ನಿನ್ನೆ ತಡರಾತ್ರಿಯಷ್ಟೇ ರಾಜ್ಯ ಬಿಜೆಪಿಯ 39 ಸಂಘಟನಾತ್ಮಕ ಜಿಲ್ಲೆಗಳಿಗೆ ಜಿಲ್ಲಾಧ್ಯಕ್ಷರ ನೇಮಕವಾಗಿದ್ದು, ಇಂದು ಸಂಕ್ರಾಂತಿಯ ಹಿನ್ನೆಲೆಯಲ್ಲಿ, ಬೆಂಗಳೂರು ನಗರ ಜಿಲ್ಲೆಯ ವ್ಯಾಪ್ತಿಗೆ ಬರುವ ಮೂರು ಜಿಲ್ಲೆಗಳ ಜಿಲ್ಲಾಧ್ಯಕ್ಷರುಗಳು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ್ದಾರೆ.

ಬೆಂಗಳೂರು ದಕ್ಷಿಣ ಜಿಲ್ಲೆಯ ಜಿಲ್ಲಾಧ್ಯಕ್ಷ, ಶಾಸಕ ಸಿ.ಕೆ. ರಾಮಮೂರ್ತಿ, ಬೆಂಗಳೂರು ಕೇಂದ್ರ ಜಿಲ್ಲೆಯ ಜಿಲ್ಲಾಧ್ಯಕ್ಷ ಸಪ್ತಗಿರಿಗೌಡ, ಬೆಂಗಳೂರು ಉತ್ತರ ಜಿಲ್ಲೆಯ ಜಿಲ್ಲಾಧ್ಯಕ್ಷ ಎಸ್.ಹರೀಶ್, ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ್ದಾರೆ.
ಇನ್ನು ಸಂಕ್ರಾಂತಿಯ ಹಿನ್ನೆಲೆಯಲ್ಲಿ ರಾಜ್ಯಾಧ್ಯಕ್ಷರಿಗೆ ಎಳ್ಳು ಬೆಲ್ಲ ಕೊಟ್ಟು ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ.