• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Santhosh Lad: ಕೃಷಿ ಇಲಾಖೆಯಿಂದ ಬಿತ್ತನೆ ಬೀಜ ವಿತರಣೆ ಮಾಡಿದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್

ಪ್ರತಿಧ್ವನಿ by ಪ್ರತಿಧ್ವನಿ
October 4, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಬಿತ್ತನೆ ಬೀಜದ ಸದುಪಯೋಗ ಮಾಡಿ: ಲಾಡ್‌

ADVERTISEMENT

2025-26 ನೇ ಸಾಲಿನಲ್ಲಿ, ಧಾರವಾಡ ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿನ ಬಿತ್ತನೆ ಬೀಜಗಳನ್ನು ವಿತರಿಸಲು ಒಟ್ಟು 14 ರೈತ ಸಂಪರ್ಕ ಕೇಂದ್ರಗಳು ಹಾಗೂ 13 ಹೆಚ್ಚುವರಿ ಬೀಜ ವಿತರಣಾ ಕೇಂದ್ರಗಳನ್ನು ಒಳಗೊಂಡಂತೆ ಒಟ್ಟು 27 ಬೀಜ ವಿತರಣಾ ಕೇಂದ್ರಗಳನ್ನು ಗುರುತಿಸಲಾಗಿರುತ್ತದೆ ಎಂದು ಕಾರ್ಮಿಕ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರು ಹೇಳಿದರು.

ಅವರು ಇಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಕೃಷಿ ಇಲಾಖೆಯಿಂದ ಪ್ರಸಕ್ತ ಸಾಲಿನ ಹಿಂಗಾರು ಹಂಗಾಮಿಗೆ ವಿತರಿಸುವ ವಿವಿಧ ಬೀಜಗಳನ್ನು ರೈತರಿಗೆ ವಿತರಿಸಿ, ಮಾತನಾಡಿದರು. ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದ್ದು ಹಿಂಗಾರು ಬಿತ್ತನೆ ಪ್ರಾರಂಭವಾಗಿದೆ. ಕೃಷಿ ಇಲಾಖೆಯು ಹಿಂಗಾರು ಹಂಗಾಮಿಗೆ ಕಡಲೆ, ಗೋಧಿ, ಜೋಳ, ಮೆಕ್ಕೆಜೋಳ, ಶೇಂಗಾ ಹಾಗೂ ವಿವಿಧ ಬೆಳೆಗಳ ಬೀಜಗಳನ್ನು ರಿಯಾಯಿತಿ ದರದಲ್ಲಿ ರೈತರಿಗೆ ಮಾರಾಟ ಮಾಡಲಾಗುತ್ತಿದೆ. ರೈತರು ಇದರ ಸದುಪಯೋಗ ಪಡೆಯಬೇಕೆಂದು ಹೇಳಿದರು.

ಧಾರವಾಡ ಜಿಲ್ಲೆಯ ಬೀಜ ವಿತರಣಾ ಕೇಂದ್ರದ ವಿವರ: ರೈತ ಸಂಪರ್ಕ ಕೇಂದ್ರಗಳಾದ ಧಾರವಾಡ ತಾಲೂಕಿನಲ್ಲಿ ಅಳ್ಳಾವರ, ಧಾರವಾಡ, ಅಮ್ಮಿನಭಾವಿ, ಹೆಚ್ಚುವರಿ ಬೀಜ ವಿತರಣಾ ಕೇಂದ್ರ ನರೇಂದ್ರ, ಹೆಬ್ಬಳ್ಳಿ, ಉ.ಬೆಟಗೇರಿ. ಕಲಘಟಗಿ ತಾಲೂಕಿನಲ್ಲಿ ಕಲಘಟಗಿ, ತ.ಹೊನ್ನಳ್ಳಿ, ದುಮ್ಮವಾಡ. ಹುಬ್ಬಳ್ಳಿ ತಾಲೂಕಿನಲ್ಲಿ ಚಬ್ಬಿ ಶಿರಗುಪ್ಪಿ ಹುಬ್ಬಳ್ಳಿ. ಹೆಚ್ಚುವರಿ ಬೀಜ ವಿತರಣಾ ಕೇಂದ್ರ ನೂಲ್ವಿ, ಕುಸುಗಲ್ಲ, ಕೋಳಿವಾಡ, ಬಿಡನಾಳ. ಕುಂದಗೋಳ ತಾಲೂಕಿನಲ್ಲಿ ಕುಂದಗೋಳ, ಸಂಶಿ. ಹೆಚ್ಚುವರಿ ಬೀಜ ವಿತರಣಾ ಕೇಂದ್ರ ಯಲಿವಾಳ, ಶಿರೂರು, ನವಲಗುಂದ ತಾಲೂಕಿನಲ್ಲಿ ಅಣ್ಣಿಗೇರಿ, ಮೊರಬ್ಬ ಯರಗುಪಿ,್ಪ ಹೆಚ್ಚುವರಿ ಬೀಜ ವಿತರಣಾ ಕೇಂದ್ರ ಶಲವಡಿ, ನವಲಗುಂದಗಳಲ್ಲಿ ರೈತರಿಗೆ ಬೀಜ ವಿತರಣೆ ಮಾಡಲಾಗುತ್ತಿದೆ.

ರೈತರು ಕಡಲೆ, ಗೋಧಿ, ಜೋಳ, ಮೆಕ್ಕೆಜೋಳ, ಶೇಂಗಾ ಹಾಗೂ ವಿವಿಧ ಬೆಳೆಗಳನ್ನು ಹಿಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡುತ್ತಾರೆ. ಹಾಗಾಗಿ ಇಲಾಖೆ ವತಿಯಿಂದ ಸಹಾಯಧನದಡಿ ಬೀಜ ವಿತರಣೆ ಮಾಡಲು ಕಡಲೆ 28,799 ಕ್ವಿಂಟಲ್, ಗೋಧಿ 385 ಕ್ವಿಂಟಲ್, ಜೋಳ 300 ಕ್ವಿಂಟಲ್, ನೆಲಗಡಲೆ 276 ಕ್ವಿಂಟಲ್ ಹಾಗೂ ಇನ್ನಿತರೆ ಬೀಜಗಳನ್ನು ಒಳಗೊಂಡಂತೆ ಒಟ್ಟು 29,906 ಕ್ವಿಂಟಲ್ ಬಿತ್ತನೆ ಬೀಜ ವಿತರಣೆ ಗುರಿಯನ್ನು ಹೊಂದಲಾಗಿದೆ. ಈಗಾಗಲೇ ವಿವಿಧ ಇನ್ನಿತರೆ ಬೀಜ ಉತ್ಪಾದನಾ ಸಂಸ್ಥೆಗಳ ಬೀಜಗಳನ್ನು ಎಲ್ಲ ಬೀಜ ವಿತರಣಾ ಕೇಂದ್ರಗಳಲ್ಲಿ ದಾಸ್ತಾನು ಮಾಡಲಾಗಿದ್ದು ವಿತರಣೆ ಪ್ರಾರಂಭವಾಗಿದೆ ಎಂದು ಅವರು ಹೇಳಿದರು.

ಈ ಸಂದರ್ಭಲ್ಲಿ ಶಾಸಕ ಎನ್.ಎಚ್.ಕೋನರಡ್ಡಿ, ಜಿ.ಪಂ.ಸಿಇಓ ಭುವನೇಶ ಪಾಟೀಲ, ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ ಅಂತರವಳ್ಳಿ ಸೇರಿದಂತೆ ಕೃಷಿ ಇಲಾಖೆ ಅಧಿಕಾರಿಗಳು, ರೈತ ಮುಖಂಡರು, ರೈತರು ಹಾಗೂ ಇತರರು ಇದ್ದರು.

Tags: labor minister santhosh ladMinister Santhosh Ladsanthosh ladsanthosh lad about modisanthosh lad about pm modisanthosh lad angry onsanthosh lad latest newssanthosh lad latest statementsanthosh lad newssanthosh lad news todaysanthosh lad on bjpsanthosh lad questioned modisanthosh lad speechsanthosh lad statementsanthosh lad today newssanthosh lad vs narendra modiSantosh Ladsantosh lad agesantosh lad mlasantosh lad news
Previous Post

Santhosh Lad: ಅಕ್ಕ-ಕಫೆ ಉದ್ಘಾಟಿಸಿದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಎಸ್‌ ಲಾಡ್‌

Next Post

ಶಿಶುಗಳ ಪ್ರಾಣ ತೆಗೆದ ಕೆಮ್ಮಿನ ಔಷಧ !

Related Posts

ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ
ರಾಜಕೀಯ

ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

by ಪ್ರತಿಧ್ವನಿ
March 3, 2026
0

ಫೋನ್ ಕದ್ದಾಲಿಕೆ ಆರೋಪದ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪ್ರಕಟಿಸಿದ...

Read moreDetails
ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

March 3, 2026
ಖಮೇನಿ ಹತ್ಯೆಗೆ ಮಹಿಳೆಯರ ಸಂಭ್ರಮ: ಅಲ್ಲಿ ಮಹಿಳಾ ಕಾನೂನು ಎಷ್ಟು ಕಠಿಣವಾಗಿದೆ ಗೊತ್ತೆ ?

ಖಮೇನಿ ಹತ್ಯೆಗೆ ಮಹಿಳೆಯರ ಸಂಭ್ರಮ: ಅಲ್ಲಿ ಮಹಿಳಾ ಕಾನೂನು ಎಷ್ಟು ಕಠಿಣವಾಗಿದೆ ಗೊತ್ತೆ ?

March 3, 2026
ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

March 3, 2026
ಇರಾನ್‌ನಿಂದ ದಾಳಿಗೊಳಗಾದ ಮುಸ್ಲಿಂ ರಾಷ್ಟ್ರಗಳಿಗೆ ಮೋದಿ ಕರೆ : ಭಾರತದ ಬೆಂಬಲ ತಿಳಿಸಿದ ಪ್ರಧಾನಿ..

ಇರಾನ್‌ನಿಂದ ದಾಳಿಗೊಳಗಾದ ಮುಸ್ಲಿಂ ರಾಷ್ಟ್ರಗಳಿಗೆ ಮೋದಿ ಕರೆ : ಭಾರತದ ಬೆಂಬಲ ತಿಳಿಸಿದ ಪ್ರಧಾನಿ..

March 3, 2026
Next Post
ಶಿಶುಗಳ ಪ್ರಾಣ ತೆಗೆದ ಕೆಮ್ಮಿನ ಔಷಧ !

ಶಿಶುಗಳ ಪ್ರಾಣ ತೆಗೆದ ಕೆಮ್ಮಿನ ಔಷಧ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada