನ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ವಿತರಣಾ ಸಮಾರಂಭವು ಬೆಂಗಳೂರಿನ ಲಿಡ್ಕರ್ ಸಭಾಭವನದಲ್ಲಿ ಜರುಗಿತು.

ವಾರ್ಡನ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಚಿವರು ಸಾಂಕೇತಿಕವಾಗಿ ನೇಮಕಾತಿ ಆದೇಶ ಪತ್ರವನ್ನು ವಿತರಿಸಿ, ವಿದ್ಯಾರ್ಥಿಗಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗಳನ್ನು ಗಮನದಲ್ಲಿಟ್ಟುಕೊಂಡು ಅತ್ಯಂತ ಜವಾಬ್ದಾರಿಯಿಂದ ವಸತಿನಿಲಯಗಳನ್ನು ನಿರ್ವಹಿಸುವಲ್ಲಿ ಸದಾ ಬದ್ಧರಾಗಿರಬೇಕು ಎಂದು ಸೂಚನೆಯನ್ನು ನೀಡಿದರು.
ಈ ಸಂದರ್ಭದಲ್ಲಿ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ನೋಡಲ್ ಏಜೆನ್ಸಿ ಸಲಹೆಗಾರರಾದ ಶ್ರೀ ಡಾ|| ಇ.ವೆಂಕಟಯ್ಯ, ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಮೇಜರ್ ಪಿ.ಮಣಿವಣ್ಣನ್, ಆಯುಕ್ತರಾದ ಶ್ರೀ ರಾಕೇಶ್ ಕುಮಾರ್ ಕೆ, ಇಲಾಖೆಯ ವಿವಿಧ ವಿಭಾಗಗಳ ಅಪರ ನಿರ್ದೇಶಕರು, ಜಂಟಿ ನಿರ್ದೇಶಕರು, ಉಪ ನಿರ್ದೇಶಕರು ಹಾಗೂ ಇತರ ಅಧಿಕಾರಿಗಳು ಮತ್ತು ವಾರ್ಡನ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು ಉಪಸ್ಥಿತರಿದ್ದರು.
